Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಿಂದ ಬಿಹಾರದ ರಕ್ಸೌಲ್ ಮತ್ತು...

ಭಾರತದಿಂದ ಬಿಹಾರದ ರಕ್ಸೌಲ್ ಮತ್ತು ಕಠ್ಮಂಡು ನಡುವೆ ವ್ಯೂಹಾತ್ಮಕ ರೈಲು ಮಾರ್ಗ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ7 April 2018 11:13 PM IST
share
ಭಾರತದಿಂದ ಬಿಹಾರದ ರಕ್ಸೌಲ್ ಮತ್ತು ಕಠ್ಮಂಡು ನಡುವೆ ವ್ಯೂಹಾತ್ಮಕ ರೈಲು ಮಾರ್ಗ ನಿರ್ಮಾಣ

ಹೊಸದಿಲ್ಲಿ,ಎ.7: ಉಭಯ ರಾಷ್ಟ್ರಗಳ ನಡುವಿನ ಜನಸಂಪರ್ಕವನ್ನು ಹೆಚ್ಚಿಸಲು ಮತ್ತು ಸರಕು ಸಾಗಾಣಿಕೆ ಸೌಲಭ್ಯ ಕಲ್ಪಿಸಲು ಬಿಹಾರದ ರಕ್ಸೌಲ್ ಮತ್ತು ನೇಪಾಳದ ಕಠ್ಮಂಡು ನಡುವೆ ವ್ಯೂಹಾತ್ಮಕ ರೈಲುಮಾರ್ಗವೊಂದನ್ನು ಭಾರತವು ನಿರ್ಮಿಸಲಿದೆ.

ಶನಿವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉಭಯ ರಾಷ್ಟ್ರಗಳ ನಡುವಿನ ನಿಯೋಗ ಮಟ್ಟದ ಮಾತುಕತೆಗಳ ಬಳಿಕ ನೂತನ ರೈಲುಮಾರ್ಗ ನಿರ್ಮಾಣದ ಕುರಿತು ಪ್ರಕಟಿಸಲಾಯಿತು.

ನೂತನ ವಿದ್ಯುತ್ ಚಾಲಿತ ರೈಲುಮಾರ್ಗಕ್ಕೆ ಭಾರತವು ಹಣಕಾಸು ಒದಗಿಸಲಿದೆ. ಉಭಯ ರಾಷ್ಟ್ರಗಳ ಜನರ ನಡುವಿನ ಸಂಪರ್ಕವನ್ನು ಹೆಚ್ಚಿಸುವುದು ಹಾಗೂ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ಸರಕಾರವು ಹೇಳಿಕೆಯಲ್ಲಿ ತಿಳಿಸಿದೆ.

ಭಾರತ-ನೇಪಾಳ ರೈಲು ಸಂಪರ್ಕ ಯೋಜನೆಗಳ ಹಂತ-1ರ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯ ಬಗ್ಗೆ ಉಭಯ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಹಾಲಿ ಕಾಮಗಾರಿ ಪ್ರಗತಿಯಲ್ಲಿರುವ ರೈಲುಮಾರ್ಗಗಳಿಗಾಗಿ ಭೂ ಲಭ್ಯತೆ ಸೇರಿದಂತೆ ಬಾಕಿಯುಳಿದಿರುವ ಎಲ್ಲ ವಿವಾದಗಳನ್ನು ತ್ವರಿತವಾಗಿ ಬಗೆಹರಿಸುವಲ್ಲಿ ನೇಪಾಳದ ಬದ್ಧತೆಯನ್ನೂ ಭಾರತವು ಪ್ರಶಂಸಿಸಿತು.

 ಭಾರತದ ಮೇಲೆ ನೇಪಾಳದ ಅವಲಂಬನೆಯನ್ನು ತಗ್ಗಿಸುವ ಉದ್ದೇಶದಿಂದ ಟಿಬೆಟ್ ಮೂಲಕ ಆ ರಾಷ್ಟ್ರದೊಂದಿಗೆ ವ್ಯೆಹಾತ್ಮಕ ರೈಲುಮಾರ್ಗವನ್ನು ನಿರ್ಮಿಸಲು ಚೀನಾ ಎರಡು ವರ್ಷಗಳ ಹಿಂದೆ ಒಪ್ಪಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ರಕ್ಸೌಲ್-ಕಠ್ಮಂಡು ನಡುವೆ ರೈಲು ಸಂಪರ್ಕದ ಪ್ರಸ್ತಾವವು ಮಹತ್ವ ಪಡೆದುಕೊಂಡಿದೆ.

ಚೀನಾ ಇತ್ತಿಚಿಗೆ ನೇಪಾಳದ ಜೊತೆ ಸಂಬಂಧವನ್ನು ಹೆಚ್ಚಿಸಿಕೊಂಡಿದ್ದು, ಅಲ್ಲಿ ಮೂರು ಹೆದ್ದಾರಿಗಳ ನಿರ್ಮಾಣವನ್ನು ಕೈಗೆತ್ತಿಕೊಂಡಿದೆ. ಅವು 2020ರ ವೇಳೆಗೆ ಪೂರ್ಣಗೊಳ್ಳಲಿವೆ. ಉಭಯ ರಾಷ್ಟ್ರಗಳು ಇತ್ತೀಚಿಗೆ ರಹದಾರಿ ಒಪ್ಪಂದವೊಂದಕ್ಕೂ ಸಹಿಹಾಕಿವೆ. ಈ ಸಂದರ್ಭದಲ್ಲಿಯೇ ಭಾರತ-ನೇಪಾಳಗಳು ಹೊಸ ರೈಲುಮಾರ್ಗ ನಿರ್ಮಾಣ ಒಪ್ಪಂದವನ್ನು ಮಾಡಿಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X