Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೈರಂಗಳ: ಆರೋಪಿಗಳ ಬಂಧನದ ಭರವಸೆ; ಉಪವಾಸ...

ಕೈರಂಗಳ: ಆರೋಪಿಗಳ ಬಂಧನದ ಭರವಸೆ; ಉಪವಾಸ ಅಂತ್ಯಗೊಳಿಸಿದ ರಾಜಾರಾಮ ಭಟ್

ವಾರ್ತಾಭಾರತಿವಾರ್ತಾಭಾರತಿ9 April 2018 10:34 PM IST
share
ಕೈರಂಗಳ: ಆರೋಪಿಗಳ ಬಂಧನದ ಭರವಸೆ; ಉಪವಾಸ ಅಂತ್ಯಗೊಳಿಸಿದ ರಾಜಾರಾಮ ಭಟ್

ಕೊಣಾಜೆ, ಎ. 9: ಗೋ ಹಂತಕರ ಬಂಧನಕ್ಕಾಗಿ ಹಾಗೂ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿ ಕಳೆದ ಒಂಭತ್ತು ದಿನಗಳಿಂದ ಪುಣ್ಯಕೋಟಿನಗರದ ಅಮೃತಧಾರಾ ಗೋಶಾಲೆಯಲ್ಲಿ ರಾಜಾರಾಮ ಭಟ್ ನೇತೃತ್ವದಲ್ಲಿ ನಡೆಯುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವು ಸೋಮವಾರ ಅಂತ್ಯಗೊಂಡಿತು.

ಆಸ್ಪತ್ರೆಯಿಂದ ಶುಕ್ರವಾರ ರಾತ್ರಿ ಪುಣ್ಯಕೋಟಿನಗರದ ಗೋಶಾಲೆಗೆ ಆಗಮಿಸಿದ್ದ ರಾಜಾರಾಮ ಭಟ್ ಅವರಿಗೆ ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ ಹಾಲು ನೀಡಿದ ಬಳಿಕ ಉಪವಾಸ ಸತ್ಯಾಗ್ರಹವು ಕೊನೆಗೊಂಡಿತು.

ಸೋಮವಾರ ಸಂಜೆ ದೇರಳಕಟ್ಟೆಯ ಆಸ್ಪತ್ರೆಗೆ ಭೇಟಿ ನೀಡಿ ರಾಜಾರಾಮ ಭಟ್ ಅವರ ಆರೋಗ್ಯ ವಿಚಾರಿಸಿದ ಪೊಲೀಸ್ ಕಮೀಷನರ್ ಸುರೇಶ್ ಅವರು ಭಟ್ ಅವರೊಂದಿಗೆ ಮಾತುಕತೆ ನಡೆಸಿ ಗೋ ಹಂತಕರನ್ನು ಶೀಘ್ರವಾಗಿ ಬಂಧಿಸಿ ನ್ಯಾಯವನ್ನು ಒದಗಿಸಿಕೊಡುವ ಭರವಸೆಯನ್ನು ನೀಡಿದ್ದಾರೆ. ಭರವಸೆಯಂತೆ ರಾಜಾರಾಮ ಭಟ್ ಅವರು ಸತ್ಯಾಗ್ರಹವನ್ನು ಕೈ ಬಿಡುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಹಾಯಕ ಕಮಿಷನರ್ ಮಹೇಶ್ ಕರ್ಜಗಿ ಅವರು ಉಪಸ್ಥಿತರಿದ್ದರು.

ಪೇಜಾವರ ಸ್ವಾಮೀಜಿ ಭೇಟಿ

ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ ಅವರು ಗೋ ಕಳ್ಳತನದ ಆರೋಪಿಗಳು ಯಾರೂ ಅಂತ ಗೊತ್ತಿದ್ದರೂ ಅಪರಾಧಿಗಳನ್ನು ಹಿಡಿಯುವಲ್ಲಿ ಸರಕಾರ, ಪೊಲೀಸ್ ಇಲಾಖೆ ನಿಷ್ಕ್ರೀಯಗೊಂಡಿರುವುದು ದೊಡ್ಡ ದುರಂತವಾಗಿದೆ ಮಾತ್ರವಲ್ಲದೆ ಇದು ನಾಚಿಕೆಗೇಡಿನ ವಿಚಾರವಾಗಿದೆ. ಗೋವಿಗಾಗಿ ನಡೆಯುವ ಮುಂದಿನ ಹೋರಾಟಕ್ಕೆ ನಾನು ಸದಾ ಸಿದ್ಧನಿದ್ದೇನೆ. ನೀವು ಕರೆದಾಗ ನಾನು ಖಂಡಿತಾ ಬರುತ್ತೇನೆ. ಗೋ ಹಂತಕರ ಪತ್ತೆಗಾಗಿ ಹಾಗೂ ನ್ಯಾಯಕ್ಕಾಗಿ ಆಗ್ರಹಿಸಿ ಕಳೆದ 9 ದಿನಗಳಿಂದ ರಾಜಾರಾಮ ಭಟ್ ಅವರು ಗೋವಿಗಾಗಿ ನಡೆಸಿದ ಉಪವಾಸ ಸತ್ಯಾಗ್ರಹವು ರಾಷ್ಟ್ರಮಟ್ಟದಲ್ಲಿ ಗೋವಿನ ಹೋರಾಟಕ್ಕೆ ಸ್ಪೂರ್ತಿ ತಂದಿದೆ. ಗೋವಿಗಾಗಿ ನಡೆಯುವ ಇಂತಹ ಹೋರಾಟವು ಮತ್ತಷ್ಟು ಪ್ರಬಲಗೊಂಡು ಎಲ್ಲರೂ ಇದಕ್ಕೆ ಕೈ ಜೋಡಿಸಬೇಕಾಗಿದೆ ಎಂದು ಸ್ವಾಮೀಜಿ ಹೇಳಿದರು.

