ಕಡಿಯಾಳಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ
ಉಡುಪಿ, ಎ.11: ಇಲ್ಲಿನ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ಶಾಲಾ ಸಂಚಾಲಕ ವಕ್ವಾಡಿ ಗುರುರಾಜ ಭಟ್‌ರ ನೇತೃತ್ವದಲ್ಲಿ ನೂತನ ಆಡಳಿತ ಮಂಡಳಿಯನ್ನು ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದು, ಶಾಲೆಯನ್ನು ಅಭಿವೃದಧಿ ಪಡಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ.
150 ವರ್ಷಗಳ ಭವ್ಯ ಇತಿಹಾಸವಿರುವ ಈ ಶಾಲೆಯಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಅಲ್ಲದೇ ಶಾಲಾ ಸಿಲೆಬಸ್‌ನೊಂದಿಗೆ ಭಾರತೀಯ ಸಂಸ್ಕೃತಿಯ ವೌಲ್ಯಗಳನ್ನು ಬಿಂಬಿಸುವ ಶಿಕ್ಷಣವನ್ನು ನೀಡಿ ಮಾದರಿ ಶಿಕ್ಷಣ ಸಂಸ್ಥೆಯಾಗಿ ರೂಪಿಸಲು ಸಂಕಲ್ಪಿಸಲಾಗಿದೆ.
ಕಡಿಯಾಳಿ ಆಂಗ್ಲ ಮಾದ್ಯಮ ಶಾಲೆಯು ಇದೇ ವರ್ಷದ ಜೂನ್ ತಿಂಗಳಿ ನಿಂದ ಪ್ರಾರಂಭಗೊಳ್ಳಲಿದೆ. ವಿದ್ಯಾರ್ಥಿಗಳ ದಾಖಲಾತಿ ಈಗಾಗಲೇ ಆರಂಭಗೊಂಡಿದೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





