ಬೆಂಗಳೂರು: ಲಾರಿ ಢಿಕ್ಕಿ; ಯುವಕ ಮೃತ್ಯು

ಬೆಂಗಳೂರು, ಎ.11: ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಕೆಆರ್ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಸ್ತೂರಿ ನಗರದ ಅರವಿಂದ(22) ಮೃತಪಟ್ಟ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.
ಬುಧವಾರ ಮುಂಜಾನೆ ಕೆಲಸ ಮುಗಿಸಿಕೊಂಡು ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಮಾರ್ಗ ಮಧ್ಯೆ ಕಸ್ತೂರಿ ನಗರದ ಸೇತುವೆ ಕೆಳ ಭಾಗದಲ್ಲಿ ಹಿಂದಿನಿಂದ ಬಂದ ಲಾರಿ ಢಿಕ್ಕಿಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಅರವಿಂದ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೆಆರ್ ಪುರಂ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





