Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬುದ್ಧ, ಬಸವ, ಅಂಬೇಡ್ಕರ್ ರನ್ನು...

ಬುದ್ಧ, ಬಸವ, ಅಂಬೇಡ್ಕರ್ ರನ್ನು ವ್ಯವಸ್ಥೆಯಿಂದ ಹೊರಗಿಡುವ ಹುನ್ನಾರ ನಡೆಯುತ್ತಿದೆ: ಸಾಹಿತಿ ಶಿವಪ್ರಸಾದ್ ವಿಷಾದ

ದಲಿತ ಜಾಗೃತಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ8 April 2018 7:15 PM IST
share
ಬುದ್ಧ, ಬಸವ, ಅಂಬೇಡ್ಕರ್ ರನ್ನು ವ್ಯವಸ್ಥೆಯಿಂದ ಹೊರಗಿಡುವ ಹುನ್ನಾರ ನಡೆಯುತ್ತಿದೆ: ಸಾಹಿತಿ ಶಿವಪ್ರಸಾದ್ ವಿಷಾದ

ಚಿಕ್ಕಮಗಳೂರು, ಎ.8: ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಯುವಜನತೆ ಮೈಗೂಡಿಸಿಕೊಂಡಲ್ಲಿ ದೇಶದ ಸಾಮಾಜಿಕ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಪ್ರಗತಿ ಕಾಣಲಿದೆ. ಗೊಡ್ಡು ಸಂಪ್ರದಾಯ, ಮತೀಯ ಗಲಭೆ, ಉಚ್ಛ ನೀಚ ತಾರತಮ್ಯ ವ್ಯವಸ್ಥೆಯಂತಹ ಕೊಳಕು ದೇಶದಲ್ಲಿರುವುದಿಲ್ಲ. ಇವರ ಚಿಂತನೆ, ಮೌಲ್ಯಗಳ ಬಗ್ಗೆ ಪಟ್ಟಭದ್ರರಿಗೆ ಅರಗಿಸಿಕೊಳ್ಳಲು ಸಾಧ್ಯವಾಗದ ಕಾರಣ ಈ ಮೂವರನ್ನು ದೇಶದಿಂದ ಹೊರಹಾಕಲು ವ್ಯವಸ್ಥಿತಿ ಸಂಚು ದೇಶದಲ್ಲಿ ನಡೆಯುತ್ತಿದೆ ಎಂದು ಹಿರಿಯ ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್ ಎಚ್ಚರಿಸಿದ್ದಾರೆ.

ನಗರದ ಕುವೆಂಪು ಕಲಾ ಮಂದಿರದಲ್ಲಿ ದಲಿತ ಜಾಗೃತ ವೇದಿಕೆ ಆಯೋಜಿಸಿದ್ದ ದಲಿತ ಜಾಗೃತ ಸಮಾವೇಶ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ಅವರು ಈ ದೇಶ ಕಂಡ ಮಹಾನ್ ಮಾನವತಾವಾದಿಗಳು. ಇವರು ಬೇರೆ ಬೇರೆ ಕಾಲಘಟ್ಟದಲ್ಲಿ ದೇಶದ ಸಾಮಾಜಿಕ ವ್ಯವಸ್ಥೆಯಲ್ಲಿ ಕೀಳಲಾಗದಷ್ಟು ಆಳಕ್ಕಿಳಿದಿದ್ದ ಜಾತಿವ್ಯವಸ್ಥೆ, ಅಸ್ಪøಶ್ಯತೆ, ಅಸಮಾನತೆ, ಲಿಂಗತಾರತಮ್ಮ, ಮಹಿಳಾ ಶೋಷಣೆ, ಮೂಢನಂಬಿಕೆಯಂತಹ ಒಂದೇ ರೀತಿಯ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಡಿದ್ದಾರೆ. ಇವರ ಹೋರಾಟದಿಂದಾಗಿ ದೇಶದಲ್ಲಿ ಪ್ರಸಕ್ತ ಸಮಾಜಿಕ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಬದಲಾಗದಿದ್ದರೂ ಸಾಕಷ್ಟು ಸುಧಾರಣೆಗಳಾಗಿವೆ. ಈ ಕಾರಣಕ್ಕೆ ಬುದ್ಧ, ಬಸವ, ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಒಪ್ಪಿದೆ. ಕೊಂಡಾಡುತ್ತಿದೆ. ಅವರ ವಿಚಾರಗಳನ್ನು ಅಧ್ಯಯನ ವಿಷಯಗಳನ್ನಾಗಿ ಅಳವಡಿಸಿಕೊಂಡು ಮೌಲ್ಯ, ಸಿದ್ಧಾಂತಗಳನ್ನು ಅಲ್ಲಿ ಪಾಲಿಸಲಾಗುತ್ತಿದೆ ಎಂದರು.

