ಸಿ.ಡಿ. ಪರಿಶೀಲಿಸಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು: ಚುನಾವಣಾಧಿಕಾರಿ
ನೀತಿ ಸಂಹಿತೆ ಉಲ್ಲಂಘನೆ ಆರೋಪ

ಮಂಗಳೂರು, ಎ. 7: ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಸಿ.ಡಿ.ಯನ್ನು ಪರಿಶೀಲಿಸಿ ಚುನಾವಣಾ ಆಯೋಗದ ಮೂಲಕ ದೂರು ದಾಖಲಿಸಲು ಸೂಚನೆ ನೀಡಿರುವುದಾಗಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿ ಮಹೇಶ್ ಕರ್ಜಗಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸಂವಿಧಾನಕ್ಕೆ ಗೌರವ ನೀಡದ ಯಾವೂದೇ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ
ಸಂವಿಧಾನಕ್ಕೆ ಗೌರವ ನೀಡದ ವ್ಯಕ್ತಿ ಎಷ್ಟೇ ದೊಡ್ಡವನಾಗಿದ್ದರೂ ಆತನ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ. ‘ನೀತಿ ಸಂಹಿತೆಗೆ ಮಣ್ಣು ಹಾಕಿ..’ ಎಂದರೆ ಅದನ್ನು ಪಾಲಿಸ ಬೇಕಾದವರು ಯಾರು? ಸಂವಿಧಾನವನ್ನು ಗೌರವಿಸಬೇಕಾದುದು ಎಲ್ಲರ ಕರ್ತವ್ಯ. ನೀತಿ ಸಂಹಿತೆಯ ಪಾಲನೆಯೂ ಎಲ್ಲರ ಹೊಣೆಗಾರಿಕೆಯಾಗಿದೆ. ಮುಕ್ತ, ಪಾರದರ್ಶಕ ರೀತಿಯಲ್ಲಿ ಚುನಾವಣೆ ನಡೆಸಲು ಚುನಾವನಾ ಆಯೋಗ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ ಎಂದು ಚುನಾವಣಾಧಿಕಾರಿ ಮಹೇಶ್ ಕರ್ಜಗಿ ತಿಳಿಸಿದ್ದಾರೆ.
Next Story





