ಎಪ್ರಿಲ್ 4 ರಂದು ರಾಜ್ಯಕ್ಕೆ ಮುಖ್ಯ ಚುನಾವಣಾ ಆಯುಕ್ತರ ಭೇಟಿ
ಬೆಂಗಳೂರು, ಎ.3: ಭಾರತ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ಹಾಗೂ ಚುನಾವಣಾ ಆಯುಕ್ತರಾದ ಸುನಿಲ್ ಅರೋರಾ ಮತ್ತು ಅಶೋಕ್ ಲವಾಸ ಅವರಿರುವ ತಂಡವು ಎಪ್ರಿಲ್ 4 ರಂದು ಬೆಂಗಳೂರಿಗೆ ಭೇಟಿ ನೀಡಿ, ಎ.6ರವರೆಗೆ 3 ದಿನಗಳ ಕಾಲ ಇಲ್ಲೇ ಇರಲಿದೆ.
ಈ ಅವಧಿಯಲ್ಲಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಮುಖ್ಯ ಚುನಾವಣಾಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಹಾಗೆಯೇ, ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story





