Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ : ತಹಶೀಲ್ದಾರ್ -ವಕೀಲರುಗಳ...

ಬೆಳ್ತಂಗಡಿ : ತಹಶೀಲ್ದಾರ್ -ವಕೀಲರುಗಳ ಮಧ್ಯೆ ವಾಗ್ವಾದ ಜಿಲ್ಲಾಧಿಕಾರಿ ಮಧ್ಯಸ್ಥಿಕೆ

ವಾರ್ತಾಭಾರತಿವಾರ್ತಾಭಾರತಿ7 April 2018 8:42 PM IST
share
ಬೆಳ್ತಂಗಡಿ : ತಹಶೀಲ್ದಾರ್ -ವಕೀಲರುಗಳ ಮಧ್ಯೆ ವಾಗ್ವಾದ ಜಿಲ್ಲಾಧಿಕಾರಿ ಮಧ್ಯಸ್ಥಿಕೆ

ಬೆಳ್ತಂಗಡಿ, ಎ. 7: ತಾಲೂಕು ದಂಡಾಧಿಕಾರಿಗಳ ನ್ಯಾಯಾಲಯದ ಕಾರ್ಯಕಲಾಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ವಕೀಲರುಗಳ ಮಧ್ಯೆ ಶನಿವಾರವೂ ವಾಗ್ವಾದ ನಡೆಯಿತು. ಕೊನೆಗೂ ಬೆಳ್ತಂಗಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಮಧ್ಯಸ್ಥಿಕೆಯಲ್ಲಿ ವಿವಾದ ಶಮನಗೊಂಡಿತು.

ಕಳೆದ ಬುಧವಾರ ಸಿಆರ್‌ಪಿಸಿ 107, 108 ಪ್ರಕರಣಗಳಿಗೆ ಸಂಬಂಧಿಸಿದಂತೆ ವಕೀಲರುಗಳು ಎದುರುದಾರರ ಪರವಾಗಿ ವಾದಿಸಲು ತಹಶೀಲ್ದಾರ್ ನ್ಯಾಯಾಲಕ್ಕೆ ಆಗಮಿಸಿದ್ದರು. ಈ ಸಂದರ್ಭ ಸಿಬ್ಬಂದಿಗಳಿಗೆ ಚುನಾವಣೆ ಮುಗಿಯುವ ತನಕ ವಕೀಲರುಗಳಿಗೆ ಯಾವುದೇ ದಾಖಲೆ ನೀಡಬೇಡಿ, ಪ್ರವೇಶ ನೀಡಬೇಡಿ. ಎದುರುದಾರರೇ ಹಾಜರಾಗಬೇಕು ಎಂದು ಆದೇಶಿಸಿರುವುದನ್ನು ಖಂಡಿಸಿ ವಕೀಲರುಗಳು ತಹಶೀಲ್ದಾರ್‌ನ್ನು ತರಾಟೆಗೆ ತೆಗೆದುಕೊಂಡಿದ್ದರಲ್ಲದೆ ಪರಸ್ಪರ ತೀವ್ರ ಮಾತಿನ ಚಕಮಕಿ ನಡೆದಿತ್ತು.

