Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಕರಣದಿಂದ ಖಾಸಗೀಕರಣದೆಡೆಗೆ ಮೋದಿ...

ರಾಷ್ಟ್ರೀಕರಣದಿಂದ ಖಾಸಗೀಕರಣದೆಡೆಗೆ ಮೋದಿ ಸರ್ಕಾರ : ಮಾಜಿ ಸಂಸದ ವಿಜಯ ಶಂಕರ್

ವಾರ್ತಾಭಾರತಿವಾರ್ತಾಭಾರತಿ9 April 2018 5:14 PM IST
share
ರಾಷ್ಟ್ರೀಕರಣದಿಂದ ಖಾಸಗೀಕರಣದೆಡೆಗೆ ಮೋದಿ ಸರ್ಕಾರ : ಮಾಜಿ ಸಂಸದ ವಿಜಯ ಶಂಕರ್

ಮಡಿಕೇರಿ, ಏ.9: ದೇಶವನ್ನು ಆಳಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 20 ಅಂಶಗಳ ಕಾರ್ಯಕ್ರಮಗಳ ಮೂಲಕ ಬಡವರ, ಜನಸಾಮಾನ್ಯರ ಪರವಾದ ಆಡಳಿತವನ್ನು ನೀಡಿ ಬ್ಯಾಂಕ್‍ಗಳನ್ನು ರಾಷ್ಟ್ರೀಕರಣಗೊಳಿಸಿದರು. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ರಾಷ್ಟ್ರೀಕರಣದಿಂದ ಖಾಸಗೀಕರಣದೆಡೆಗೆ ಕೊಂಡೊಯ್ಯುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ವಿಜಯ ಶಂಕರ್ ಟೀಕಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿಯವರ ಸರ್ಕಾರ ಖಾಸಗೀಕರಣದಿಂದ ರಾಷ್ಟ್ರೀಕರಣದ ಕಡೆಗೆ ದೇಶವನ್ನು ಕೊಂಡೊಯ್ದಿದ್ದರು. ಆದರೆ ನರೇಂದ್ರಮೋದಿ ಅವರು ಲಾಭದಾಯಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ಆರ್ಥಿಕ ತಜ್ಞರು ನೀಡಿರುವ ಮಾಹಿತಿ ಪ್ರಕಾರ ಶೇ.73 ರಷ್ಟು ಸಂಪತ್ತು ದೇಶದ ಒಂದೇ ಭಾಗದ ಜನರಲ್ಲಿ ಕ್ರೋಢೀಕರಣಗೊಳ್ಳುತ್ತಿದೆ. ಕೃಷಿಕರ ಬಳಿ ಶೇ.1 ರಷ್ಟು ಸಂಪತ್ತು ಕೂಡ ಕ್ರೋಢೀಕರಣಗೊಳ್ಳುತ್ತಿಲ್ಲ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಲ್ಲದ ಕೇಂದ್ರ ಸರ್ಕಾರದಲ್ಲಿ ಶೇ.33ರಷ್ಟಿರುವ ಒಬಿಸಿ, ಶೇ.12 ರಷ್ಟಿರುವ ಮುಸಲ್ಮಾನರು, ಶೇ.3 ರಷ್ಟಿರುವ ಕ್ರೈಸ್ತರು, ಶೇ.3ರಷ್ಟಿರುವ ಪರಿಶಿಷ್ಟ ವರ್ಗ ಹಾಗೂ ಶೇ.17ರಷ್ಟಿರುವ ಲಿಂಗಾಯತರಿಗೆ ಕೇಂದ್ರ ಸರ್ಕಾರದಲ್ಲಿ ಯಾವುದೇ ಪ್ರಾತಿನಿಧ್ಯವನ್ನು ನೀಡಿಲ್ಲವೆಂದು ವಿಜಯಶಂಕರ್ ಆರೋಪಿಸಿದರು.

