Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧಾರವಾಡ: ಜಾಹೀರಾತು ಪ್ರಸಾರಕ್ಕೆ ಮಾಧ್ಯಮ...

ಧಾರವಾಡ: ಜಾಹೀರಾತು ಪ್ರಸಾರಕ್ಕೆ ಮಾಧ್ಯಮ ಪ್ರಮಾಣೀಕರಣ ಕಡ್ಡಾಯ; ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ

ವಾರ್ತಾಭಾರತಿವಾರ್ತಾಭಾರತಿ11 April 2018 9:54 PM IST
share

ಧಾರವಾಡ, ಎ.11: ರಾಜಕೀಯ ಪ್ರಚಾರದ ಪತ್ರಿಕಾ ಜಾಹೀರಾತು, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹೀರಾತು ಹಾಗೂ ಸಾಮಾಜಿಕ ಜಾಲತಾಣಗಳು, ಮೊಬೈಲ್ ಎಸ್‌ಎಂಎಸ್, ಇ-ಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳಿಗೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.

ಬುಧವಾರ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೇಬಲ್ ಟಿವಿ ಪ್ರಸಾರಕರು, ಮೊಬೈಲ್ ನೆಟ್‌ವರ್ಕ್ ಹಾಗೂ ಬಲ್ಕ್ ಎಸ್‌ಎಂಎಸ್ ಪೂರೈಕೆದಾರರಿಗೆ ಮಾಧ್ಯಮ ಪ್ರಮಾಣೀಕರಣದ ಕುರಿತು ಅರಿವು ಮೂಡಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾಹೀರಾತುಗಳಿಗೆ ಕಡ್ಡಾಯವಾಗಿ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳು ನಿಗದಿತ ನಮೂನೆ-ಎ ದಲ್ಲಿ ಅರ್ಜಿ ಸಲ್ಲಿಸಿ, ನಮೂನೆ -ಬಿ ಯಲ್ಲಿ ಅನುಮತಿ ಪಡೆಯಬೇಕು. ಜಾಹೀರಾತಿನ ವೆಚ್ಚವನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಜಾಹೀರಾತು ಅನುಮತಿ ಹಾಗೂ ಪಾವತಿ ಸುದ್ದಿಯ ಮೇಲೆ ನಿಗಾವಹಿಸಲು ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ ಎಂದು ಅವರು ತಿಳಿಸಿದರು.

ಪಾವತಿ ಸುದ್ದಿ ಪ್ರಕಟಿಸುವುದು ಪ್ರಜಾ ಪ್ರಾತಿನಿಧಿಕ ಕಾಯ್ದೆ 1951ರಡಿ ಶಿಕ್ಷಾರ್ಹ ಅಪರಾಧವಾಗಿದೆ. ಪಾವತಿ ಸುದ್ದಿಯು ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಪಾಯಕಾರಿಯಾಗಿದೆ. ಪಾವತಿ ಸುದ್ದಿ ಕುರಿತಂತೆ ಈಗಾಗಲೇ ಪ್ರೆಸ್‌ಕೌನ್ಸಿಲ್ ಆಫ್ ಇಂಡಿಯಾ, ಮಾಧ್ಯಮ ಸಂಸ್ಥೆಗಳು ಹಾಗೂ ಸುಪ್ರಿಕೋರ್ಟ್ ಗಂಭೀರವಾಗಿ ಪರಿಗಣಿಸಿ ಪಾವತಿ ಸುದ್ದಿ ಎಂದರೆ ಚುನಾವಣೆಗೆ ಸಂಬಂಧಿಸಿದಂತೆ ನಗದು ಅಥವಾ ಯಾವುದೇ ಉಡುಗೊರೆ ರೂಪದಲ್ಲಿ ಪಡೆದುಕೊಂಡು ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಂಬಂಧಿಸಿದ ಸುದ್ದಿ ಅಥವಾ ವಿಶ್ಲೇಷಣೆ ಮಾಧ್ಯಮದಲ್ಲಿ (ಮುದ್ರಣ ಹಾಗೂ ವಿದ್ಯುನ್ಮಾನ) ಪ್ರಕಟವಾಗಿದ್ದಲ್ಲಿ ಅದನ್ನು ಪಾವತಿ ಸುದ್ದಿ ಎಂದು ಪರಿಗಣಿಸಲಾಗುವುದು ಎಂದು ಅವರು ಹೇಳಿದರು.

ಪಾವತಿ ಸುದ್ದಿ ಪ್ರಕಟವಾದರೆ ಪರಿಶೀಲಿಸಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರನ್ವಯ ಪ್ರಕರಣ ದಾಖಲಿಸುವುದಲ್ಲದೇ, ಎರಡು ವರ್ಷಗಳ ಜೈಲು ಶಿಕ್ಷೆಗೆ ಒಳಪಡಿಸಲು ಅವಕಾಶವಿರುವ ಬಗ್ಗೆ ಸಭೆಯ ಗಮನಕ್ಕೆ ತಂದರು. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಾಹೀರಾತು ಪ್ರಮಾಣೀಕರಿಸಲು ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಬೊಮ್ಮನಹಳ್ಳಿ ತಿಳಿಸಿದರು.

ಎಲ್ಲ ಪತ್ರಿಕಾ, ದೃಶ್ಯ ಮಾಧ್ಯಮ ಹಾಗೂ ಸ್ಥಳೀಯ ಕೇಬಲ್ ಟಿವಿಗಳಲ್ಲಿ ಪ್ರಸಾರವಾಗುವ ಚುನಾವಣಾ ಜಾಹೀರಾತುಗಳ ಪ್ರಕಟಣೆಗೆ ಮುಂಚಿತವಾಗಿ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ ಅನುಮತಿ ಕಡ್ಡಾಯವಾಗಿರುತ್ತದೆ. ಕೇಬಲ್ ಟಿವಿ, ಸಾಮಾಜಿಕ ಜಾಲತಾಣ, ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಇ-ಪತ್ರಿಕೆಗಳ ಸುದ್ದಿಗಳ ಕುರಿತಂತೆ ನಿಗಾವಹಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.

ಪಾವತಿ ಸುದ್ದಿ ಪರಿಗಣಿಸಿ ಪ್ರಕಟವಾದ 96 ಗಂಟೆಯೊಳಗೆ ಸಂಬಂಧಿಸಿದ ಪಕ್ಷ ಅಥವಾ ಅಭ್ಯರ್ಥಿಗಳಿಗೆ ಸ್ಪಷ್ಟೀಕರಣ ಕೇಳಿ ನೋಟಿಸ್ ನೀಡಲಾಗುವುದು. ಅಭ್ಯರ್ಥಿಗಳು 48 ಗಂಟೆಯೊಳಗೆ ನೋಟಿಸ್‌ಗೆ ಉತ್ತರಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಚುನಾವಣೆ ವೆಚ್ಚ ವಿಭಾಗದ ನೋಡಲ್ ಅಧಿಕಾರಿ ಎಸ್.ಉದಯಶಂಕರ್, ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಮಹೇಶ್‌ಕುಮಾರ್, ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X