Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2017-18ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ...

2017-18ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದಲ್ಲಿ 1,498 ದೂರುಗಳು

ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ ಇದು ಕನಿಷ್ಠ ಸಂಖ್ಯೆ

ವಾರ್ತಾಭಾರತಿವಾರ್ತಾಭಾರತಿ7 April 2018 8:30 PM IST
share
2017-18ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದಲ್ಲಿ 1,498 ದೂರುಗಳು

ಹೊಸದಿಲ್ಲಿ,ಎ.7: 2017-18ನೇ ಸಾಲಿನಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ (ಎನ್‌ಸಿಎಂ)ವು 1,498 ದೂರುಗಳನ್ನು ಸ್ವೀಕರಿಸಿದ್ದು, ಇದು ನಾಲ್ಕು ವರ್ಷಗಳ ಹಿಂದೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಕನಿಷ್ಠ ಸಂಖ್ಯೆಯಾಗಿದೆ. ಈ ಪೈಕಿ 1,263 ದೂರುಗಳನ್ನು ಆಯೋಗವು ವಿಲೇವಾರಿಗೊಳಿಸಿದೆ.

ಕಳೆದ ಹಣಕಾಸು ವರ್ಷದಲ್ಲಿ ಸಲ್ಲಿಕೆಯಾಗಿರುವ ಈ ದೂರುಗಳ ಪೈಕಿ ಅತ್ಯಂತ ಹೆಚ್ಚಿನ ದೂರುಗಳು(1,128) ದೇಶದಲ್ಲಿ ಜನಸಂಖ್ಯೆಗನುಗುಣವಾಗಿ ಅತ್ಯಂತ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿರುವ ಮುಸ್ಲಿಮರಿಂದ ಬಂದಿವೆ.

ಆರು ಅಧಿಸೂಚಿತ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಅತ್ಯಂತ ಸಣ್ಣದಾಗಿರುವ ಪಾರ್ಸಿಗಳಿಂದ ಕೇವಲ ಮೂರು ದೂರುಗಳು ದಾಖಲಾಗಿವೆ. ಕ್ರೈಸ್ತರು, ಸಿಕ್ಖರು, ಜೈನರು ಮತ್ತು ಬೌದ್ಧರು ಅನುಕ್ರಮವಾಗಿ 100, 83, 48 ಮತ್ತು 22 ದೂರುಗಳನ್ನು ದಾಖಲಿಸಿದ್ದರೆ, 114 ದೂರುಗಳು ಅಲ್ಪಸಂಖ್ಯಾತರೇತರ ಸಮುದಾಯಗಳಿಗೆ ಸೇರಿದ ವ್ಯಕ್ತಿಗಳಿಂದ ಸಲ್ಲಿಸಲ್ಪಟ್ಟಿವೆ ಎಂದು ಆಯೋಗವು ತಿಳಿಸಿದೆ.

 ಒಟ್ಟು ದೂರುಗಳ ಪೈಕಿ 877 ದೂರುಗಳು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ್ದರೆ, ಸೇವೆ, ಶಿಕ್ಷಣ, ಧಾರ್ಮಿಕ ಹಕ್ಕುಗಳು ಮತ್ತು ವಕ್ಫ್ ವಿಷಯಗಳಿಗೆ ಸಂಬಂಧಿಸಿದಂತೆ ಅನುಕ್ರಮವಾಗಿ 128, 93, 56 ಮತ್ತು 54 ದೂರುಗಳು ದಾಖಲಾ ಗಿವೆ. ಇವುಗಳಿಗೆ ಹೊರತಾದ ವಿಷಯಗಳಿಗೆ ಸಂಬಂಧಿಸಿದಂತೆ 275 ದೂರುಗಳನ್ನು ಆಯೋಗವು ಸ್ವೀಕರಿಸಿದೆ.

ಕಳೆದ ವರ್ಷ ಆಯೋಗದಲ್ಲಿ ದಾಖಲಾದ ದೂರುಗಳ ಸಂಖ್ಯೆ ಕಡಿಮೆಯಾಗಿದೆ ಯಾದರೂ, ಹೆಚ್ಚು ಪ್ರಕರಣಗಳು(235) ಬಾಕಿಯುಳಿದಿವೆ. 2014-15, 2015-16 ಮತ್ತು 2016-17ರಲ್ಲಿ ಅನುಕ್ರಮವಾಗಿ 12, 15 ಮತ್ತು 45 ಪ್ರಕರಣಗಳು ಬಾಕಿಯುಳಿ ದುಕೊಂಡಿದ್ದವು.

ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಯ ಉತ್ತಮ ನಿರ್ವಹಣೆಯು ಆಯೋಗದ ಬಳಿ ದಾಖಲಾಗಿರುವ ದೂರುಗಳ ಸಂಖ್ಯೆ ಕಡಿಮೆಯಾಗಲು ಕಾರಣವಾಗಿದೆ ಎಂದು ಎನ್‌ಸಿಎಂ ಅಧ್ಯಕ್ಷ ಸೈಯದ್ ಗೈರುಲ್ ಹಸನ್ ರಿಝ್ವಿ ಅವರು ಹೇಳಿದರು.

ಒಂದೆರಡು ರಾಜ್ಯಗಳನ್ನು ಬಿಟ್ಟರೆ ಉಳಿದ ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಚೆನ್ನಾಗಿಯೇ ಇದೆ. ಆರಂಭಿಕ ಹಂತಗಳಲ್ಲಿ ದೂರವಾಣಿಯಲ್ಲಿಯೂ ನಾವು ದೂರುಗಳನ್ನು ಬಗೆಹರಿಸುತ್ತಿದ್ದೇವೆ ಎಂದರು.

ಸಂಬಂಧಿಸಿದ ಅಧಿಕಾರಿಗಳು ಸಕಾಲದಲ್ಲಿ ವಿಚಾರಣೆಗೆ ಹಾಜರಾಗದಿರುವುದು ಕಳೆದ ವರ್ಷ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬಾಕಿಯುಳಿದುಕೊಳ್ಳಲು ಕಾರಣವಾಗಿದೆ ಎಂದ ಅವರು, ಅಧಿಕಾರಿಗಳು ಸಕಾಲದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಡಿಕೊಳ್ಳುವಂತೆ ನಾವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಿದ್ದೇವೆ ಎಂದರು.

ಆಯೋಗವು 2014-15, 2015-16 ಮತ್ತು 2016-17ರಲ್ಲಿ ಅನುಕ್ರಮವಾಗಿ 1995, 1974 ಮತ್ತು 1647 ದೂರುಗಳನ್ನು ಸ್ವೀಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X