Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ತಬ್ಬಲಿಯ ಶಿಕ್ಷಣಕ್ಕೆ ಆಸರೆಯಾದ...

ತುಮಕೂರು: ತಬ್ಬಲಿಯ ಶಿಕ್ಷಣಕ್ಕೆ ಆಸರೆಯಾದ ಜಿಲ್ಲಾಧಿಕಾರಿ ಕೆ.ಪಿ.ಮೋಹನ್‍ರಾಜ್

ವಾರ್ತಾಭಾರತಿವಾರ್ತಾಭಾರತಿ3 April 2018 11:36 PM IST
share
ತುಮಕೂರು: ತಬ್ಬಲಿಯ ಶಿಕ್ಷಣಕ್ಕೆ ಆಸರೆಯಾದ ಜಿಲ್ಲಾಧಿಕಾರಿ ಕೆ.ಪಿ.ಮೋಹನ್‍ರಾಜ್

ತುಮಕೂರು.ಏ.03: ಐಎಎಸ್ ಅಧಿಕಾರಿಗಳೆಂದರೆ ಕೇವಲ ಕಾನೂನಿನ ಅಡಿಯಲ್ಲಿಯೇ ಕೆಲಸ ಮಾಡುವವರು, ಮಾನವೀಯತೆ, ಅನುಕಂಪಕ್ಕೆ ಇವರ ಬಳಿ ಅವಕಾಶವೇ ಇಲ್ಲ ಎಂಬ ಮಾತುಗಳನ್ನು ಅನೇಕ ಜನ ಐಎಎಸ್ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡಿದಾಗ ಅನ್ನಿಸುತ್ತದೆ. ಇದಕ್ಕೆ ತದ್ವಿರುದ್ದವೆಂಬಂತೆ ತುಮಕೂರು ಜಿಲ್ಲಾಧಿಕಾರಿ ಕೆ.ಪಿ.ಮೋಹನ್‍ರಾಜ್ ಅವರ ವರ್ತನೆಯಿದ್ದು, ತಂದೆಯಿಲ್ಲದೆ, ತಾಯಿ ಮತ್ತು ತಾತನ ಆಶ್ರಯದಲ್ಲಿ ಬೆಳೆಯುತ್ತಿರುವ ತಬ್ಬಲಿ ಹುಡುಗನೊಬ್ಬನ ಚುರುಕುತನವನ್ನು ಗಮನಿಸಿ, ಆತನ ಇಚ್ಚೆಯಂತೆ, ನಗರದಲ್ಲಿ ಓದಲು ಅಗತ್ಯವಿರುವ ವ್ಯವಸ್ಥೆ ಮಾಡಲು ಮೋಹನ್‍ರಾಜ್ ಮುಂದೆ ಬಂದಿದ್ದಾರೆ. 

ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಡುವಿಲ್ಲದ ಕೆಲಸದ ನಡುವೆಯೂ ಏಪ್ರಿಲ್ 02ರ ಸೋಮವಾರ ತಮ್ಮ ಕುಟುಂಬ ಸಮೇತ ಸಿದ್ದಗಂಗಾ ಮಠಕ್ಕೆ ತೆರಳಿ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆಯುವ ವೇಳೆ, ತಮ್ಮ ತಾಯಿ, ತಾತನೊಂದಿಗೆ ಮಠಕ್ಕೆ ಆಗಮಿಸಿದ್ದ 7ನೇ ತರಗತಿಯ ಬಾಲಕನೊಬ್ಬ ಸ್ವಾಮೀಜಿಯವರನ್ನು ನೋಡಲೆಬೇಕೆಂಬ ಹಠದಲ್ಲಿ ಪರದಾಡುತ್ತಿದುದ್ದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಆತನಿಗೆ ಸ್ವಾಮೀಜಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದರು.

