‘ಮಂಗಳೂರು ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ 2018’ ಸಮಾರೋಪ ಸಮಾರಂಭ
ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರು, ಎ. 10: ಬ್ಯಾರೀಸ್ ಸ್ಪೋರ್ಟ್ಸ್ ಪ್ರಮೋಟರ್ಸ್ ನಗರದ ಲಾಲ್‌ಬಾಗ್‌ನ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ‘ಮಂಗಳೂರು ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ 2018’ನ ಬಹುಮಾನ ವಿತರಣೆ ಕಾರ್ಯಕ್ರಮ ರವಿವಾರ ನಡೆಯಿತು.
ನವರಂಗ್ ಫೈಟರ್ಸ್ ವಿನ್ನರ್ಸ್ ಪ್ರಶಸ್ತಿ ಪಡೆದುಕೊಡರೆ, ರನ್ನರ್ಸ್ ಪ್ರಶಸ್ತಿಯನ್ನು ಸೀ ವೇಸ್ ಶಟರ್ ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಮುಹಮ್ಮದ್ ನಝೀರ್, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಅಧ್ಯಕ್ಷ ಹಾಜಿ ಎಸ್.ಎಂ.ರಶೀದ್, ಪಿ.ಸಿ.ಗ್ರೂಪ್‌ನ ಎಂಡಿ ಪಿ.ಸಿ.ಹಾಶಿರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ, ಲಯನ್ಸ್ ಕ್ಲಬ್ ಜಿಲ್ಲಾ ವೈಸ್ ಗವರ್ನರ್ ರೊನಾಲ್ಡ್ ಗೋಮ್ಸ್, ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಬ್ಯಾರಿ ಸ್ಪೋರ್ಟ್ಸ್ ಪ್ರಮೋಟರ್ಸ್‌ನ ಅಧ್ಯಕ್ಷ ಮುಹಮ್ಮದ್ ನೂರ್ ಉಪಸ್ಥಿತರಿದ್ದರು
Next Story





