Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿಮ್ಮಪ್ಪನಾಣೆಗೂ ನೀವು ಚಾಮುಂಡೇಶ್ವರಿ...

ನಿಮ್ಮಪ್ಪನಾಣೆಗೂ ನೀವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವುದಿಲ್ಲ: ಸಿದ್ದರಾಮಯ್ಯರಿಗೆ ಕುಮಾರಸ್ವಾಮಿ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ7 April 2018 7:00 PM IST
share
ನಿಮ್ಮಪ್ಪನಾಣೆಗೂ ನೀವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವುದಿಲ್ಲ: ಸಿದ್ದರಾಮಯ್ಯರಿಗೆ ಕುಮಾರಸ್ವಾಮಿ ತಿರುಗೇಟು

ಹುಬ್ಬಳ್ಳಿ, ಎ. 7: ‘ನಿಮ್ಮಪ್ಪನಾಣೆಗೂ ನೀವು(ಸಿಎಂ) ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಬನ್ನಿ ನೋಡೋಣ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಕುಮಾರಸ್ವಾಮಿ ಅವ್ರಪ್ಪನಾಣೆಗೂ ಮುಖ್ಯಮಂತ್ರಿ ಆಗೋದಿಲ್ಲ ಅಂತ ಹೇಳ್ತಾರೆ. ಆದರೆ, ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಯ್ಕೆಯಾಗಲಿ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರವಷ್ಟೇ ಅಲ್ಲ, ಬಾದಾಮಿ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ, ಅವರ ವಿರುದ್ಧ ಪ್ರಬಲ ಸ್ಪರ್ಧೆ ನೀಡಲು ಜೆಡಿಎಸ್ ಸಜ್ಜಾಗಿದೆ ಎಂದು ಕುಮಾರಸ್ವಾಮಿ ಇದೇ ವೇಳೆ ಎಚ್ಚರಿಕೆ ನೀಡಿದರು.

‘ಎಚ್‌ಡಿಕೆ ಸೋಲಿಸುವುದು ನನಗೆ ಗೊತ್ತು’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕಾಂಗ್ರೆಸ್‌ನವರು ಇರೋದೇ ನನಗೆ ವಿರೋಧ ಮಾಡಲು. ಸಿದ್ದರಾಮಯ್ಯ ತಮ್ಮ ಅಧಿಕಾರ ದುರ್ಬಳಕೆ ಮಾಡುತ್ತಿದ್ದು, ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.

ರಾಷ್ಟ್ರೀಯ ಪಕ್ಷಗಳಿಗೆ ನಡುಕ: ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತ ನೋಡಿ ರಾಜ್ಯದ ಜನ ಬೇಸತ್ತಿದ್ದಾರೆ. ಹೀಗಾಗಿ, ಜೆಡಿಎಸ್ ಪರ ಕರ್ನಾಟಕದ ಜನರ ಒಲವು ಹೆಚ್ಚಾಗಿದೆ. ಇದನ್ನು ಕಂಡು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ನಡುಕ ಉಂಟಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 113ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ. ಯಾವ ಪಕ್ಷಗಳ ಬೆಂಬಲವಿಲ್ಲದೆ ರಾಜ್ಯದಲ್ಲಿ ಸ್ವತಂತ್ರವಾಗಿ ಸರಕಾರ ರಚನೆ ಮಾಡುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಉತ್ತರ ಕರ್ನಾಟಕದಲ್ಲಿ 45 ಸ್ಥಾನ, ಹಳೆ ಮೈಸೂರು ಭಾಗದಲ್ಲಿ 75 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು.

ನನಗೆ ಯಾವುದೇ ಪಕ್ಷಗಳನ್ನು ಸೋಲಿಸುವ ಉದ್ದೇಶವಿಲ್ಲ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವುದೊಂದೇ ನನ್ನ ಗುರಿ ಎಂದ ಕುಮಾರಸ್ವಾಮಿ, ನಾವು ಕುಟುಂಬ ರಾಜಕಾರಣ ಮಾಡುವುದಿಲ್ಲ. ಚನ್ನಪಟ್ಟಣದಲ್ಲಿ ಅನಿತಾ ಕುಮಾರಸ್ವಾಮಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಒತ್ತಡವಿತ್ತು. ಹಾಗೆಯೇ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ಶೀಘ್ರವೇ ಸ್ಪಷ್ಟ ನಿರ್ಧಾರ ಪ್ರಕಟಿಸುತ್ತೇವೆ ಎಂದರು.

ಮೋದಿಗೆ ಈ ಪ್ರಶ್ನೆ ಕೇಳಿ..
‘ನನ್ನ ಕರ್ಮಭೂಮಿ ರಾಮನಗರ. ಹೀಗಾಗಿ ಅಲ್ಲಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಚನ್ನಪಟ್ಟಣ ಕ್ಷೇತ್ರದ ಆಯ್ಕೆ ಮಾಡಿಕೊಳ್ಳಲಾಗಿದೆ. ನನ್ನನ್ನು ಪ್ರಶ್ನಿಸುತ್ತಿರುವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಆ ಪ್ರಶ್ನೆಯನ್ನ ನರೇಂದ್ರ ಮೋದಿಗೆ ಕೇಳಬೇಕು’
-ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X