ಶನಿವಾರ ಸಿಪಿಆರ್‌ಸಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಎದುರುದಾರರಿಗೆ ನೋಟಿಸ್ ನೀಡಲಾಗಿತ್ತು. ಸುಮಾರು 90ಕ್ಕೂ ಹೆಚ್ಚು ಮಂದಿ ಏಕ ಕಾಲದಲ್ಲಿ   ಆಗಮಿಸಿದ್ದರು. ಇವರೊಂದಿಗೆ ಪ್ರಕರಣದ ಬಗ್ಗೆ ವಾದಿಸಲು ಬಂದಿದ್ದ ವಕೀಲರುಗಳಿಗೆ ಮತ್ತೆ ತಹಶೀಲ್ದಾರ್ ತಮ್ಮಣ್ಣ ಚೆನ್ನಪ್ಪ ಹಾದಿಮನಿ ಅವರು, ಸಿಆರ್‌ಪಿಸಿಯ ಶಾಂತಿಭಂಗ ಮುಂಜಾಗ್ರತಾ ಕ್ರಮಕ್ಕಾಗಿ ಎದುರುದಾರರಿಗೆ ನೀಡಲಾದ ನೋಟಿಸಿಗೆ ಉತ್ತರಿಸಲು ಬಾಂಡ್ ನೀಡಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಹೇಳಿದಾಗ ಇದರಿಂದ ವಕೀಲರು ಹಾಗೂ ತಹಶೀಲ್ದಾರರ ಮಧ್ಯೆ ಮತ್ತೆ ಚರ್ಚೆ ನಡೆಯಿತು.

ಈ ಸಂದರ್ಭ ಮಾಧ್ಯಮದವರು ತಹಶೀಲ್ದಾರ್ ಕೊಠಡಿಯೊಳಗೆ ಪ್ರವೇಶಿಸಿದಾಗ ಹೊರಗೆ ಹೋಗುವಂತೆ ತಹಶೀಲ್ದಾರ್ ಸೂಚಿಸಿದರು. ಇಲ್ಲಿ ಕೋರ್ಟ್ ನಡೆಯುತ್ತಿದೆ. ಪ್ರವೇಶ ಇಲ್ಲ ಎಂದಾಗ ವಕೀಲರುಗಳು ಕೋರ್ಟ್ ನಡೆಯುತ್ತಿಲ್ಲ. ಮಾತುಕತೆ ನಡೆಯುತ್ತಿದೆ ಎಂದರು. ಮಾಧ್ಯಮದವರನ್ನು ಪೊಲೀಸರ ಮೂಲಕ ಹೊರ ಕಳುಹಿಸಿದರು.

ಶನಿವಾರ ಬೆಳ್ತಂಗಡಿ ಮಿನಿ ವಿಧಾನ ಸೌಧಕ್ಕೆ ಚುನಾವಣಾ ವೀಕ್ಷಣೆಗಾಗಿ ಆಗಮಿಸಿದ್ದ ಜಿಲ್ಲಾಧಿಕಾರಿಯವರು ತಹಶೀಲ್ದಾರ್ ಮತ್ತು ವಕೀಲರ ನಡುವೆ ನಡೆಯುತ್ತಿದ್ದ ವಾಗ್ವಾದದ ಮಧ್ಯೆ ಪ್ರವೇಶಿಸಿ ವಕೀಲರುಗಳೊಂದಿಗೆ ಮಾತುಕತೆ ನಡೆಸಿದರು. ಜಿಲ್ಲಾಧಿಕಾರಿಯವರು ಮಾತುಕತೆ ನಡೆಸುವ ವೇಳೆಯೂ ಮಾಧ್ಯಮದವರಿಗೆ ಕೊಠಡಿಯೊಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಕುಮಾರ್ ಎ., ಉಪಾಧ್ಯಕ್ಷ ಶ್ರೀನಿವಾಸ ಗೌಡ, ಕೋಶಾಧಿಕಾರಿ ಗಣೇಶ ಗೌಡ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಬಿ.ಕೆ ಧನಂಜಯ ರಾವ್, ಎಂ.ಬಿ. ಸಂಪಿಗೆತ್ತಾಯ, ವಕೀಲರುಗಳಾದ ಪ್ರತಾಪಸಿಂಹ ನಾಯಕ್, ಸುಬ್ರಹ್ಮಣ್ಯ ಕುಮಾರ್ ಅಗರ್ತ, ಶಶಿಕಿರಣ್ ಜೈನ್, ಸಂತೋಷ್ ಕುಮಾರ್, ದಿನೇಶ್ ಶೆಟ್ಟಿ, ನವೀನ್ ಬಿ.ಕೆ., ಹರಿಪ್ರಸಾದ್, ಜಯರಾಮ ಮಣಿಯಾಣಿ, ದೀಪಿಕಾ ಗೌತಮ್ ಮೊದಲಾದವರು ಇದ್ದರು.

