ವಿದ್ಯಾರ್ಥಿ ಜೀವನದಲ್ಲಿ ಕಾನೂನು ಅರಿವು ಅವಶ್ಯಕ: ಬೆಂಗಳೂರು ವಿವಿ ಕುಲಪತಿ ಡಾ.ಐ.ಎಸ್.ಶಿವಕುಮಾರ್
ಬೆಂಗಳೂರು ವಿವಿ ಕುಲಪತಿ

ಬೆಂಗಳೂರು, ಎ.3: ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ಹಂತದಲ್ಲೂ ಕಾನೂನಿನ ಅರಿವು, ಆಚರಣೆ ಮುಖ್ಯವಾಗಿರುತ್ತದೆ. ಹೀಗಾಗಿ, ಇಂತಹ ಕಾರ್ಯಕ್ರಮಗಳು ಇನ್ನು ಹೆಚ್ಚು ಹೆಚ್ಚು ಎಲ್ಲ ಹಂತದ ವಿದ್ಯಾರ್ಥಿಗಳಿಗೂ ಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಐ.ಎಸ್.ಶಿವಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಬೆಂವಿವಿಯ ಪ್ರೊ.ಕೆ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಮಹಿಳಾ ಅಧ್ಯಯನ ಕೇಂದ್ರ ಆಯೋಜಿಸಿದ್ದ ಒಂದು ದಿನದ ಮಾನವ ಹಕ್ಕುಗಳ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಕಾರ್ಯಾಗಾರದ ಪ್ರಯೋಜನವನ್ನು ಮಹಿಳಾ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಮತ್ತು ಅನೇಕ ಬೇರೆ ಬೇರೆ ವಿಭಾಗದ ಸುಮಾರು 250 ವಿದ್ಯಾರ್ಥಿಗಳು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕ ಆರ್.ಸಿದ್ದಪ್ಪ, ವಿವೇಕಾನಂದ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಬಿ.ಕೆಂಪೇಗೌಡ, ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಿ.ಸಿ.ರಾಮಚಂದ್ರ, ಶ್ರೀವೇಣಿ, ಡಾ.ಸುದೇಷ್ಣ ಮುಖರ್ಜಿ, ಡಾ.ಸಿ.ಡಿ.ವೆಂಕಟೇಶ್ ಉಪಸ್ಥಿತರಿದ್ದರು.





