ಕಳ್ಳಭಟ್ಟಿ ದಾಸ್ತಾನು : ಗ್ರಾ.ಪಂ. ಸದಸ್ಯನ ಬಂಧನ

ಶಿವಮೊಗ್ಗ, ಏ. 8: ಮನೆಯಲ್ಲಿ ಕಾನೂನುಬಾಹಿರವಾಗಿ ಕಳ್ಳಭಟ್ಟಿ ದಾಸ್ತಾನು ಮಾಡಿದ್ದ ಆರೋಪದ ಮೇರೆಗೆ ಗ್ರಾಮ ಪಂಚಾಯ್ತಿ ಸದಸ್ಯರೋರ್ವರನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಯಲಕುಂದ್ಲಿ ಗ್ರಾಮದಲ್ಲಿ ವರದಿಯಾಗಿದೆ.
ಕರಿಯಪ್ಪ ಬಂಧಿತ ಗ್ರಾ.ಪಂ. ಸದಸ್ಯ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಯಿಂದ 5 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಬಕಾರಿ ಉಪ ಅಧೀಕ್ಷಕಿ ಲೀಲಾವತಿ ಮತ್ತವರ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Next Story





