Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್ಸಿ-ಎಸ್ಟಿ, ಓಬಿಸಿ ಮತಗಳಿಕೆಗೆ...

ಎಸ್ಸಿ-ಎಸ್ಟಿ, ಓಬಿಸಿ ಮತಗಳಿಕೆಗೆ ಗಮನಹರಿಸದಿದ್ದರೆ ಬಿಜೆಪಿಗೆ ಸೋಲು: ಬಿ.ಎಸ್.ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ11 April 2018 7:20 PM IST
share
ಎಸ್ಸಿ-ಎಸ್ಟಿ, ಓಬಿಸಿ ಮತಗಳಿಕೆಗೆ ಗಮನಹರಿಸದಿದ್ದರೆ ಬಿಜೆಪಿಗೆ ಸೋಲು: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಎ. 11: ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರ ಬಗ್ಗೆ ಗಮನಹರಿಸದಿದ್ದರೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಬರುವುದಿಲ್ಲ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಇಲ್ಲಿನ ಅರಮನೆ ಮೈದಾನದಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ 1 ತಿಂಗಳ ಕಾಲ ಮನೆ-ಮಠ ಮರೆತು ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸಲು ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವರ ತಂಡವೇ ರಾಜ್ಯ ಪ್ರವಾಸ ಮಾಡಿದೆ. ಬೇರೆ ಯಾವುದೇ ಚುನಾವಣೆಯಲ್ಲಿ ಕೇಂದ್ರದ ತಂಡ ಇಷ್ಟೊಂದು ದೊಡ್ಡ ಮಟ್ಟದಲ್ಲಿ ತೊಡಗಿಸಿಕೊಂಡ ಉದಾಹರಣೆ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬಿಜೆಪಿ ಮೇಲೆ ಕೆಸರು ಎರಚುವ ಬಗ್ಗೆ ಎಚ್ಚರ ವಹಿಸಬೇಕು. ಆದರೆ, ಯಾವುದೇ ಕಾರಣಕ್ಕೂ ಕಾನೂನು ಮೀರಬಾರದು ಎಂದು ಸಲಹೆ ಮಾಡಿದ ಅವರು, ಅಭ್ಯರ್ಥಿ ಸೋಲು ಬಿಜೆಪಿ ಪಕ್ಷದ ಸೋಲು. ಹೀಗಾಗಿ, ಪ್ರತಿಬೂತ್‌ನಲ್ಲಿ ಶೇ.70ಕ್ಕಿಂತ ಹೆಚ್ಚು ಮತ ಪಡೆಯಲು ಮನವೊಲಿಸುವ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.

ಕಾಂಗ್ರೆಸ್ ಆಡಳಿತದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ನೀರಾವರಿಗೆ ಆದ್ಯತೆ ನೀಡಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೀರಾವರಿಗಾಗಿ 1ಲಕ್ಷ ಕೋಟಿ ರೂ.ಅನುದಾನವನ್ನು ಒದಗಿಸುವ ಮೂಲಕ ಸಂಕಷ್ಟದಲ್ಲಿರುವ ರೈತರ ಕಣ್ಣೀರು ಒರೆಸುವೆ ಎಂದು ಅಭಯ ನೀಡಿದರು.

ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರದಲ್ಲೆ ಅಸ್ತಿತ್ವ ಕಳೆದುಕೊಂಡಿದ್ದು, ಕಾಂಗ್ರೆಸ್ ಸೋಲು ಮೈಸೂರಿನಿಂದಲೇ ಆರಂಭವಾಗಲಿದೆ ಎಂದು ಭವಿಷ್ಯ ನುಡಿದ ಬಿಎಸ್‌ವೈ, ಈಗಾಗಲೇ ಬಿಡುಗಡೆ ಮಾಡಿರುವ 72ಅಭ್ಯರ್ಥಿಗಳ ಪಟ್ಟಿಯಲ್ಲಿ 68 ಸ್ಥಾನ ಗೆಲ್ಲಲಿದ್ದೇವೆ. 2ನೆ ಹಂತದ ಪಟ್ಟಿಯಲ್ಲಿ 80 ಸ್ಥಾನ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಾಗಾರದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್, ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X