ಬ್ರಹ್ಮಾವರ : ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
ಬ್ರಹ್ಮಾವರ, ಎ.3: ಹೇರಾಡಿ ಬಳಿ ಎ.2ರಂದು ರೈಲೊಂದು ಢಿಕ್ಕಿ ಹೊಡೆದ ಪರಿಣಾಮ ರೈಲ್ವೆ ಹಳಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕಾವಾಡಿಯ ನರಸಿಂಹ ಎಂಬವರ ಮಗ ನಾರಾಯಣ(37) ಎಂದು ಗುರುತಿಸಲಾಗಿದೆ. ಇವರು ಮಧ್ಯಾಹ್ನ 1.30ರಿಂದ ರಾತ್ರಿ 10:20ರ ಮಧ್ಯಾವಧಿಯಲ್ಲಿ ಕೆಲಸ ಮುಗಿಸಿಕೊಂಡು ಬಾರ್ಕೂರು ರೈಲ್ವೆ ನಿಲ್ದಾಣದಿಂದ ಕಾವಡಿಯ ಮನೆಗೆ ರೈಲ್ವೆ ಹಳಿಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ನಾರಾಯಣ ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





