Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್...

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಕಛೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ3 April 2018 8:14 PM IST
share
ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಕಛೇರಿ ಉದ್ಘಾಟನೆ

ಬೆಳ್ತಂಗಡಿ,ಎ.3 : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇಡೀ ದೇಶದಲ್ಲಿ ಇತಿಹಾಸ ಎಂಬಂತೆ ಚುನಾವಣಾ ಪ್ರಣಾಳಿಕೆಗಳನ್ನು ಇಡೇರಿಸಿ ಬಡವರ, ಕೃಷಿಕರ, ವಿದ್ಯಾರ್ಥಿಗಳ, ಮಹಿಳೆಯರ ಮತ್ತು ಎಲ್ಲಾ ಸಮುದಾಯಗಳ ನೋವನ್ನು, ಬಡತನವನ್ನು ದೂರಮಾಡಿದ್ದಲ್ಲದೆ ತಾಲೂಕಿನಲ್ಲಿಯೂ ದಾಖಲೆಗಳ ಕಾಮಗಾರಿ ನಡೆದಿದ್ದು, ಇದುವೇ ತಾಲೂಕಿನಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದ್ದಾರೆ.

ಅವರು ಮಂಗಳವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಮುಖ್ಯಮಂತ್ರಿಗಳಿಗೆ ಅನ್ನದಾತ ಎಂಬ ಬಿರುದನ್ನು ರಾಜ್ಯದ ಜನ ನೀಡಿದ್ದಾರೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ಮೂಲಕ ಮಹಿಳೆಯರನ್ನು ಸ್ವಾವಲಂಬಿ ಜೀವನ ನಡೆಸುವಂತೆ ಮಾಡಿದ್ದಾರೆ. ರೈತರ ಸಾಲಮನ್ನ, ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್, ಉಚಿತ ಅಕ್ಕಿ ವಿತರಣೆ, ಇನ್ನಿತರ ಹತ್ತುಹಲವು ಕಾರ್ಯಕ್ರಮಗನ್ನು ಜನರಿಗೆ ನೀಡಿದ್ದಾರೆ. 94ಸಿ, 94ಸಿಸಿ ಕಾರ್ಯಕ್ರಮವನ್ನು ರಾಜ್ಯಾಧ್ಯಂತ ಜಾರಿಗೊಳಿಸಿದ್ದರಿಂದ ಸಾವಿರಾರು ಕುಟುಂಬಗಳಿಗೆ ನಿವೇಶನ ಮತ್ತು ಮನೆ ನಿರ್ಮಿಸಲು ಸಹಾಯಕವಾಗಿದೆ. ಮಹಿಳೆಯರಿಗೆ ಸ್ವಉದ್ಯೋಗಕ್ಕೆ 3ಲಕ್ಷ ರೂ. ತನಕ ಬಡ್ಡಿ ರಹಿತ ಸಾಲ ನೀಡಿರುವುದು ದೊಡ್ಡ ಕೊಡುಗೆಯಾಗಿದೆ. ತಾಲೂಕಿನಲ್ಲಿ 21ಸಾವಿರಕ್ಕೂ ಅಧಿಕ 94ಸಿ ಹಾಗೂ 35ಸಾವಿರಕ್ಕೂ ಅಧಿಕ ಅಕ್ರಮ ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಸಿದ್ದು ಯಾವುದೇ ಪಕ್ಷಭೆದವಿಲ್ಲದೆ ಈ ಕಾರ್ಯ ಮಾಡಿದ್ದೇನೆ. ಒಂದು ಸಾವಿರ ಕೋಟಿಗೂ ಅಧಿಕ ಅನುದಾನ ತಾಲೂಕಿಗೆ ಮಂಜೂರುಗೊಂಡಿದ್ದು ಪ್ರತೀ ಹಳ್ಳಿ ಹಳ್ಳಿಗಳ ರಸ್ತೆ, ಸೇತುವೆ, ಕಟ್ಟಡಗಳು ನಿರ್ಮಾಣಗೊಂಡಿದೆ ಎಂದು ವಿವರಿಸಿದರು. 

