Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ನಾಗರಿಕರಲ್ಲಿ ಆರೋಗ್ಯ ಕಾಳಜಿ...

ಹಿರಿಯ ನಾಗರಿಕರಲ್ಲಿ ಆರೋಗ್ಯ ಕಾಳಜಿ ಅಗತ್ಯ : ಡಾ. ವಿರೂಪಾಕ್ಷ

ವಾರ್ತಾಭಾರತಿವಾರ್ತಾಭಾರತಿ9 April 2018 8:50 PM IST
share
ಹಿರಿಯ ನಾಗರಿಕರಲ್ಲಿ ಆರೋಗ್ಯ ಕಾಳಜಿ ಅಗತ್ಯ : ಡಾ. ವಿರೂಪಾಕ್ಷ

 ಉಡುಪಿ, ಎ.9: ಹಿರಿಯ ನಾಗರಿಕರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ ಎಂದು ಉಡುಪಿಯ ಮನೋರೋಗ ತಜ್ಞ, ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ವೈದ್ಯ ಡಾ. ವಿರೂಪಾಕ್ಷ ದೇವರಮನೆ ತಿಳಿಸಿದ್ದಾರೆ.

ಸೋಮವಾರ ಅಜ್ಜರಕಾಡಿನ ರೆಡ್‌ಕ್ರಾಸ್ ಭವನದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಿವೃತ್ತಿಯ ನಂತರ ಹಿರಿಯ ನಾಗರಿಕರಿಗೆ ವಯೋ ಸಹಜವಾದ ಮರೆ ಗುಳಿತನ, ಕಿವಿ ಕೇಳಿಸದಿರುವುದು, ಕಣ್ಣು ಕಾಣಿಸದಿರುವುದು, ಮನೋ ದೈಹಿಕ ಕಾಯಿಲೆ ಮುಂತಾದ ಸಮಸ್ಯೆಗಳು ಬರುವುದು ಸಹಜ. ಆದರೆ ಇವುಗಳಿಗೆ ಸೂಕ್ತ ಚಿಕಿತ್ಸೆ ಪಡೆಯುವುದರ ಮೂಲಕ ಆರೋಗ್ಯಕರ ಜೀವನ ನಡೆಸಬಹುದು ಎಂದರು.

ಇತ್ತೀಚೆಗೆ ಖಿನ್ನತೆ ಸಹ ಹಿರಿಯ ನಾಗರಿಕರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಯುವಜನತೆಯನ್ನು ಹೊರತು ಪಡಿಸಿದರೆ ಖಿನ್ನತೆಯಿಂದ ಅತಿಹೆಚ್ಚು ಆತ್ಮಹತ್ಯೆ ಪ್ರಕರಣಗಳು ಹಿರಿಯ ನಾಗರಿಕರಲ್ಲಿ ಕಂಡುಬರುತ್ತಿದೆ. ಪ್ರತಿನಿತ್ಯ ಯಾವುದಾ ದರೊಂದು ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ, ಸಮಾನ ಮನಸ್ಕರೊಂದಿಗೆ ಬೆರೆಯುವ ಮೂಲಕ ಹಾಗೂ ತಮ್ಮಲ್ಲಿನ ಅಹಂ ಸಿಟ್ಟು ಇವು ಗಳನ್ನು ಕಡಿಮೆ ಮಾಡಿಕೊಳ್ಳುವುದರಿಂದ ಸಂತೋಷಕರ ಜೀವನ ಸಾಗಿಸಲು ಸಾಧ್ಯವಿದೆ ಎಂದರು.

ನಿವೃತ್ತಿಯ ನಂತರ ಯಾವುದಾದರೂ ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು. ಕ್ಷಮಾಗುಣ ಮತ್ತು ಹೊಂದಾಣಿಕೆ ಗುಣಗಳನ್ನು ಬೆಳಸಿಕೊಳ್ಳಬೇಕು ಎಂದು ಡಾ.ವಿರೂಪಾಕ್ಷ ಹೇಳಿದರು. ಹಿರಿಯ ನಾಗರಿಕರಲ್ಲಿ ವಯೋಸಹಜವಾಗಿ ಕಂಡುಬರುವ ವಿವಿಧ ದೈಹಿಕ ಮತ್ತು ಮಾನಸಿಕ ರೋಗಗಳ ಕುರಿತು ವಿವರಿಸಿದ ಡಾ. ವಿರೂಪಾಕ್ಷ, ಇವುಗಳನ್ನು ಸೂಕ್ತ ಸಮಯದಲ್ಲಿ ಗುರುತಿಸಿ ಚಿಕಿತ್ಸೆ ಪಡೆದಲ್ಲಿ ಸಂಪೂರ್ಣ ಗುಣಮುಖರಾಗಲು ಸಾಧ್ಯ ಎಂದರು.

ರೆಡ್‌ಕ್ರಾಸ್‌ನ ಅಧ್ಯಕ್ಷ ಡಾ. ಉಮೇಶ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಸಿ.ಎಸ್.ರಾವ್, ರೆಡ್ ಕ್ರಾಸ್‌ನ ಖಜಾಂಜಿ ಟಿ.ಚಂದ್ರಶೇಖರ್, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ರೆಡ್‌ಕ್ರಾಸ್‌ನ ಉಪ ಸಭಾಪತಿ ಡಾ.ಅಶೋಕ್ ಕುಮಾರ್ ಸ್ವಾಗತಿಸಿ ಜಯರಾಮ ಆಚಾರ್ಯ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X