Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆ.ಎಸ್.ಪುಟ್ಟಣ್ಣಯ್ಯರಿಗೆ ‘ಬೋಧಿವೃಕ್ಷ'...

ಕೆ.ಎಸ್.ಪುಟ್ಟಣ್ಣಯ್ಯರಿಗೆ ‘ಬೋಧಿವೃಕ್ಷ' ಪ್ರಶಸ್ತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ9 April 2018 7:26 PM IST
share
ಕೆ.ಎಸ್.ಪುಟ್ಟಣ್ಣಯ್ಯರಿಗೆ ‘ಬೋಧಿವೃಕ್ಷ ಪ್ರಶಸ್ತಿ ಪ್ರಕಟ

ಬೆಂಗಳೂರು, ಎ. 9: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಜಯಂತಿ ಹಿನ್ನೆಲೆಯಲ್ಲಿ ‘ಅಂಬೇಡ್ಕರ್ ಶತಮಾನೋತ್ಸವ ಸಮಿತಿ ಟ್ರಸ್ಟ್’ ಹಾಗೂ ‘ಸ್ಫೂತಿಧಾಮ’ ನೀಡುವ 2018ರ ಪ್ರತಿಷ್ಠಿತ ‘ಬೋಧಿವೃಕ್ಷ’ ಪ್ರಶಸ್ತಿಗೆ(ಮರಣೋತ್ತರ) ರೈತ ಮುಖಂಡ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಬೋಧಿವೃಕ್ಷ ಪ್ರಶಸ್ತಿಯು 1ಲಕ್ಷ ರೂ.ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

‘ಬೋಧಿವರ್ಧನ’ ಪ್ರಶಸ್ತಿ : ಕಾರ್ಮಿಕ ಸಂಘಟನೆ ನಾಯಕಿ ಎಸ್.ವರಲಕ್ಷ್ಮೀ, ಪವಾಡ ರಹಸ್ಯ ಬಯಲು ಮೂಲಕ ವೈಚಾರಿಕ ಪ್ರಜ್ಞೆ ಮೂಡಿಸುತ್ತಿರುವ ಹುಲಿಕಲ್ ನಟರಾಜ್, ವಂಚಿತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ರೂಪಾ ಹಾಸನ, ಗಾಯಕ ಗೊಲ್ಲಹಳ್ಳಿ ಶಿವಪ್ರಸಾದ್ ಹಾಗೂ ದೇವದಾಸಿ ಹೆಣ್ಣುಮಕ್ಕಳ ಸಂಘಟಕಿ ಚಂದ್ರಮ್ಮಗೋಳ ಸೇರಿದಂತೆ ಐದು ಮಂದಿಯನ್ನು ‘ಬೋಧಿವರ್ಧನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ 20ಸಾವಿರ ರೂ.ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಎ.13 ಮತ್ತು 14ರಂದು ಮಾಗಡಿ ರಸ್ತೆಯ ಅಂಜನಾನಗರದಲ್ಲಿನ ‘ಸ್ಫೂರ್ತಿಧಾಮ’ದಲ್ಲಿ ಏರ್ಪಡಿಸಿರುವ ‘ಅಂಬೇಡ್ಕರ್ ಹಬ್ಬ’ ಕಾರ್ಯಕ್ರಮದಲ್ಲಿ ಬೋಧಿವೃಕ್ಷ ಮತ್ತು ಬೋಧಿವರ್ಧನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಉಪನ್ಯಾಸ: ಎ.13ರ ಸಂಜೆ 5ಗಂಟೆಗೆ ‘ಭಾರತದ ರಾಜಕೀಯ ಮತ್ತು ಧಾರ್ಮಿಕ ಸಂಕಥನದ ಬದಲಾಗುತ್ತಿರುವ ಚೌಕಟ್ಟುಗಳು’ ವಿಷಯದ ಕುರಿತು ಚಿಂತಕ ಪೊ.ರಾಮ್‌ಪುನಿಯಾನಿ ಉಪನ್ಯಾಸ ನೀಡಲಿದ್ದು, ಅಧ್ಯಕ್ಷತೆಯನ್ನು ಪತ್ರಕರ್ತ ಇಂದೂಧರ ಹೊನ್ನಾಪುರ ವಹಿಸಲಿದ್ದಾರೆ.

ಎ.14ರ ಬೆಳಗ್ಗೆ 11ಕ್ಕೆ ‘ನನ್ನ ದೇಶ, ನ್ನನ ಬದುಕು’ ವಿಷಯದ ಕುರಿತು ಸಾಂಸ್ಕೃತಿಕ ಸಂವಾದ ಏರ್ಪಡಿಸಿದ್ದು, ಪ್ರೊ.ಬಾಬುಮ್ಯಾಥ್ಯು, ಶ್ರೀಪಾದಭಟ್, ಪೀರ್ ಭಾಷಾ, ಡಾ.ಅಖಿಲಾ ವಾಸನ್, ವಿಜಯ್‌ಕುಮಾರ್ ಎಸ್., ಹಾಗೂ ಡಾ.ಬಿ.ಯು.ಸುಮಾ ಪಾಲ್ಗೊಳ್ಳಲಿದ್ದಾರೆ.

ಸಂಜೆ 5:30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಸಮಾರಂಭ ಜರುಗಲಿದ್ದು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್, ಸಂಸ್ಕೃತಿ ಚಿಂತಕ ಪ್ರೊ.ರಹಮತ್ ತರೀಕೆರೆ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಸ್ಫೂರ್ತಿಧಾಮ ಅಧ್ಯಕ್ಷ ಎಸ್.ಮರಿಸ್ವಾಮಿ ವಹಿಸಲಿದ್ದಾರೆಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X