ಚುನಾವಣೆ ಸಂದರ್ಭ ಆರೋಪ ಮತ್ತು ಸಂಶಯ ಇದ್ದರವನ್ನು ಕರೆಸಿ ಸಮಾಜದಲ್ಲಿ ಶಾಂತಿ ಭಂಗವಾಗದಂತೆ ನೋಡಿಕೊಳ್ಳುವ ಮುನ್ನೆಚ್ಚರಿಕೆಯ ಕ್ರಮವಾಗಿ ಅವರಿಂದ ಮುಚ್ಚಳಿಕೆ ಮತ್ತು 50 ಸಾವಿರದ ಬಾಂಡ್ ತೆಗೆದುಕೊಳ್ಳುತ್ತೇವೆ. ಮುಚ್ಚಳಿಕೆ ತೆಗೆದುಕೊಂಡವರು ಕಾನೂನು ಉಲ್ಲಂಘಿಸಿದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕಾನೂನು ರೀತ್ಯಾ ವ್ಯವಹರಿಸುವುದು ನಮ್ಮ ಕರ್ತವ್ಯ. ಅಮಾಯಕರಿಗೆ ತೊಂದರೆಯಾಗದಂತೆ ಅವರನ್ನು ರಕ್ಷಿಸುವ ಕೆಲಸ ನಮ್ಮದು. ಸಮಾಜದ ಒಳ್ಳೆಯದ್ದಕ್ಕಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಸಾರ್ವಜನಿಕರು ಆಡಳಿತಕ್ಕೆ ಸಹಕರಿಸಬೇಕು.

- ಸಸಿಕಾಂತ್ ಸೆಂಥಿಲ್, ಜಿಲ್ಲಾಧಿಕಾರಿ.

ಮಿನಿ ವಿಧಾನ ಸೌಧದಲ್ಲಿ ಬಂದವರಿಗೆ ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆಗಳಿಲ್ಲ. ಕಟ್ಟಡದಲ್ಲಿರುವ ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಇನ್ನು ಶಾಲೆಗಳು ಆರಂಭವಾದಗ ವಿವಿಧ ರೀತಿಯ ಪ್ರಮಾಣ ಪತ್ರಗಳಿಗೆ ನೂರಾರು ಜನರು ಬರುತ್ತಾರೆ. ಇಲ್ಲಿ ಕಂದಾಯಕ್ಕೆ ಸಂಬಂಧಪಟ್ಟ ಕೆಲಸಗಳೂ ಆಗುತ್ತಿಲ್ಲ ಎಂದು ಮಾಧ್ಯಮದವರು ಜಿಲ್ಲಾಧಿಕಾರಿಯವರ ಗಮನ ಸೆಳೆದರು. ಇದಕ್ಕುತ್ತರಿಸಿದ ಡಿಸಿಯವರು, ಹೊಸ ಕಟ್ಟಡದಲ್ಲಿ ಪಿಠೋಪಕರಣಗಳಿಗಾಗಿ ಬೇಡಿಕೆ ಸಲ್ಲಿಸಲಾಗಿದೆ. ಸಮಯಕ್ಕೆ ಸರಿಯಾಗಿ ಬಂದಿಲ್ಲ. ವಾರದೊಳಗೆ ಎಲ್ಲವೂ ಸರಿಯಾಗಲಿದೆ. ಕಂದಾಯಕ್ಕೆ ಸಂಬಂಧಪಟ್ಟ ಯಾವುದೇ ಕೆಲಸಗಳಿಗೆ ಸಾರ್ವಜನಿಕರಿಗೆ ಸಮಸ್ಯೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X