Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ನಾನು ಚೇತನ್ ನಾವೆಲ್ಲರೂ ಚೇತನ್’:...

‘ನಾನು ಚೇತನ್ ನಾವೆಲ್ಲರೂ ಚೇತನ್’: ಬಿಜೆಪಿ ವಿರುದ್ಧ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 April 2018 6:08 PM IST
share

ಬೆಂಗಳೂರು, ಏ.7: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಬಿಡುಗಡೆ ಮಾಡಿರುವ ಚುನಾವಣಾ ಚಾರ್ಜ್‌ಶೀಟ್‌ನಲ್ಲಿ ಚಿತ್ರನಟ ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ನಕ್ಸಲ್ ಉಗ್ರರಿಗೆ ಹೋಲಿಸಿರುವುದನ್ನು ಪ್ರಗತಿಪರ ಸಂಘಟನೆಗಳು ಖಂಡಿಸಿವೆ.

ಶನಿವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು, ಜಮಾಯಿಸಿದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ‘ನಾನು ಚೇತನ್ ನಾವೆಲ್ಲರು ಚೇತನ್’ ಎಂಬ ಶೀರ್ಷಿಕೆಯಡಿ ರಾಜ್ಯ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು. ದಿಡ್ಡಳ್ಳಿಯ ಗಿರಿಜನರು ಮತ್ತು ಆದಿವಾಸಿಗಳಿಗೆ ನೆಲೆ ಕಲ್ಪಿಸಲು ನಡೆದ ಹೋರಾಟಕ್ಕೂ ನಕ್ಸಲ್ ಚಟುವಟಿಕೆಗೂ ಯಾವುದೇ ಸಂಬಂಧವಿಲ್ಲ. ಬುದ್ದ, ಬಸವ, ಅಂಬೇಡ್ಕರ್ ಅವರ ತತ್ವದಂತೆ ಪ್ರಗತಿ ಪರ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಚೇತನ್ ಅವರನ್ನು ನಕ್ಸಲ್ ಎಂದು ಆರೋಪ ಮಾಡಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಸಂಪತ್ ಸುಬ್ಬಯ್ಯ, ಚಿತ್ರನಟ ಚೇತನ್‌ರವರ ಹೋರಾಟದ ಫಲವಾಗಿ ದಿಡ್ಡಹಳ್ಳಿಯ 528 ಆದಿವಾಸಿ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಆದರೆ, ಬಿಜೆಪಿ ಬಿಡುಗಡೆ ಮಾಡಿರುವ ಆರೋಪ ಪಟ್ಟಿಯಲ್ಲಿ ನಕ್ಸಲ್ ಎಂದು ಹೇಳಲಾಗಿದೆ. ಚೇತನ್ ತೇಜೋವಧೆ ಮಾಡುವ ದುರುದ್ದೇಶದಿಂದ ಈ ರೀತಿ ಆರೋಪಿಸಲಾಗಿದೆ ಎಂದು ದೂರಿದರು.

ಬಿಜೆಪಿಯವರು ಹೋರಾಟಗಾರರ ಮೇಲೆ ಇಲ್ಲ ಸಲ್ಲದ ಆರೋಪವಹಿಸಿ, ಹೋರಾಟಗಾರರನ್ನು ಹತ್ತಿಕ್ಕುವ ಕೆಲಸದಲ್ಲಿ ತೊಡಗಿದ್ದಾರೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಂದ ಮೇಲೆ ದಲಿತರು, ಹಿಂದುಳಿದವರು ಹಾಗೂ ಅಮಾಯಕರ ಮೇಲೆ ದೌರ್ಜನ್ಯ, ಹಲ್ಲೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಲದೆ, ಬಿಜೆಪಿಯ ಕೇಂದ್ರ ಸಚಿವರು ಸಂವಿಧಾನ ಬದಲಾವಣೆ ಮಾಡುವ ಮಾತುಗಳನ್ನಾಡುತ್ತಾರೆ. ಬಿಜೆಪಿ ನಾಯಕರು ಮೊದಲು ದಲಿತ, ಶೋಷಿತಪರ ಹೋರಾಟಗಾರರು ಯಾರು ಎಂಬುದನ್ನು ಅರಿತುಕೊಳ್ಳಬೇಕಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಬಿಡುಗಡೆ ಮಾಡಿರುವ ಚುನಾವಣಾ ಚಾರ್ಜ್‌ಶೀಟ್‌ನಲ್ಲಿ ಮಾಡಿರುವ ದೂರುಗಳನ್ನು ಬಿಜೆಪಿ ಈ ಕೂಡಲೆ ಹಿಂಪಡೆದು ಬಿಜೆಪಿ ನಾಯಕರು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾಂದ್ಯಂತ ತೀವ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

ಮುತ್ತಿಗೆ ಇಲ್ಲ: ಬಿಜೆಪಿ ಆರೋಪ ಖಂಡಿಸಿ ಮಲ್ಲೇಶ್ವರಂನ ಬಿಜೆಪಿ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ತಡೆದ ಕಾರಣ ಪ್ರತಿಭಟನೆ ಅಂತ್ಯಗೊಳಿಸಿದರು. ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಪ್ರವೀಣ್, ಸಿದ್ದಾರ್ಥ, ಮೂರ್ತಿ, ಮೋಹನ್, ವೀವೇಕ್ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X