Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸತಿಪತಿಗಳೊಂದಾದ ಭಕ್ತಿ

ಸತಿಪತಿಗಳೊಂದಾದ ಭಕ್ತಿ

ರಂಜಾನ್ ದರ್ಗಾರಂಜಾನ್ ದರ್ಗಾ9 April 2018 11:54 PM IST
share
ಸತಿಪತಿಗಳೊಂದಾದ ಭಕ್ತಿ

ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ.

ಸತಿಪತಿಗಳೊಂದಾಗದವನ ಭಕ್ತಿ

 ಅಮೃತದೊಳು ವಿಷ ಬೆರೆದಂತೆ ಕಾಣಾ! ರಾಮನಾಥಾ

-ಜೇಡರ ದಾಸಿಮಯ್ಯ

ಆದ್ಯ ವಚನಕಾರ ಜೇಡರ ದಾಸಿಮಯ್ಯನವರ ವಚನಗಳಲ್ಲಿ ಜೀವನಶ್ರದ್ಧೆ ಮತ್ತು ಕುಟುಂಬ ಪ್ರೀತಿ ಮಡುಗಟ್ಟಿವೆ. ವ್ಯಕ್ತಿ, ಕುಟುಂಬ, ಸಮಾಜ ಮತ್ತು ವಿಶ್ವ ಈ ನಾಲ್ಕೂ ಅಂಶಗಳನ್ನು ಪ್ರತಿಯೊಬ್ಬರೂ ಗಮನದಲ್ಲಿಟ್ಟುಕೊಂಡು ಸಹಬಾಳ್ವೆ ನಡೆಸಬೇಕಾಗುತ್ತದೆ. ಶರಣರ ಗುರಿ ಸಹಬಾಳ್ವೆಯ ಧರ್ಮವನ್ನು ಸ್ಥಾಪಿಸುವುದೇ ಆಗಿತ್ತು. ಕುಟುಂಬದಲ್ಲಿ, ಸಮಾಜದಲ್ಲಿ ಮತ್ತು ಸಕಲ ಜೀವರಾಶಿಯೊಂದಿಗೆ ಸಹಬಾಳ್ವೆ ಮಾಡುವ ಕಲೆಯನ್ನು ಶರಣಧರ್ಮ ಕಲಿಸುತ್ತದೆ. ಸ್ತ್ರೀ ಪುರುಷ ಸಮಾನತೆಯೊಂದಿಗೆ ವ್ಯಕ್ತಿಸ್ವಾತಂತ್ರ್ಯ, ಕೌಟುಂಬಿಕ ಜವಾಬ್ದಾರಿ, ಸಾಮಾಜಿಕ ಕಾಳಜಿ ಮತ್ತು ವಿಶ್ವಪ್ರಜ್ಞೆ ಮೂಲಕ ಶರಣಧರ್ಮ ವಿಶ್ವಮಾನವಧರ್ಮವಾಗುತ್ತದೆ. ಕೃಷಿ ಸಂಸ್ಕೃತಿಯ ಜನಪದ ಧರ್ಮ ಶರಣರ ಅಂತಃಕರಣದಿಂದ ವಿಶ್ವಧರ್ಮವಾಯಿತು. ಇಂಥ ಧರ್ಮಕ್ಕೆ ಬುನಾದಿಯನ್ನು ಹಾಕಿದವರಲ್ಲಿ ಜೇಡರ ದಾಸಿಮಯ್ಯನವರು ಹಿರಿಯರು. ಅವರ ಶೈಲಿ ಕೂಡ ಜಾನಪದೀಯವಾಗಿದೆ. ಅವರ ವಚನಗಳ ಮೇಲೆ ತ್ರಿಪದಿಯ ಪ್ರಭಾವವಿದೆ.