ಭ್ರಷ್ಟಾಚಾರ, ಭಯೋತ್ಪಾದನೆ, ನಿರುದ್ಯೋಗ ಮುಕ್ತ ಭಾರತ ನಿರ್ಮಾಣ,ವಿದೇಶದಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ತರುವುದು, ಗೋ ಹತ್ಯೆಯನ್ನು ನಿಷೇಧಿಸುವುದು, ಲೋಕಪಾಲ ಮಸೂದೆಯನ್ನು ಜಾರಿಗೆ ತರುವುದು, ಗಂಗಾ ಕಾವೇರಿ ನದಿ ಜೋಡಣೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ನಿರಾಶ್ರಿತ ಕಾಶ್ಮೀರ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದು ಇವುಗಳು 2014 ರಲ್ಲಿ ಎನ್‍ಡಿಎ ನೀಡಿದ್ದ ಭರವಸೆಗಳಾಗಿವೆ. ಇವುಗಳಲ್ಲಿ ಯಾವ ಭರವಸೆ ಈಡೇರಿದೆಯೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೆ ಬಹಿರಂಗ ಪಡಿಸಲಿ ಎಂದು ವಿಜಯ ಶಂಕರ್ ಸವಾಲು ಹಾಕಿದರು.

ದುರ್ಬಲ ಪ್ರಧಾನಿ

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರೆ ಪ್ರಧಾನಿ ವಿರುದ್ಧ ತಿರುಗಿಬಿದ್ದಿದ್ದು, ಇಟ್ಟ ಭರವಸೆ ಕೊಟ್ಟಮಾತು ತಪ್ಪಿದ್ದಾರೆಂದು ಪ್ರತಿಭಟನೆ ನಡೆಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಯಾವುದೇ ಭರವಸೆಗಳನ್ನು ಈಡೇರಿಸದ ಅತ್ಯಂತ ದುರ್ಬಲ ಪ್ರಧಾನಿಯೊಬ್ಬರು ಈ ದೇಶವನ್ನು ಆಳುತ್ತಿದ್ದಾರೆಂದು ಅವರು ಆರೋಪಿಸಿದರು. ಕೋಟಿ ಕೋಟಿ ಸಾಲ ಮಾಡಿ ಬ್ಯಾಂಕ್ ಕೊಳ್ಳೆ ಹೊಡೆದವರು ದೇಶ ಬಿಟ್ಟು ಹೋಗುತ್ತಿದ್ದಾರೆ, ಇವರನ್ನು ತಡೆಯಲು ಸಾಧ್ಯವಾಗದ ದುರ್ಬಲ ಸರ್ಕಾರವಿಂದು ಕೇಂದ್ರದಲ್ಲಿದೆ. 2008ರಿಂದ 13 ರವರೆಗೆ ರಾಜ್ಯದಲ್ಲಿದ್ದ ಬಿಜೆಪಿ ಆಡಳಿತದಲ್ಲಿ ಮುಖ್ಯಮಂತ್ರಿಯೇ ಜೈಲಿಗೆ ಹೋಗಿದ್ದಲ್ಲದೆ, ಹಲವು ಹಗರಣಗಳೊಂದಿಗೆ ಆಂತರಿಕ ಕಿತ್ತಾಟದಲ್ಲಿ ತೊಡಗಿದ ಸಾಧನೆಯಾಗಿದೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಅವರು ಸುಳ್ಳು ಭರವಸೆಗಳನ್ನೇ ನೀಡಿದ್ದಾರೆ. ಈ ಅಂಶಗಳನ್ನು ಜನರ ಮುಂದಿಟ್ಟುಕೊಂಡು ಬಿಜೆಪಿ ಮಂದಿ ಜನರ ಬಳಿ ಮತ ಕೇಳುತ್ತಾರೆಯೆ ಎಂದು ವಿಜಯ ಶಂಕರ್ ಪ್ರಶ್ನಿಸಿದರು.

ರೈತರ ನೋವನ್ನು ಆಲಿಸದ ಎನ್‍ಡಿಎ ಸರ್ಕಾರ ರೈತರ ಬೆಳೆಗೆ ಸೇವಾ ತೆರಿಗೆ ವಿಧಿಸಿದ ಮೊದಲ ಸರ್ಕಾರವಾಗಿದೆ. ಆಮದು ಮತ್ತು ರಫ್ತು ನೀತಿಯ ತಪ್ಪು ನಡೆಯಿಂದಾಗಿ ದೇಶದ ರೈತ ನೆಲ ಕಚ್ಚಿದ್ದಾನೆ. ಕೊಡಗಿನಲ್ಲಿ ಕೂಡ ಕಾಫಿ, ಕಾಳು ಮೆಣಸು, ಏಲಕ್ಕಿ ವ್ಯವಹಾರದ ಮೇಲೆ ಪರಿಣಾಮ ಬೀರಿದ್ದು, ರೈತರು ಕೇಂದ್ರ ಸರ್ಕಾರವನ್ನು ಕ್ಷಮಿಸಲಾರರು ಎಂದರು. 