ಇಂತಹ ಅಭಿವೃದ್ದಿಯನ್ನು ನೋಡಲಾರದೆ ಬಿಜೆಪಿಯವರು ಆರೋಪಗಳನ್ನು ಮಾಡಲು ಮುಂದಾಗುತ್ತಿದ್ದಾರೆ. ಆದರೆ ತಾಲೂಕಿನ ಜನರಿಗೆ ನಾನು ಮಾಡಿರುವ ಅಭಿವೃದ್ದಿ ಕಾರ್ಯ ಏನು ಎಂದು ತಿಳಿದಿದೆ. ಮುಖ್ಯಮಂತ್ರಿಗಳು ಒಳ್ಳೆಯ ಕಾರ್ಯದ ಮೂಲಕ ಜನರ ಬಳಗೆ ಹೋದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ತಪ್ಪು ಕೆಲಸ ಮಾಡಿ ಜೈಲಿನತ್ತ ಹೋಗಿದ್ದಾರೆ ಎಂದರು. 

ಜಿ.ಪಂ ಸದಸ್ಯ ಶಾಹುಲ್ ಹಮೀದ್ ಮಾತನಾಡಿ ತಾಲೂಕಿನಲ್ಲಿ ಶಾಸಕ ಕೆ. ವಸಂತ ಬಂಗೇರ ರವರು ಮಾಡಿದ ಅಭಿವೃದ್ದಿ ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಭ್ರಷ್ಟಾಚಾರ ರಹಿತ ತಾಲೂಕಿನಲ್ಲಿ ಎಲ್ಲಾ ಸಮುದಾಯದೊಂದಿಗೆ ಸಮಾನ ಭಾವನೆಯಿಂದ ನಡೆದುಕೊಂಡದ್ದರಿಂದ  ತಾಲೂಕಿನಲ್ಲಿ ಎಂದೂ ಕೋಮು ಸಂಘರ್ಷ ನಡೆದಿಲ್ಲ. ಮುಂದೆಯೂ ಇಂತಹ ಶಾಸಕರು ತಾಲೂಕಿಗೆ ಅಗತ್ಯವಿದ್ದು ಕೋಮು ಸಂಘರ್ಷ ಸೃಷ್ಠಿಸಲು ಪ್ರಯತ್ನಿಸುವ ಯಾವುದೇ ಪಕ್ಷಗಳಿಗೆ ಅಧಿಕಾರ ನೀಡಬೇಡಿ ಎಂದರು.

ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಇ. ಸುಂದರ ಗೌಡ, ಜಿಲ್ಲಾ ಉಸ್ತುವಾರಿ ವಿಜಯಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಮಾತನಾಡಿದರು. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಶ್ರೀನಿವಾಸ ವಿ.ಕಿಣಿ ಅಧ್ಯಕ್ಷತೆ ವಹಿಸಿದ್ದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಕೆಪಿಸಿಸಿ ಸದಸ್ಯರಾದ ಕೆ. ರಾಮಚಂದ್ರ ಗೌಡ, ಪಿತಾಂಬರ ಹೇರಾಜೆ, ಜಿ.ಪಂ ಸದಸ್ಯರಾದ ಪಿ. ಧರಣೇಂದ್ರ ಕುಮಾರ್, ಶೇಖರ್ ಕುಕ್ಕೇಡಿ, ಇಂಟಕ್ ಅಧ್ಯಕ್ಷ ಸುಭಾಶ್ಚಂದ್ರ ರೈ, ಕಿಸಾನ್ ಘಟಕದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಪಂಚಾಯತ್ ರಾಜ್ ಸಂಘಟನಾ ಘಟಕದ ಅಧ್ಯಕ್ಷ ಜಯವಿಕ್ರಮ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಯೂಬ್, ಎಸ್‍ಸಿ ಘಟಕದ ಅಧ್ಯಕ್ಷ ಶ್ರೀಧರ್ ಕಳೆಂಜ, ಕೃಷಿಕ ಸಮಾಜದ ಅಧ್ಯಕ್ಷ ಮಹಾವೀರ, ಜಿಲ್ಲಾ ಉಸ್ತುವಾರ ಸೈಮಾನ್, ಎಪಿಎಂಸಿ ಅಧ್ಯಕ್ಷ ಸತೀಶ್ ಕಾಶಿಪಟ್ಣ ಉಪಸ್ಥಿತರಿದ್ದರು. ರಾಜಶೇಖರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X