ಮಂಡ್ಯ: ದಾಖಲೆ ಇಲ್ಲದ 4 ಲಕ್ಷ ರೂ. ವಶ
ಮಂಡ್ಯ, ಎ.4: ನಗರದ ಜ್ಯೋತಿ ಇಂಟರ್ ನ್ಯಾಷನಲ್ ಹೊಟೇಲ್ ಬಳಿ ಹೆದ್ದಾರಿಯ ಚೆಕ್ಪೋಸ್ಟ್ನಲ್ಲಿ ಕಾರಿನಲ್ಲಿ ದಾಖಲೆ ಇಲ್ಲದ 4 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರನ್ನು ತಡೆದು ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ. ಕಾರಿನಲ್ಲಿದ್ದವರು ಜಿಗಣಿ ಮೂಲದವರು ಎನ್ನಲಾಗಿದೆ. ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story