Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಕರಿಂದ ವ್ಯಾಪಾರಿ, ಬಾಲಕನ ಹತ್ಯೆ...

ಗೋರಕ್ಷಕರಿಂದ ವ್ಯಾಪಾರಿ, ಬಾಲಕನ ಹತ್ಯೆ ಪ್ರಕರಣ: ಪೊಲೀಸ್ ತನಿಖೆಯಲ್ಲಿ ಹಲವು ಲೋಪಗಳು

ವಾರ್ತಾಭಾರತಿವಾರ್ತಾಭಾರತಿ12 April 2018 8:58 PM IST
share
ಗೋರಕ್ಷಕರಿಂದ ವ್ಯಾಪಾರಿ, ಬಾಲಕನ ಹತ್ಯೆ ಪ್ರಕರಣ: ಪೊಲೀಸ್ ತನಿಖೆಯಲ್ಲಿ ಹಲವು ಲೋಪಗಳು

ರಾಂಚಿ, ಎ.12: ಜಾರ್ಖಂಡ್‌ನ ಲಾಟೆಹರ್ ಜಿಲ್ಲೆಯಲ್ಲಿ 2016ರ ಮಾರ್ಚ್‌ನಲ್ಲಿ ಗೋಸಾಗಾಟಗಾರರ ಮೇಲೆ ದಾಳಿ ನಡೆಸಿ ಅವರನ್ನು ಭೀಕರವಾಗಿ ಹತ್ಯೆ ಮಾಡಲ್ಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಹತ್ತು ವಿವಿಧ ಮಾನವಹಕ್ಕು ಸಂಸ್ಥೆಗಳು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡನನ್ನು ಬಂಧಿಸುವಂತೆ ಆಗ್ರಹಿಸಿವೆ.

ಪ್ರತ್ಯಕ್ಷದರ್ಶಿಗಳು ನೀಡಿರುವ ಹೇಳಿಕೆಗಳ ಆಧಾರದಲ್ಲಿ ಈ ಪ್ರಕರಣವನ್ನು ತನಿಖೆ ನಡೆಸಲು ಪೊಲೀಸರು ವಿಫಲವಾಗಿರುವುದಲ್ಲದೆ ಆರೋಪಿಗಳ ವಿರುದ್ಧ ಸೂಕ್ತ ದೂರು ದಾಖಲಿಸಿಕೊಳ್ಳಲೂ ವಿಫಲವಾಗಿದ್ದಾರೆ ಎಂದು ಮಾನವ ಹಕ್ಕುಗಳ ನೀಡಿರುವ ವರದಿ ತಿಳಿಸಿದೆ. ಇದರ ಪರಿಣಾಮವಾಗಿ ಆರೋಪಿಗಳು ಜಾರ್ಖಂಡ್ ಉಚ್ಚ ನ್ಯಾಯಾಲಯದಿಂದ ಜಾಮೀನು ಪಡೆಯಲು ಸಾಧ್ಯವಾಗಿದೆ ಎಂದು ವರದಿ ತಿಳಿಸಿದೆ.

