ಕುತ್ಯಾರು: ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕಾಪು, ಎ.3: ಕುತ್ಯಾರಿನಲ್ಲಿ ಮಂಗಳವಾರ ನಡೆದ ಕುತ್ಯಾರು- ಕಳತ್ತೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಪಕ್ಷದ ಕಾರ್ಯ ಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾಪು ಶಾಸಕ ವಿನಯ ಕುಮಾರ್ ಸೊರಕೆ ಕಾರ್ಯಕರ್ತರಿಗೆ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಬಿ.ಶೆಟ್ಟಿ, ದಿವಾಕರ ಡಿ ಶೆಟ್ಟಿ, ಗ್ರಾಪಂ ಸದಸ್ಯರಾದ ರಾಜೇಶ್ ಕುಲಾಲ್, ಭಾರತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಕಾಪು ದಿವಾಕರ ಶೆಟ್ಟಿ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಬೆಳಪು ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Next Story





