ಚುನಾವಣೆ ಹಿನ್ನೆಲೆ: ಮಂಗಳೂರು ಪೊಲೀಸ್ ಅಧಿಕಾರಿಗಳ ಸಭೆ
.jpeg)
ಮಂಗಳೂರು, ಎ.11: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯ ಗಡಿ ಪ್ರದೇಶ ಅಪರಾಧ ಚಟುವಟಿಕೆ ತಡೆ ಸಂಬಂಧಿಸಿ ಬುಧವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಮಂಗಳೂರು ಪೊಲೀಸ್ ಅಧಿಕಾರಿಗಳು, ಕೇರಳ ಪೊಲೀಸ್ ಅಧಿಕಾರಿಗಳು, ರೈಲ್ವೆ ಪೊಲೀಸ್ ಅಧಿಕಾರಿಗಳು, ಗುಪ್ತಚರ ಇಲಾಖೆಯ ಅಧಿಕಾರಿಗಳು, ಆಂತರಿಕ ಭದ್ರತೆ ವಿಭಾಗದ ಅಧಿಕಾರಿಗಳು, ಕರಾವಳಿ ಭದ್ರತಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





