ಹನೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಹನೂರು,ಎ.07: ಪಟ್ಟಣದ ಶ್ರೀ ಮಲೆಮಹದೇಶ್ವರ ಕ್ರೀಡಾಂಗಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕ್ರೀಡಾಂಗಣದ ಮೂಲೆಯಲ್ಲಿರುವ ಹೊಂಗೆ ಮರದಲ್ಲಿ ಸುಮಾರು 50 ವರ್ಷದ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಮೃತ ವ್ಯಕ್ತಿಯು ಟೀ ಶರ್ಟ್ ಹಾಗೂ ಪ್ಯಾಂಟ್ ಧರಿಸಿದ್ದಾನೆ. ಘಟನಾ ಸ್ಥಳದಲ್ಲಿ ಬ್ಯಾಂಗ್ ಪತ್ತಯಾಗಿದ್ದು, ಅದರಲ್ಲಿ ತಮಿಳು ಪತ್ರಿಕೆ, ಷರ್ಟ್ ಹಾಗೂ ಕನ್ನಡಕ ದೊರೆತಿದೆ. ಘಟನಾ ಸ್ಥಳಕ್ಕೆ ಹನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರಕ್ಕೆ ಸಾಗಿಸಿದ್ದಾರೆ. ಈ ಸಂಬಂಧ ಹನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





