Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಅಡಿಕೆಯಲ್ಲಿ ಔಷಧಿಯುಕ್ತ ಅಂಶ' ಕೇಂದ್ರ...

'ಅಡಿಕೆಯಲ್ಲಿ ಔಷಧಿಯುಕ್ತ ಅಂಶ' ಕೇಂದ್ರ ಸರಕಾರಕ್ಕೆ ಮಧ್ಯಂತರ ವರದಿ: ಕ್ಯಾಂಪ್ಕೋ

ವಾರ್ತಾಭಾರತಿವಾರ್ತಾಭಾರತಿ9 April 2018 5:17 PM IST
share
ಅಡಿಕೆಯಲ್ಲಿ ಔಷಧಿಯುಕ್ತ ಅಂಶ ಕೇಂದ್ರ ಸರಕಾರಕ್ಕೆ ಮಧ್ಯಂತರ ವರದಿ: ಕ್ಯಾಂಪ್ಕೋ

ಮಂಗಳೂರು, ಎ.9: ಅಡಿಕೆಯಲ್ಲಿರುವ ಔಷಧೀಯ ಅಂಶಗಳ ಬಗ್ಗೆ ಸಂಕಲನಗೊಳಿಸಿರುವ ಮಧ್ಯಂತರ ವರದಿಯನ್ನು ಕೇಂದ್ರ ಸರಕಾರಕ್ಕೆ ಎಪ್ರಿಲ್ 5ರಂದು ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಡಿಕೆ ಕ್ಯಾನ್ಸರ್ ಕಾರಕವಲ್ಲ. ಬದಲಾಗಿ ಅದು ಕ್ಯಾನ್ಸರನ್ನು ಗುಣಪಡಿಸುತ್ತದೆ ಎಂಬುದು ಇತ್ತೀಚಿನ ಸಂಶೋಧನೆಯಿಂದ ದೃಢಪಟ್ಟಿದೆ. ಈ ವರದಿಯನ್ನು ಕೇಂದ್ರ ಸರಕಾರದ ಕೃಷಿ ಸಚಿವ ರಾಧಮೋಹನ್ ಸಿಂಗ್ ಮತ್ತು ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಕ್ಯಾಂಪ್ಕೋ ಮತ್ತು ಕರ್ನಾಟಕ ರಾಜ್ಯ ಅಡಿಕೆ ಫೆಡರೇಶನ್‌ನ ಪ್ರತಿನಿಧಿಗಳು ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ನೇತೃತ್ವದಲ್ಲಿ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.

ಕೇಂದ್ರ ಕೃಷಿ ಸಚಿವರಲ್ಲಿ ಅಡಿಕೆಯ ಔಷಧೀಯ ಗುಣಗಳ ಸಂಶೋಧನೆಗೆ ಸಿಪಿಸಿಆರ್‌ಐನ್ನು ನೋಡಲ್ ಏಜೆನ್ಸಿಯಾಗಿ ನೇಮಕ ಮಾಡಿ ಅಡಿಕೆ ಬಗ್ಗೆ ರಾಸಾಯನಿಕ ಅನ್ವೇಷಣೆ, ಅಡಿಕೆ ತಿನ್ನುವ ಬಗ್ಗೆ ಸರ್ವೆ, ಔಷಧೀಯ ಗುಣಗಳ ಬಗ್ಗೆ ಸಂಶೋಧನೆಯನ್ನು ಸಿಎಸ್‌ಐಆರ್, ಸಿಐಎಂಎಪಿ, ಸಿಎಫ್‌ಟಿಆರ್‌ಐ, ಸಿಸಿಎಬಿ ಮತ್ತು ಬೆಂಗಳೂರಿನ ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್‌ಗಳ ಜತೆ ಸೇರಿ ಸಂಶೋಧನೆ ನಡೆಸಿ ವಿಸ್ತೃತ ವರದಿಯನ್ನು ತಯಾರಿಸಲು ಕೋರಲಾಗಿತ್ತು. ಇದೇ ಸಂದರ್ಭದಲ್ಲಿ ಆರೋಗ್ಯ ಸಚಿವರಲ್ಲಿ ಈ ವರದಿ ಬರುವವರೆಗೆ ಸರ್ವೋಚ್ಛ ನ್ಯಾಯಾಲಯದಲ್ಲಿರುವ ದಾವೆಯನ್ನು ಮುಂದುವರಿಸದಂತೆ ನ್ಯಾಯಾಲಯಕ್ಕೆ ಮನವಿ ನೀಡಲು ಒತ್ತಾಯಿಸಲಾಗಿತ್ತು ಎಂದು ಅವರು ವಿವರ ನೀಡಿದರು.