ಈ ವೇಳೆ ಹುಡುಗನ ಚುರುಕುತನ, ಆತನ ವಾಕ್ಚಾತುರ್ಯ, ಒಳ್ಳೆಯ ನಡವಳಿಕೆಯನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಆತನನ್ನು ವಿಚಾರಿಸಿದಾಗ ತಾನು ಡಾನ್ ಬೋಸ್ಕೋ ಶಾಲೆಯಲ್ಲಿ ಓದುತ್ತಿರುವ ಪುನೀತ್, ತಾನು ಉನ್ನತ ವ್ಯಾಸಾಂಗವನ್ನು ಪ್ರತಿಷ್ಠಿತ ಶಾಲೆಯಲ್ಲಿ ಮಾಡಬೇಕೆಂಬ ಇಚ್ಚೆಯನ್ನು ವ್ಯಕ್ತಪಡಿಸಿದ್ದಾನೆ. ಬಾಲಕನ ಇಚ್ಚೆಯನ್ನು ಅರಿತ ಜಿಲ್ಲಾಧಿಕಾರಿಗಳು, ಅತನ ಪೋಷಕರಿಗೆ ಕಚೇರಿಗೆ ಬಂದು ಕಾಣುವಂತೆ ಸಲಹೆ ನೀಡಿದ್ದರು.
ಜಿಲ್ಲಾಧಿಕಾರಿಗಳ ಸಲಹೆಯಂತೆ ತಮ್ಮ ಕಚೇರಿಗೆ ಬಂದ ಪುನೀತ್ ಮತ್ತು ಆತನ ಪೋಷಕರೊಂದಿಗೆ ಮಾತನಾಡಿದ ಕೆ.ಪಿ.ಮೋಹನ್‍ರಾಜ್, ಪೋಷಕರು ಹಾಗೂ ಬಾಲಕನ ಇಚ್ಚೆಯಂತೆ ಆತನ ಸಂಪೂರ್ಣ ಓದಿನ ಖರ್ಚು, ವೆಚ್ಚವನ್ನು ವಹಿಸಿಕೊಳ್ಳುವ ಭರವಸೆ ನೀಡಿದ್ದು, ಹುಡುಗನ ಮುಂದಿನ ಶೈಕ್ಷಣಿಕ ವರ್ಷದಿಂದ ರೆಸಿಡೆನ್ಸಿಯಲ್ ಶಾಲೆಯಲ್ಲಿ ಕಲಿಯಲು ಅವಕಾಶ ಮಾಡಿಕೊಡುವ ವಾಗ್ದಾನ ಮಾಡಿದ್ದಾರೆ.

ಪುನೀತ್ ನ ಊರು ಕೋರಾ ಹೋಬಳಿ ಅಂಚೆಹಳ್ಳಿ ಗ್ರಾಮ. ಆತ ಚಿಕ್ಕವನಿರುವಾಗಲೇ ಅಪಘಾತದಲ್ಲಿ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ರಾಧಾಮಣಿ ಹಾಗೂ ತಾತನ ಆರೈಕೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಪುನೀತನ ತಾಯಿ ಖಾಸಗಿ ಶಾಲೆಯಲ್ಲಿ ಆಯಾ ಕೆಲಸ ಮಾಡುತ್ತಿದ್ದು, ಮಗನನ್ನು ಡಾನ್‍ಬಾಸ್ಕೋ ಶಾಲೆಯವರು ನಡೆಸುವ ಅನಾಥಾಲಯದಲ್ಲಿ ಇಟ್ಟು ವಿದ್ಯಾಬ್ಯಾಸ ಮಾಡಿಸುತ್ತಿದ್ದಾರೆ. ಪ್ರಸ್ತುತ ಸದರಿ ಶಾಲೆಯಲ್ಲಿ ಕನ್ನಡ ಮಾದ್ಯಮ ಮಾತ್ರ ಕಲಿಯಲು ಅವಕಾಶವಿದ್ದು, ಉನ್ನತ ವಿದ್ಯಾಭ್ಯಾಸದ ಕನಸು ಹೊತ್ತಿರುವ ಈತನಿಗೆ ಒಳ್ಳೆಯ ಶಾಲೆಯಲ್ಲಿ ಅಂಗ್ಲಮಾಧ್ಯಮದಲ್ಲಿ ಕಲಿಯಲು ಅವಕಾಶ ಮಾಡಬೇಕೆಂಬುವುದು ಜಿಲ್ಲಾಧಿಕಾರಿಗಳ ಮನದ ಇಂಗಿತವಾಗಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X