Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಮಿನಲ್‌ಗಳಿಗೆ ಮಣೆ ಹಾಕುತ್ತಿರುವ...

ಕ್ರಿಮಿನಲ್‌ಗಳಿಗೆ ಮಣೆ ಹಾಕುತ್ತಿರುವ ಬಿಜೆಪಿ: ಫಡ್ನವೀಸ್ ಸರಕಾರದ ವಿರುದ್ಧ ಶಿವಸೇನೆ ಕಿಡಿ

ವಾರ್ತಾಭಾರತಿವಾರ್ತಾಭಾರತಿ11 April 2018 9:14 PM IST
share
ಕ್ರಿಮಿನಲ್‌ಗಳಿಗೆ ಮಣೆ ಹಾಕುತ್ತಿರುವ ಬಿಜೆಪಿ: ಫಡ್ನವೀಸ್ ಸರಕಾರದ ವಿರುದ್ಧ ಶಿವಸೇನೆ ಕಿಡಿ

ಮುಂಬೈ, ಎ.12: ಮಹಾರಾಷ್ಟ್ರದ ಅಹ್ಮದ್‌ನಗರ್‌ನಲ್ಲಿ ಕಳೆದ ವಾರ ಇಬ್ಬರು ಸ್ಥಳೀಯ ಶಿವಸೇನಾ ನಾಯಕರ ಹತ್ಯೆಯ ಹಿನ್ನೆಲೆಯಲ್ಲಿ ಪಕ್ಷದ ಮುಖವಾಣಿಯಾದ ಸಾಮ್ನಾ ಮಹಾರಾಷ್ಟ್ರದ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ಕಿಡಿಕಾರಿದೆ ಹಾಗೂ ಪ್ರಸಕ್ತ ಪರಿಸ್ಥಿತಿಯನ್ನು ಗಮನಿಸಿದಾಗ ರಾಜ್ಯದಲ್ಲಿ ಗೃಹಸಚಿವರ ಅಸ್ತಿತ್ವದಲ್ಲಿದ್ದಾರೆಯೇ ಎಂದವರು ಪ್ರಶ್ನಿಸಿದ್ದಾರೆ.

ಮುಂಬೈನಲ್ಲಿ ಇತ್ತೀಚೆಗೆ ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಘಟನೆಗಳನ್ನು ಸಾಮ್ನಾ ತನ್ನ ಸಂಪಾದಕೀಯದಲ್ಲಿ ಪ್ರಸ್ತಾಪಿಸಿದ್ದು, ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ವಿಫಲಗೊಂಡಿರುವುದಕ್ಕೆ ಉಜ್ವಲ ನಿದರ್ಶನ ಇದಾಗಿದೆಯೆಂದವರು ಹೇಳಿದ್ದಾರೆ.

  2014ರ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಲಾಭವನ್ನು ಪಡೆಯುವುದಕ್ಕಾಗಿ ಕ್ರಿಮಿನಲ್ ಹಿನ್ನೆಲೆಯ ರಾಜಕಾರಣಿಗಳನ್ನು ಬಿಜೆಪಿಯು ತನ್ನ ತೆಕ್ಕೆಗೆತೆಗೆದುಕೊಳ್ಳುತ್ತಿದೆಯೆಂದು ಸಾಮ್ನಾ ಸಂಪಾದಕೀಯವು ಖಂಡಿಸಿದೆ.

‘‘ ಈ ಗೂಂಡಾಗಳಿಗೆ ಯಾರು ಕುಮ್ಮಕ್ಕು ನೀಡುತ್ತಿದ್ದಾರೆ ಹಾಗೂ ಅವರನ್ನು ಯಾರು ದೃಢವಾಗಿ ಬೆಂಬಲಿಸುತ್ತಿದ್ದಾರೆಂಬುದು ಈಗ ಮಹಾರಾಷ್ಟ್ರದ ಜನತೆಗೆ ಅರಿವಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಮತ್ತೆ ಬರುವುದನ್ನು ಖಾತರಿಪಡಿಸುವ ಸಲುವಾಗಿ ಬಿಜೆಪಿ ನಾಯಕರು ಈ ಕ್ರಿಮಿನಲ್ ಹಿನ್ನೆಲೆಯ ಚುನಾಯಿತ ಪ್ರತಿನಿಧಿಗಳ ಮುಂದೆ ಮಂಡಿಯೂರಿದ್ದಾರೆ ಎಂದು ಅದು ಟೀಕಿಸಿದೆ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಡಲು ಬಿಜೆಪಿ ಕಾರಣವೆಂದು ಅದು ಆಪಾದಿಸಿದೆ.

