Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶತಮಾನ ಕಂಡ ಹಿರಿಯಡ್ಕ ಗೋಪಾಲರಾಯರಿಗೆ...

ಶತಮಾನ ಕಂಡ ಹಿರಿಯಡ್ಕ ಗೋಪಾಲರಾಯರಿಗೆ ಸನ್ಮಾನ

ಎ. 14ರಿಂದ ಅಂಬಲಪಾಡಿ ಯಕ್ಷಗಾನ ಕಲಾಮಂಡಳಿಯ 60ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ11 April 2018 8:51 PM IST
share
ಶತಮಾನ ಕಂಡ ಹಿರಿಯಡ್ಕ ಗೋಪಾಲರಾಯರಿಗೆ ಸನ್ಮಾನ

ಉಡುಪಿ, ಎ.11: ಅಂಬಲಪಾಡಿ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿ ತನ್ನ ಸ್ಥಾಪನೆಯ 60ನೇ ವರ್ಷಾಚರಣೆಯನ್ನು ‘ಅರ್ವತ್ತರ ಅರ್ಪಣೆ’ ಯಾಗಿ ಎ.14ರಿಂದ 19ರವರೆಗೆ ಜಿಲ್ಲೆಯ ವಿವಿದೆಡೆಗಳಲ್ಲಿ ಆಚರಿಸಲಿದೆ ಎಂದು ಸಂಘದ ಅಧ್ಯಕ್ಷ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಡೆಕಾರ್, ಜಿಲ್ಲೆಯ ಐದು ಸ್ಥಳಗಳಲ್ಲಿ ಮಂಡಳಿಯ ಕಲಾವಿದರು ಕಲಾರಸಿಕರಿಗೆ ಆರು ಯಕ್ಷಗಾನ ಪ್ರದರ್ಶನಗಳನ್ನು ನೀಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭಗಳು ಅಂಬಲಪಾಡಿಯ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆಯಲಿದೆ ಎಂದರು.

ಉಳಿದಂತೆ ಶಿರ್ವದ ಬಸ್‌ನಿಲ್ದಾಣದ ಬಳಿ, ಹಂಗಾರಕಟ್ಟೆ ಯಕ್ಷಗಾನ ಕೇಂದ್ರ, ಮಂದಾರ್ತಿ ದೇವಸ್ಥಾನದ ಮುಂಭಾಗ, ಬ್ರಹ್ಮಾವರದ ಬಸ್‌ನಿಲ್ದಾಣದ ಸಮೀಪ ಪ್ರದರ್ಶನಗಳು ಸಂಪನ್ನಗೊಳ್ಳಲಿದೆ. ದಿನಕ್ಕೊಬ್ಬರಂತೆ ಆರು ಮಂದಿ ಹವ್ಯಾಸಿ ಯಕ್ಷಗಾನ ಕಲಾವಿದರಾದ ನಾರಾಯಣ ಪ್ರಭು ಗುಳ್ಮೆ, ಕೆ.ಜಿ ಮಂಜುನಾಥ, ಶಶಿಕಲಾ ಎಂ ಪ್ರಭು, ರತ್ನಾಕರ ಆಚಾರ್ಯ, ಎಚ್. ಸುಜಯೀಂದ್ರ ಹಂದೆ ಮತ್ತು ಕೃಷ್ಣಮೂರ್ತಿ ತುಂಗ ಇವರಿಗೆ 60ರ ಪುರಸ್ಕಾರ ಅರ್ಪಿಸಲಾಗುವುದು ಎಂದು ಮುರಲಿ ಕಡೆಕಾರ್ ತಿಳಿಸಿದರು.

