ಟಿಕೆಟ್ ಸಿಗದವರು ಪ್ರತಿಭಟಿಸುವುದು ಸಹಜ: ಆರ್.ಅಶೋಕ್

ಬೆಂಗಳೂರು, ಎ.10: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಆಕಾಂಕ್ಷಿಗಳು ಪ್ರತಿಭಟಿಸುವುದು ಸಹಜವಾಗಿದ್ದು, ಇದನ್ನು ದೊಡ್ಡದು ಮಾಡುವ ಅಗತ್ಯವಿಲ್ಲವೆಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದರು. ಆದರೆ, ಕಾರಣಾಂತರಗಳಿಂದ ಅವರಿಗೆ ಟಿಕೆಟ್ ಕೈತಪ್ಪಿದೆ. ಹೀಗಾಗಿ ಅವರು ಪ್ರತಿಭಟನೆ ನಡೆಸುತ್ತಿರುವುದು ಸಹಜವೆಂದು ತಿಳಿಸಿದರು.
ಬಿಜೆಪಿಯಲ್ಲಿ ಟಿಕೆಟ್ ಸಿಗದ ಆಕಾಂಕ್ಷಿಗಳು ಬೇರೆ ಪಕ್ಷಗಳಿಗೆ ಹೋಗುತ್ತಾರೆ ಎಂಬ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಇದರಲ್ಲಿ ಯಾವುದೆ ಸತ್ಯಾಂಶವಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಸಿಟ್ಟು ಮಾಡಿಕೊಳ್ಳುವುದು ಸಹಜವಾಗಿದೆ. ಇದನ್ನೆ ನೆಪವಾಗಿಟ್ಟು ಬಿಜೆಪಿ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸುವುದು ಸರಿಯಲ್ಲವೆಂದು ತಿಳಿಸಿದರು.
Next Story