ಇಬ್ಬರು ಶಿವಸೇನಾ ನಾಯಕರ ಹತ್ಯೆಗಾಗಿ ಅಹ್ಮದ್‌ನಗರ ಜಿಲ್ಲೆಯ ಸ್ಥಳೀಯ ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಬಂಧಿತರಾಗಿದ್ದಾರೆ. ಅವರ ಪುತ್ರ ಸಂಗ್ರಾಮ್ ಜಗತಾಪ್ ಹಾಗೂ ಅವರ ತಂದೆ ಅರುಣ್ ಜಗತಾಪ್ (ಇಬ್ಬರೂ ಎನ್‌ಸಿಪಿ ನಾಯಕರು) ಕೂಡಾ ಈ ಪ್ರಕರಣದಲ್ಲಿ ತಮ್ಮ ಬೆಂಬಲಿಗರೊಂದಿಗೆ ಜೈಲು ಸೇರಿದ್ದಾರೆ ಎಂದು ಅದು ಹೇಳಿದೆ.

ಕಳೆದ ವಾರ ನಡೆದ ಅಹ್ಮದ್ ನಗರ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಹಾಗೂ ಶಿವಸೇನಾ ಅಭ್ಯರ್ಥಿಗಳ ನಡುವೆ ಭುಗಿಲೆದ್ದ ರಾಜಕೀಯ ವೈಮನಸ್ಸೇ, ಇಬ್ಬರು ಶಿವಸೇನೆ ಕಾರ್ಯಕರ್ತರ ಹತ್ಯೆಗೆ ಕಾರಣವೆಂದು ಸಂಶಯಿಸಲಾಗಿದೆ. ಶಿವಸೇನೆ ಅಧಿಕಾರಕ್ಕೆ ಬಾರದಂತೆ ತಡೆಯಲು ಬಿಜೆಪಿಯು ಕಾಂಗ್ರೆಸ್ ಹಾಗೂ ಎನ್‌ಸಿಪಿ ಜೊತೆ ಕೈಜೋಡಿಸಿರುವುದಾಗಿ ಶಿವಸೇನೆ ಆರೋಪಿಸಿತ್ತು.

  ಬಿಜೆಪಿ ಅಧ್ಯಕ್ಷ ಅಮಿತ್‌ಶಾ ಅವರು ತನ್ನ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಪ್ರತಿಪಕ್ಷಗಳನ್ನು ಹಾವು,ಮುಂಗುಸಿ, ನಾಯಿ ಹಾಗೂ ಬೆಕ್ಕುಗಳಿಗೆ ಹೋಲಿಸಿದ್ದರು. ಈಗ ಅದೇ ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಈ ಪ್ರಾಣಿಗಳಿಗೆ ಆಶ್ರಯ ನೀಡುತ್ತಿವೆ ಹಾಗೂ ಅವು ಕಾನೂನು ಮತ್ತು ಶಿಸ್ತಿಗೆ ಬೆದರಿಕೆಯಾಗಿ ಪರಿಣಮಿಸಿವೆ. ಅಹ್ಮದ್‌ನಗರದಲ್ಲಿ ನಡೆದ ಹತ್ಯೆಗಳು ರಾಜ್ಯದ ವರ್ಚಸ್ಸಿಗೆ ಕಳಂಕ ತಂದಿವೆ.

ಶಿವಸೇನಾ ಮುಖವಾಣಿ ಸಾಮ್ನಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X