ಪ್ರಚಾರಕ್ಕೆ ಅವಕಾಶ ಕಲ್ಪಿಸದ ವಿಚಾರ: ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ ರಕ್ಷಕ ಸೇನೆ

ಬೆಂಗಳೂರು, ಎ.12: ರಕ್ಷಕ ಸೇನೆ ಪಕ್ಷದ ಪ್ರಚಾರಕ್ಕೆ ಅವಕಾಶ ಕಲ್ಪಿಸದ ವಿಚಾರಕ್ಕೆ ಸಂಬಂಧಿಸಿದಂತೆ ಸೇನೆಯ ಅಧ್ಯಕ್ಷ ಶಶಿಧರ್ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಸೇನೆಯ ಅಧ್ಯಕ್ಷ ಶಶಿಧರ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ನ್ಯಾಯಮೂರ್ತಿ ಎಸ್.ಸುನೀಲ್‌ದತ್ತ ಯಾದವ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಎ.24ಕ್ಕೆ ಮುಂದೂಡಿದೆ.
ಅರ್ಜಿದಾರರ ಪರ ವಾದಿಸಿದ ವಕೀಲ ಜಿ.ಆರ್.ಮೋಹನ್ ಅವರು, ರಕ್ಷಕ ಸೇನೆ ಪಕ್ಷದ ಪ್ರಚಾರಕ್ಕೆ ಅವಕಾಶ ಕಲ್ಪಿಸದ ಹಿನ್ನೆಲೆಯಲ್ಲಿ ನ್ಯಾಯಪೀಠವು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಇದೇ ವಿಚಾರವನ್ನು ಮನದಲ್ಲಿಟ್ಟುಕೊಂಡು ಸಿಸಿಆರ್‌ಬಿ ಕಚೇರಿಯವರು ಎಲ್ಲ ಪೊಲೀಸ್ ಠಾಣೆಗಳಿಗೆ ಶಶಿಧರ್ ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಹೇಳಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾಣೆಯನ್ನು ಎ.24ಕ್ಕೆ ಮುಂದೂಡಿತು.
Next Story