2016ರ ಮಾರ್ಚ್‌ನಲ್ಲಿ ಜಾನುವಾರು ವ್ಯಾಪಾರಿಗಳಾದ ಮಝ್ಲೂಮ್ ಅನ್ಸಾರಿ ಮತ್ತು ಶಾಲಾಬಾಲಕ ಇಮ್ತಿಯಾಝ್ ಖಾನ್ ಪಕ್ಕದ ಜಿಲ್ಲೆಯಲ್ಲಿ ನಡೆಯುತ್ತಿದ್ದ ಜನುವಾರು ಜಾತ್ರೆಗೆ ತೆರಳುತ್ತಿದ್ದ ವೇಳೆ ಅವರನ್ನು ಗೋರಕ್ಷಕರ ತಂಡ ಅಪಹರಿಸಿತ್ತು. ನಂತರ ಅವರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿ ಅವರ ಮೃತದೇಹಗಳನ್ನು ಮರಕ್ಕೆ ನೇತು ಹಾಕಲಾಗಿತ್ತು. ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಗಾರರು ಮೂರು ಪ್ರತ್ಯಕ್ಷದರ್ಶಿಗಳ ಜೊತೆ ಮಾತನಾಡಿದ್ದರು. ಈ ಪೈಕಿ ಒಬ್ಬಾತ ಎಂಟು ಆರೋಪಿಗಳ ಪೈಕಿ ಐವರ ಹೆಸರುಗಳನ್ನು ತಿಳಿಸಿದ್ದರೆ ಇನ್ನೋರ್ವ, ಸ್ಥಳೀಯ ಬಿಜೆಪಿ ನಾಯಕ ವಿನೋದ್ ಪ್ರಜಾಪತಿ ಕೂಡಾ ಈ ಹತ್ಯೆಯಲ್ಲಿ ಭಾಗಿಯಾಗಿದ್ದುದಾಗಿ ತಿಳಿಸಿದ್ದರು. ಎಫ್‌ಐಆರ್‌ನಲ್ಲಿ ಪ್ರಜಾಪತಿಯ ಹೆಸರನ್ನು ಮಾತ್ರ ಸೇರಿಸಲಾಗಿದ್ದರೂ ಅವರನ್ನು ಪ್ರಶ್ನಿಸುವ ಅಥವಾ ಬಂಧಿಸುವ ಗೋಜಿಗೆ ಪೊಲೀಸರು ಹೋಗಿಲ್ಲ ಎಂದು ಮಾನವಹಕ್ಕು ಸಂಸ್ಥೆಗಳು ಆರೋಪಿಸಿವೆ.

ಆರೋಪಿಗಳಿಗೆ ಸಂತ್ರಸ್ತರ ಮೊದಲೇ ಪರಿಚಯವಿತ್ತು. ಈ ಹಿಂದೆಯೂ ಜಾನುವಾರು ವ್ಯಾಪಾರ ಕೆಲಸವನ್ನು ನಿಲ್ಲಿಸುವಂತೆ ಇಲ್ಲವಾದಲ್ಲಿ ಹತ್ಯೆ ಮಾಡುವುದಾಗಿ ಅವರಿಗೆ ಬೆದರಿಕೆ ಹಾಕಲಾಗಿತ್ತು. ಹಾಗಾಗಿ ಈ ಹತ್ಯೆಯು ಪೂರ್ವಯೋಜಿತವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಪ್ರಕರಣದ ಸಾಕ್ಷಿದಾರರು ತನಿಖಾ ತಂಡಕ್ಕೆ ತಿಳಿಸಿದ್ದರು.

ಅದಾಗ್ಯೂ, ಆರೋಪಿಗಳ ವಿರುದ್ಧ ಅಪರಾಧಿ ಪಿತೂರಿ ಅಥವಾ ಅಪಹರಣದಂಥ ಪ್ರಕರಣಗಳನ್ನು ದಾಖಲಿಸಲಾಗಿಲ್ಲ. ಆರೋಪಿಗಳ ವಿರುದ್ಧ ಸೆಕ್ಷನ್ 302ರಡಿ ಹತ್ಯೆ ಆರೋಪವನ್ನು ಹೊರಿಸಲಾಗಿದ್ದರೂ ಅವರಿಗೆ ಜಾಮೀನು ನೀಡಲಾಗಿದೆ ಎಂದು ಸಂಸ್ಥೆಗಳ ವರದಿ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕ ವಿನೋದ್ ಪ್ರಜಾಪತಿಯನ್ನು ಕೂಡಲೇ ಬಂಧಿಸಬೇಕೆಂದು ಮಾನವಹಕ್ಕುಗಳ ಸಂಸ್ಥೆ ಪೊಲೀಸರಿಗೆ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X