ಬುದ್ಧ, ಬಸವ, ಅಂಬೇಡ್ಕರ್ ಅವರನ್ನು ವಿಶ್ವ ಒಪ್ಪಿದ್ದರೂ ಭಾರತೀಯ ಸಮಾಜದಲ್ಲಿ ಕೆಲವರು ಒಪ್ಪುತ್ತಿಲ್ಲ. ಈ ಮೂವರನ್ನು ವ್ಯವಸ್ಥೆಯಿಂದ ಹೊರಗಿಡುವ ಹುನ್ನಾರವನ್ನು ಪಟ್ಟಭದ್ರ ಹಿತಾಸಕ್ತಿಗಳು ನಡೆಸುತ್ತಿದ್ದಾರೆ. ಆದರ್ಶ ವ್ಯಕ್ತಿಗಳ ಆಶಯಗಳನ್ನು ವ್ಯವಸ್ಥಿತವಾಗಿ ತೆರೆಮರೆಗೆ ಸರಿಸಲಾಗುತ್ತಿದೆ, ಕಾರ್ಪೊರೇಟ್ ಕುಳಗಳು ಸಾಂಸ್ಕøತಿಕ ಸತ್ಯಗಳನ್ನು ಛಿದ್ರ ಮಾಡಿ ಸನಾತನ ವಾದಕ್ಕೆ ಜೀವ ನೀಡುವ ಕೆಲಸ ಮಾಡುತ್ತಿರುವುದರಿಂದ ಮನುಷ್ಯನನ್ನು ಮನುಷ್ಯನಾಗಿ ನೋಡದ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಸಕ್ತ ಇಂತಹ ವ್ಯವಸ್ಥೆಯಲ್ಲಿ ಯುವಜನತೆ ಗೊಂದಲಕ್ಕೆ ಸಿಲುಕಿದೆ. ಸಮಾಜವನ್ನು ಅರ್ಥೈಸಿಕೊಳ್ಳಲು ವಿಫಲವಾಗಿದೆ. ಸಮಾಜದಲ್ಲಿ ಭಿನ್ನತೆ ಹುಟ್ಟಿಕೊಳ್ಳುತ್ತಿದೆ. ಜಾತಿ ಪರಧಿಯ ಬಂಧನದಿಂದ ಹೊರಬರಬೇಕಾದ ನಾವು ಸಾಂಸ್ಕøತಿಕ ದಾಳಿಯಿಂದ ಮತ್ತಷ್ಟು ಬಂಧನಕ್ಕೊಳಗಾಗುತ್ತಿದ್ದೇವೆ ಎಂದ ಅವರು, ಬಸವಣ್ಣನ ಆದರ್ಶ, ಅಂಬೇಡ್ಕರ್ ಅವರ ಚಿಂತನೆ ಹಾಗೂ ಬುದ್ಧನ ಧ್ಯಾನದ ಸ್ಥಿತಿಗೆ ಬಂದಾಗ ಮಾತ್ರ ಸಮಾಜದ ಒಳನೋಟದ ದರ್ಶನವಾಗುತ್ತದೆ ಎಂದರು.

ಬಹುಜನ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ.ಆರ್.ಎಂ.ಎನ್.ರಮೇಶ್, ಅರಣ್ಯ ಮತ್ತು ವಸತಿ ವಿಹಾರ ಧಾಮಗಳ ನಿಗಮ ಅಧ್ಯಕ್ಷ ಎ.ಎನ್.ಮಹೇಶ್, ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ.ಆರ್.ಎಂ.ಎನ್.ರಮೇಶ್, ನಿವೃತ್ತ ಪಾಚಾರ್ಯ ಎಚ್.ಎಂ.ರುದ್ರಸ್ವಾಮಿ, ಪತ್ರಕರ್ತ ದಿನೇಶ್ ಪಟವರ್ಧನ್, ಶ್ರೀನಿವಾಸ ದಂಟರಮಕ್ಕಿ ಮಾತನಾಡಿದರು.

ಸಮಾರಂಭದ ಅಂಗವಾಗಿ ಕಾರ್ಯಕ್ರಮದಲ್ಲಿ ಕ್ರಾಂತಿಗೀತೆಗಳು ಮಾರ್ದನಿಸಿದವು. ದಲಿತ ಜಾಗೃತ ವೇದಿಕೆ ಅಧ್ಯಕ್ಷ ಕೆ.ಜೆ.ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಾಗೃತ ವಿದ್ಯಾರ್ಥಿ ವೇದಿಕೆಯ ಅಂಗಡಿ ಚಂದ್ರು, ಎಂ.ಜಿ.ಲೋಕೇಶ್, ಸಿಪಿಐ ಮುಖಂಡ ಬಿ.ಅಮ್ಝದ್, ರೈತ ಸಂಘ ಗುರುಶಾಂತಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X