ಬಂಡವಾಳಶಾಹಿಗಳ ಸಾಲಮನ್ನಾ ಮಡಿರುವ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡುತ್ತಿಲ್ಲ. ರೈತರ ಸಾಲ ಮನ್ನಾ ಮಾಡಿದರೆ ಬ್ಯಾಂಕ್ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಹೇಳಿಕೊಳ್ಳುತ್ತಿದ್ದಾರೆ. ಹಾಗಾದರೆ ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದರೆ ಬ್ಯಾಂಕ್ ದಿವಾಳಿಯಾಗುವುದಿಲ್ಲವೆ ಎಂದು ಪ್ರಶ್ನಿಸಿದರು.

ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಗ್ರಾಮ ಸಡಕ್, ಸುಜಲ ಧಾರಾ ಹಾಗೂ ಸರ್ವ ಶಿಕ್ಷ ಅಭಿಯಾನ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ, ನರೇಂದ್ರ ಮೋದಿ ಅವರ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಮೂರು ಯೋಜನೆಗಳಿಗೆ ಅನುದಾನ ನೀಡದೆ ನಿರ್ಲಕ್ಷಿಸಲಾಗಿದೆ. ಆದರ್ಶ ಗ್ರಾಮ ಎಂಬ ಯೋಜನೆಯನ್ನು ಜಾರಿಗೆ ತಂದ ಕೇಂದ್ರ ಒಂದೇ ಒಂದು ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಿಲ್ಲವೆಂದು ವಿಜಯಶಂಕರ್ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನಡವಳಿಕೆಯನ್ನು ಟೀಕಿಸಿದ ವಿಜಯಶಂಕರ್ ಸಹೋದ್ಯೋಗಿಗಳನ್ನು ದೂರ ಇಡುವ ಮೊದಲ ಪ್ರಧಾನಿಯನ್ನು ಈ ದೇಶ ಕಂಡಿದೆಯೆಂದು ವ್ಯಂಗ್ಯವಾಡಿದರು. ವಿದೇಶ ಸುತ್ತುವ ಪ್ರಧಾನಿ ಮೋದಿ ವಿದೇಶಾಂಗ ಸಚಿವರಾದ ಸುಷ್ಮಾ ಸ್ವರಾಜ್ ಅವರನ್ನು ಕಡತ ನೋಡಿ ಕೆಲಸ ಮಾಡುವ ಗುಮಾಸ್ತರನ್ನಾಗಿ ಮಾಡಿದ್ದಾರೆ. ಸುಷ್ಮಾ ಸ್ವರಾಜ್ ಅವರು ಸಚಿವರೋ ಅಥವಾ ಗುಮಾಸ್ತರೋ ಎಂಬುವುದನ್ನು ಪ್ರಧಾನಿಯೇ ತಿಳಿಸಬೇಕಾಗಿದೆ. ಸಂಪುಟವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದು, ಹಿರಿಯರನ್ನು ಗೌರವಿಸದ ಹೆಗ್ಗಳಿಕೆಯೂ ಇವರ ಪಾಲಾಗುತ್ತದೆ ಎಂದು ಟೀಕಿಸಿದರು.

ಚುನಾವಣೆ ಸಂದರ್ಭ ಮೋದಿಯವರು ನೀಡಿದ ಸ್ವವಿವರದಲ್ಲಿ ಯಶೋಧ ಬೆನ್ ಎಂಬವರನ್ನು ಮದುವೆಯಾದ ಬಗ್ಗೆ ಮಾಹಿತಿ ಇದೆ. ಆದರೆ, ಅವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಆಸ್ಪತ್ರೆ ಸೇರಿದರೂ ಕನಿಷ್ಠ ದೂರವಾಣಿ ಕರೆ ಮಾಡಿ ಪತ್ನಿ ಜೊತೆ ಮಾತನಾಡಿ ಯೋಗಕ್ಷೇಮ ವಿಚಾರಿಸಲಿಲ್ಲವೆಂದು ವಿಜಯ ಶಂಕರ್ ಆರೋಪಿಸಿದರು.

