ಉಡುಪಿ: ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ಸ್ವೀಪ್ ಮಾಹಿತಿ

ಉಡುಪಿ, ಎ. 7: ಮತದಾರರು ಯಾವುದೇ ಪ್ರಲೋಭನೆ, ಒತ್ತಡಗಳಿಗೆ ಒಳಗಾಗದೆ ಮೇ 12ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಅರ್ಹ ವ್ಯಕ್ತಿಗೆ ಮತ ಚಲಾಯಿಸುವಂತೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಹೇಳಿದ್ದಾರೆ.
ಶನಿವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಮಣಿಪಾಲ ಕಾಲೇಜ್ ಆಪ್ ನರ್ಸಿಂಗ್ ಮಣಿಪಾಲ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ಅಂಬಲಪಾಡಿ ಇವರ ಸಹಯೋಗದಲ್ಲಿ ಅಂಬಲಪಾಡಿ ಪ್ರಗತಿ ಸೌಧದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯ ವೇಳೆ ನೆರೆದವರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಎ.8ರಂದು ಮಿಂಚಿನ ಅಭಿಯಾನ ನಡೆಸಲಿದ್ದು, 18 ವರ್ಷ ತುಂಬಿದ ಯುವ ಜನತೆ ತಮ್ಮ ಹೆಸರು ಸೇರ್ಪಡೆ ಮಾಡುವಂತೆ ಹಾಗೂ ಗುರುತಿನ ಚೀಟಿ ಹೊಂದಿರುವವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಾತರಿಡಿಸಿಕೊಳ್ಳುವಂತೆ ಕಾಪಶಿ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಎ.8ರಂದು ಮಿಂಚಿನ ಅಭಿಯಾನ ನಡೆಸಲಿದ್ದು, 18 ವರ್ಷ ತುಂಬಿದ ಯುವ ಜನತೆ ತಮ್ಮ ಹೆಸರು ಸೇರ್ಪಡೆ ಮಾಡುವಂತೆ ಹಾಗೂ ಗುರುತಿನ ಚೀಟಿ ಹೊಂದಿರುವವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಾತರಿಪಡಿಸಿಕೊಳ್ಳುವಂತೆ ಕಾಪಶಿ ತಿಳಿಸಿದರು.