ಅಡಿಕೆ ಕ್ಯಾನ್ಸರ್ ಗುಣಪಡಿಸುವ ಗುಣವನ್ನು ಹೊಂದಿದೆ ಎಂದು 1974ರಲ್ಲಿ ಇಂಡಿಯನಂ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ವಿಜ್ಞಾನಿಗಳು ತಿಳಿಸಿದ್ದರು. ಇದೇ ಸಂಶೋಧನೆಯನ್ನು 2016ರಲ್ಲಿ ಅಮೆರಿಕದ ಖ್ಯಾತ ಎಮೆರಿ ವಿಶ್ವವಿದ್ಯಾನಿಲಯದಲ್ಲಿ ಸಂಶೋಧನೆಯಲ್ಲಿಯೂ ದೃಢಪಡಿಸಲಾಗಿದೆ. ಇದಲ್ಲದೆ ಅಡಿಕೆ ಡಯಬಿಟಿಸ್, ಕೊಲೆಸ್ಟ್ರಾಲ್ ಮತ್ತು ಹಾನಿಕಾರಕ ಬ್ಯಾಕ್ಟೀರಿಯಗಳನ್ನು ಕಡಿಮೆ ಮಾಡುವ ಶಕ್ತಿ ಇರುವುದಾಗಿಯೂ ಸಾಬೀತಾಗಿದೆ. ಅಡಿಕೆಯಿಂದ ಅಲ್ಜಿಮರ್, ಮರೆಗುಳಿತನ ಗುಣಪಡಿಸುವ ಶಕ್ತಿಯಿದೆ. ಪ್ರಾಣಿಗಳಲ್ಲಿನ ಹೊಟ್ಟೆ ಹುಳ ನಾಶಮಾಡಲು, ಚರ್ಮರೋಗ ಕಡಿಮೆ ಮಾಡಲು, ಗಾಯಗಳನ್ನು ಗುಣಮಪಡಿಸಲು ಅಡಿಕೆ ಉಪಯುಕ್ತ ಔಷಧಿ ಎಂದು ಸಾಬೀತಾಗಿದೆ. ಅಡಿಕೆಯನ್ನು ವಿಷ ಜಂತುಗಳ ಕಡಿತದಿಂದ ಆಗುವ ಅಪಾಯಗಳನ್ನು ತಡೆಗಟ್ಟುವ ವಾಂಟಿವೆನಮ್ ಆಗಿ ಬಳಸಬಹುದು ಎಂದೂ ಸಂಶೋಧನೆಯಿಂದ ದೃಢಪಟ್ಟಿದೆ. ಚೀನಾದ ಮೆಟಿರೀಯ ಮೆಡಿಕಾ ಔಷಧೀಯ ಪುಸ್ತಕದಲ್ಲಿ ಈ ಎಲ್ಲಾ ವಿಚಾರಗಳು ಉಲ್ಲೇಖಗೊಂಡಿವೆ. ಈ ಸಂಗತಿಗಳನ್ನು ಕೇಂದ್ರ ಸರಕಾರದ ಗಮನಕ್ಕೆ ತರಲಾಗಿದೆ. ಕೇಂದ್ರ ಸಚಿವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ಅಡಿಕೆ ದರದ ಬಗ್ಗೆ ಬೆಳೆಗಾರರು ಆತಂಕ ಪಡಬೇಕಾಗಿಲ್ಲ. ಈಗಾಗಲೇ ಎಪ್ರಿಲ್‌ನಿಂದ ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡು ಬಂದಿದೆ ಎಂದು ಅವರು ಹೇಳಿದರು. ಗೋಷ್ಠಿಯಲ್ಲಿ ಸುಬ್ರಹ್ಮಣ್ಯ ಭ್, ಕೇಶವ ಭಟ್ ಉಪಸ್ಥಿತರಿದ್ದರು.

ವದಂತಿಗಳಿಗೆ ಕಿವಿಕೊಡದಿರಿ

ಅಡಿಕೆ ಕುರಿತಂತೆ ಕೇಳಿ ಬರುತ್ತಿರುವ ಸುಳ್ಳು ವದಂತಿಗಳ ಬಗ್ಗೆ ಬೆಳೆಗಾರರು ಕಿವಿಗೊಡಬಾರದು. ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕ್ಯಾಂಪ್ಕೋ ಮತ್ತು ರಾಜ್ಯ ಅಡಿಕೆ ಫೆಡರೇಶನ್ ಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ಅಡಿಕೆ ಫೆಡರೇಶನ್‌ನ ಅಧ್ಯಕ್ಷ ಕೊಂಕೋಡಿ ಪದ್ಮನಾಭ ತಿಳಿಸಿರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X