ಹೋರಾಟ : ರಾಜಾರಾಮ ಭಟ್

ರಾಜಾರಾಮ ಭಟ್  ಮಾತನಾಡಿ, ಪೊಲೀಸ್ ಇಲಾಖೆ ದುಷ್ಕರ್ಮಿಗಳನ್ನು ಕೆಲವೇ ದಿನಗಳಲ್ಲಿ ಬಂಧಿಸುವ ಭರವಸೆಯನ್ನು ನೀಡಿದ್ದಾರೆ. ಈ ವಿಶ್ವಾಸದಿಂದ ಉಪವಾಸ ಸತ್ಯಾಗ್ರಹವನ್ನು ಇಂದು ಕೊನೆಗೊಳಿಸಿದ್ದೇನೆ. ಕಳೆದ ಒಂಭತ್ತು ದಿನಗಳಿಂದ ನಡೆದ ಹೋರಾಟಕ್ಕೆ ಎಲ್ಲರೂ ಜಾತಿ ಭೇದ ಮರೆತು ಬೆಂಬಲ ವ್ಯಕ್ತಪಡಿಸಿ ಹೋರಾಟದ ಯಶಸ್ವಿಗೆ ಕಾರಣಕರ್ತರಾಗಿದ್ದಾರೆ. ಇನ್ನು ಎರಡು ತಿಂಗಳಲ್ಲಿ ನೂತನ ಸರಕಾರ ಅಸ್ತಿತ್ವಕ್ಕೆ ಬರಲಿದ್ದು, ಬಳಿಕ ಹೊಸ ಸರಕಾರ ಗೋ ಹತ್ಯೆ ಕಾನೂನನ್ನು ಜಾರಿ ಮಾಡದೇ ಇದ್ದಲ್ಲಿ ಹೋರಾಟ ಮತ್ತೆ ಇಲ್ಲಿಂದಲೇ ಆರಂಭಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಲ್ಲಡ್ಕ ಪ್ರಭಾಕರ ಭಟ್, ಎಂ.ಬಿ,ಪುರಾಣಿಕ್, ಪ್ರಭಾವತಿ ನೀರೋಳಿಕೆ, ಸಂತೋಷ್ ಕುಮಾರ್ ಬೋಳಿಯಾರ್, ನಂದರಾಜ ಶೆಟ್ಟಿ ಪಿಜಿನ ಬೈಲ್, ಶರಣ್ ಪಂಪುವೆಲ್, ಗೋಪಾಲ್ ಕುತ್ತಾರ್, ರಾಧಾಕೃಷ್ಣ ಅಡ್ಯಂತ್ಯಾಯ, ಕೊಣಾಜೆ ಶಂಕರ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಭಟ್ ಅವರಿಗೆ ನ್ಯಾಯದ ಭರವಸೆ

ಗೋಕಳ್ಳರ ಪತ್ತೆಗಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದು, ತನಿಖೆಯ ಪ್ರಗತಿಯ ಬಗ್ಗೆ ಭಟ್ ಅವರಲ್ಲಿ ವಿವರಿಸಿದ್ದೇವೆ. ಅತೀ ಶೀಘ್ರದಲ್ಲಿ ಗೋ ಹಂತಕರನ್ನು ಬಂಧಿಸುತ್ತೇವೆ ಎಂದು ಹೇಳಿದ್ದೇವೆ. ಉಪವಾಸ ಕೈಬಿಡುವಂತೆ ನಾವು ಭಟ್ ಅವರಲ್ಲಿ ಮನವಿ ಮಾಡಿದ್ದು ಇದಕ್ಕೆ ಅವರು ಸ್ಪಂದಿಸಿದ್ದು ಉಪವಾಸ ಸತ್ಯಾಗ್ರಹವನ್ನು ಕೈ ಬಿಡಲು ಒಪ್ಪಿಕೊಂಡಿದ್ದಾರೆ.
- ಟಿ.ಆರ್.ಸುರೇಶ್, ಪೊಲೀಸ್ ಆಯುಕ್ತರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X