Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಕಾರ್ಯಪ್ಪ ಕಾಲೇಜ್‍ನಲ್ಲಿ ಹಳೆ...

ಮಡಿಕೇರಿ: ಕಾರ್ಯಪ್ಪ ಕಾಲೇಜ್‍ನಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಸಂತೋಷ ಕೂಟ

ವಾರ್ತಾಭಾರತಿವಾರ್ತಾಭಾರತಿ9 April 2018 6:30 PM IST
share
ಮಡಿಕೇರಿ: ಕಾರ್ಯಪ್ಪ ಕಾಲೇಜ್‍ನಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಸಂತೋಷ ಕೂಟ

ಮಡಿಕೇರಿ, ಏ.9 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ವಾರ್ಷಿಕ ಸಂತೋಷ ಕೂಟ ಕಾಲೇಜಿನ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬ್ರಿಗೇಡಿಯರ್ ಪಟ್ರಪಂಡ ಮೊಣ್ಣಪ್ಪ ವಿದ್ಯಾರ್ಥಿ ಜೀವನದ ನೆನಪುಗಳನ್ನು ಮೆಲುಕು ಹಾಕಿದರು. ರಾಷ್ಟ್ರದ ಹಿತದೃಷ್ಟಿಯಿಂದ ನೆರೆಯ ರಾಷ್ಟ್ರಗಳೊಂದಿಗೆ ಸೌಹಾರ್ದತೆಯನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಂಗೀತ ವಿದೂಷಿ ಕಂಬೇಯಂಡ ಸೀತಾಲಕ್ಷ್ಮಿ ಮಾತನಾಡಿ, ಓಂಕಾರದಿಂದ ಆರಂಭಗೊಂಡ ಸಪ್ತಸ್ವರಗಳು ವಿದ್ಯಾರ್ಜನೆ, ಕೃಷಿ ಹಾಗೂ ಪ್ರಾಣಿಗಳ ಜೀವನ ಕ್ರಮಕ್ಕೂ ಸಹಕಾರಿಯಾಗಿದೆ ಎಂದರು. ಇದೇ ಸಂದರ್ಭ ಅವರು ಹಲವು ಸುಶ್ರಾವ್ಯ ಗೀತೆಗಳನ್ನು ಹಾಡಿದರು.

ಕಾರ್ಯಪ್ಪ ಕಾಲೇಜ್‍ನ ಪ್ರಾಂಶುಪಾಲರಾದ ಡಾ.ಪಾರ್ವತಿಅಪ್ಪಯ್ಯ ಮಾತನಾಡಿ ಹಳೆಯ ವಿದ್ಯಾರ್ಥಿಗಳಿಂದ ಕಾಲೇಜ್‍ಗೆ ಸಿಗುತ್ತಿರುವ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಸ್ತುತ ವಿದ್ಯಾರ್ಥಿಗಳು ಕಾಲೇಜ್‍ನ ಕೀರ್ತಿಗೆ ಪೂರಕವಾಗಿ ವಿದ್ಯಾರ್ಜನೆಯಲ್ಲಿ ತೊಡಗಿರುವ ಕುರಿತು ತಿಳಿಸಿದರು.

ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಣ್ಣಂಡ ಶೋಭಾ ಸುಬ್ಬಯ್ಯ ಮಾತನಾಡಿ ಸಂಘ ನಡೆದು ಬಂದ ಹಾದಿ ಹಾಗೂ ಸದಸ್ಯರ ಸಹಕಾರದ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ಇದೇ ಸಂದರ್ಭ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಎನ್‍ಸಿಸಿಯ ಉತ್ತಮ ಶಿಬಿರಾರ್ಥಿಗಳನ್ನು ಶೋಭಾ ಸುಬ್ಬಯ್ಯ ಅವರ ಹೆಸರಿನಲ್ಲಿ ಬಹುಮಾನ ನೀಡಿ ಗೌರವಿಸಲಾಯಿತು.  ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತು ಕಾಲೇಜು ವಿದ್ಯಾರ್ಥಿಗಳು ಮೈಮ್ ಶೋದ ಮೂಲಕ ಗಮನ ಸೆಳೆದರು. ಆಗಲಿದ ಸಂಘದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. 

ಸಂಘದ ಮಾಜಿ ಅಧ್ಯಕ್ಷರಾದ ಎನ್.ಎ.ಅಪ್ಪಯ್ಯ, ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಶೋಭಾ ಸುಬ್ಬಯ್ಯ ಸ್ವಾಗತಿಸಿ, ಆಲೆಮಾಡ ಚಿತ್ರಾ ನಂಜಪ್ಪ ನಿರೂಪಿಸಿ, ನೀಲಮ್ಮ ಪ್ರಾರ್ಥಿಸಿದರು, ಬೊಪ್ಪಂಡ ಶ್ಯಾಂ ಪೂಣಚ್ಚ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X