ಶಾಸಕ ಸಿ.ಪಿ ಯೋಗೇಶ್ವರ್‌ಗೆ ಕುಮಾರಸ್ವಾಮಿ ನೋಟಿಸ್

ಬೆಂಗಳೂರು, ಎ. 7: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿದ್ದ ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ. ಯೋಗೇಶ್ವರ್ ಅವರಿಗೆ ಎಚ್‌ಡಿಕೆ ತಮ್ಮ ವಕೀಲರ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ.
ಇತ್ತೀಚೆಗೆ ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಸಮಾವೇಶದ ಬಳಿಕ ಸುದ್ಧಿಗೋಷ್ಠಿ ನಡೆಸಿದ ಶಾಸಕ ಸಿ.ಪಿ.ಯೋಗೇಶ್ವರ್, ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ, ಸಿಂಗಾಪುರ್, ಮಲೇಷ್ಯಾ ಸೇರಿದಂತೆ ವಿದೇಶಗಳಲ್ಲಿ ಬೇನಾಮಿ ಆಸ್ತಿಗಳಿವೆ ಎಂದು ಹೇಳಿಕೆ ನೀಡಿದ್ದರು.
ಒಂದು ವಾರದೊಳಗೆ ಯೋಗೇಶ್ವರ್ ಅವರು ತನ್ನ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಬಹಿರಂಗ ಕ್ಷಮೆ ಕೋರಬೇಕೆಂದು ನೋಟಿಸ್ ನೀಡಲಾಗಿದೆ. ಈ ಮಧ್ಯೆ ಎಚ್‌ಡಿಕೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಕಾರಣಕ್ಕೆ ಯೋಗೇಶ್ವರ್, ಎಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದನ್ನು ಸ್ಮರಿಸಬಹುದು.
Next Story