‘ಅರ್ವತ್ತರ ಅರ್ಪಣೆ’ಯನ್ನು ಎ.14ರ ಶನಿವಾರ ಸಂಜೆ 6:30ಕ್ಕೆ ಅಂಬಲಪಾಡಿ ನಿ.ಬೀ.ಅಣ್ಣಾಜಿ ಬಲ್ಲಾಳ್ ವೇದಿಕೆಯಲ್ಲಿ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದಾರೆ. ಡಾ. ನಿ.ಬೀ ವಿಜಯ ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ನೂರರ ಹರೆಯದ ಹಿರಿಯ ಮದ್ದಲೆ ವಾದಕ ಗುರು ಹಿರಿಯಡ್ಕ ಗೋಪಾಲ್ ರಾಯರಿಗೆ 60,000 ರೂ.ಗಳ ಹಮ್ಮಿಣಿಯೊಂದಿಗೆ ಅರವ್ತರ ಸಮ್ಮಾನ ಅರ್ಪಿಸಲಾಗುವುದು. ಇದರೊಂದಿಗೆ ಮಂಡಳಿಯ ಮೂವರು ಹಿರಿಯ ಸದಸ್ಯ, ಕಲಾವಿದರಾದ ಎ. ರಾಘವೇಂದ್ರ ಉಪಾಧ್ಯ, ಕೆ.ಎಸ್ ಗೋಪಾಲಕೃಷ್ಣ ಭಟ್ ಮತ್ತು ತಮ್ಮಯ್ಯ ಶೇರಿಗಾರ್ ಅವರಿಗೆ 60ರ ಗೌರವಾರ್ಪಣೆ ಮಾಡಲಾಗುವುದು ಎಂದರು.

ಸಮಾರೋಪ ಸಮಾರಂಭವು ಅಂಬಲಪಾಡಿ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ಎ.19ರಂದು ಸಂಜೆ 6:30ಕ್ಕೆ ಡಾ.ನಿ.ಬೀ ವಿಜಯಬಲ್ಲಾಳರ ಅಧ್ಯಕ್ಷತೆಯಲ್ಲಿ ಜರಗಲಿದೆ. ಮಂಡಳಿಯ ಪ್ರತಿಭಾನ್ವಿತ ಹಿಂದಿನ ಕಲಾವಿದರಾದ ಅನಂತಪದ್ಮನಾ ಭಟ್, ಅರವಿಂದ ಶೆಟ್ಟಿಗಾರ್, ಕೆ. ಬಾಲಕೃಷ್ಣ ಟ್, ಮಾಧವ ಕೆ., ಶೇಖರ ಶೆಟ್ಟಿಗಾರ್ ಹಾಗೂ ಕುತ್ಪಾಡಿ ವಿಠಲ ಗಾಣಿಗರಿಗೆ 60ರ ಅಭಿನಂದನೆ ಸಲ್ಲಿಸಲಾಗುವುದು.

ಪ್ರತಿದಿನ ಸಂಜೆ 6:30ರಿಂದ 9:30ರವರೆಗೆ ನಡೆಯುವ ಯಕ್ಷಗಾನ ಪ್ರದರ್ಶನದಲ್ಲಿ ಮಂಡಳಿಯ ಕಲಾವಿದರು ಅನುಕ್ರಮವಾಗಿ ಜಾಂಬವತಿ ಕಲ್ಯಾಣ, ಶ್ವೇತಕುಮಾರ ಚರಿತ್ರೆ, ತಾಮ್ರಧ್ವಜ ಕಾಳಗ, ತುಳಸೀ ಜಲಂಧರ, ಕವಿರತ್ನ ಕಾಳಿದಾಸ ಹಾಗೂ ಸುದರ್ಶನ ವಿಜಯ ಯಕ್ಷಗಾನ ಪ್ರಸಂಗಗಳನ್ನು ಆಡಿತೋರಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಯಕ್ಷಗಾನ ಕಲಾಮಂಡಳಿಯ ಕಾರ್ಯದರ್ಶಿ ಕೆ.ಜೆ.ಕೃಷ್ಣ, ಉಪಾಧ್ಯಕ್ಷ ಕೆ.ಅಜಿತ್ ಕುಮಾರ್, ಕೆ.ಜೆ.ಗಣೇಶ್ ಹಾಗೂ ಪ್ರವೀಣ್‌ಉಪಾಧ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X