ಕಡಿಮೆ ದರದಲ್ಲಿ ಅಕ್ಕಿ ನೀಡುವ ಯೋಜನೆ ನರೇಂದ್ರ ಮೋದಿ ಅವರು ಪ್ರಧಾನಿ ಆದ ನಂತರ ಬಂದ ಯೋಜನೆಯಲ್ಲ. ಈ ಹಿಂದಿನ ಪ್ರಧಾನಿಗಳು ಅಧಿಕಾರದಲ್ಲಿ ಇದ್ದಾಗಿನಿಂದಲೇ ಯೋಜನೆ ಜಾರಿಯಲ್ಲಿದ್ದು, ದೇಶದ ಎಲ್ಲಾ ರಾಜ್ಯಗಳಿಗೂ ಅಕ್ಕಿಯನ್ನು ಕಡಿಮೆ ದರಕ್ಕೆ ಕೇಂದ್ರ ನೀಡುತ್ತಿದೆ. ಇದೇ ಅಕ್ಕಿಯನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಅನ್ನಭಾಗ್ಯದ ರೂಪದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ನೀಡಿದೆ ಎಂದರು. 

ಕಾರ್ಮಿಕರ ಸಮಸ್ಯೆಗೂ ಸ್ಪಂದಿಸದ ಕೇಂದ್ರ ಸರ್ಕಾರದ ವಿರುದ್ಧ ಅವರದೇ ಪಕ್ಷದ ಸಂಘಟನೆಯಾದ ಬಿಎಂಎಸ್ ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಮುಂದಾಗಿತ್ತು. ಇಷ್ಟೆಲ್ಲ ವೈಫಲ್ಯತೆಗಳನ್ನು ಕಂಡಿರುವ ಕೇಂದ್ರ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿರುವ ದೇಶದ ಜನ ದೇಶ ಮಾತ್ರವಲ್ಲದೆ, ರಾಜ್ಯದಲ್ಲು ಬದಲಾವಣೆಯನ್ನು ಎದುರು ನೋಡುತ್ತಿದ್ದಾರೆ. ನರೇಂದ್ರ ಮೋದಿ ಅವರು ಕೇವಲ ಮಾತಿನ ಪ್ರಧಾನಿಯಾಗಿರುವುದರಿಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪರ ಜನ ಬೆಂಬಲ ಹೆಚ್ಚಾಗುತ್ತಿದೆ ಎಂದು ವಿಜಯ ಶಂಕರ್ ಅಭಿಪ್ರಾಯಪಟ್ಟರು.

ಸಾಮಾಜಿಕ ನ್ಯಾಯವನ್ನು ನೀಡಿದ, ನುಡಿದಂತೆ ನಡೆದ, ಹಗರಣ ಮುಕ್ತ ಕಾಂಗ್ರೆಸ್ ಸರ್ಕಾರ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಒಂದು ಸುಭದ್ರ ಸರ್ಕಾರ ನೆಲೆಯೂರಬೇಕಾದರೆ ಸಂಪೂರ್ಣ ಬಹುಮತದ ಅಗತ್ಯವಿದೆ. ರಾಜ್ಯದ ಒಳಿತಿಗಾಗಿ ಸಮ್ಮಿಶ್ರ ಸರ್ಕಾರ ಬೇಡವೆಂದು ಅಭಿಪ್ರಾಯಪಟ್ಟ ವಿಜಯಶಂಕರ್ ಕಾಂಗ್ರೆಸ್‍ಗೆ ಬಹುಮತ ಬರಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‍ನ ಕೊಡಗು ಚುನಾವಣಾ ವೀಕ್ಷಕ ವೆಂಕಪ್ಪ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ, ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಹಾಗೂ ಪ್ರಮುಖರಾದ ಜಾನ್ಸನ್ ಪಿಂಟೋ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X