ಸರಳತೆ ಮತ್ತು ತಿಳಿವಳಿಕೆಯಿಂದ ಕೂಡಿದ ದಾಂಪತ್ಯವು ಕಷ್ಟಕರ ಬದುಕಿನಲ್ಲಿ ಕೂಡ ನೆಮ್ಮದಿಯನ್ನು ನೀಡುವ ಸಾಮರ್ಥ್ಯವನ್ನು ಹೊಂದಿದೆ ಎಂಬ ಸತ್ಯವನ್ನು ಜೇಡರ ದಾಸಿಮಯ್ಯನವರು ತಮ್ಮ ಈ ವಚನದಲ್ಲಿ ದಾಖಲಿಸಿದ್ದಾರೆ. ಶರಣಧರ್ಮವು ಸತಿಪತಿ ಧರ್ಮವೇ ಆಗಿದೆ. ಮಾನಸಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಒಂದಾದ ಸತಿಪತಿಗಳ ಆತ್ಮಸಾಂಗತ್ಯದ ಭಕ್ತಿ ಮಂಗಳಮಯವಾದ ಶಿವನಿಗೆ ಹಿತ ಎನಿಸುವುದು. ಹಿತಕರವಾದ ದಾಂಪತ್ಯವು ಐಹಿಕ ವಸ್ತುಗಳ ಕೊರತೆಯನ್ನು ಕೂಡ ನಿವಾರಿಸುವಂಥ ಅರಿವನ್ನು ಮೂಡಿಸುತ್ತದೆ. ಏನೇ ಬಂದರೂ ತೃಪ್ತಭಾವದಿಂದ ಸ್ವೀಕರಿಸುವ ಸಂಯಮವನ್ನು ಸೃಷ್ಟಿಸುತ್ತದೆ. ‘ಬಂದುದನರಿದು ಬಳಸುವಳು, ಬಂದುದ ಪರಿಣಾಮಿಸುವಳು, ಬಂಧು ಬಳಗವ ಮರಸುವಳು ದುಗ್ಗಳೆಯ ತಂದು ಬದುಕಿದೆನು ಕಾಣಾ! ರಾಮನಾಥಾ.’ ಎಂದು ಜೇಡರ ದಾಸಿಮಯ್ಯನವರು ಇನ್ನೊಂದು ವಚನದಲ್ಲಿ ಧರ್ಮಪತ್ನಿ ದುಗ್ಗಳೆಯ ಗುಣಗಾನ ಮಾಡಿದ್ದಾರೆ. ಅವರ ಅನ್ಯೋನ್ಯ ದಾಂಪತ್ಯವು ‘ಜೀವಭೇದವಿಲ್ಲ’ ಎಂಬ ಮೂಲತತ್ತ್ವದ ಸಂಕೇತವಾಗಿದೆ. ‘ಸತಿಪತಿಗಳೊಂದಾಗದವನ ಭಕ್ತಿ ಅಮೃತದೊಳು ವಿಷ ಬೆರೆದಂತೆ’ ಎಂದು ಹೇಳುವಲ್ಲಿ ಅವರು ಸ್ತ್ರೀವಾದಿ ನಿಲುವನ್ನು ತಾಳಿದ್ದಾರೆ. ಅಂತೆಯೆ ಸತಿ ಪತಿ ಒಂದಾಗುವಲ್ಲಿ ಪತಿಯ ಪಾತ್ರವೇ ಮುಖ್ಯ ಎಂಬುದನ್ನು ಸೂಚಿಸುತ್ತಾರೆ. ಸತಿಯ ಇಚ್ಛೆಯನ್ನರಿಯದೆ ಬದುಕುವ ಪತಿಯ ಭಕ್ತಿ ಅಮೃತದಲ್ಲಿ ವಿಷ ಕೂಡಿಸಿದಂತೆ ಎಂದು ಎಚ್ಚರಿಸಿದ್ದಾರೆ.

share
ರಂಜಾನ್ ದರ್ಗಾ
ರಂಜಾನ್ ದರ್ಗಾ
Next Story
X