Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುರಾತನ ಉದ್ಯಾವರ ಶಂಭುಕಲ್ಲು ದೇವಳದ...

ಪುರಾತನ ಉದ್ಯಾವರ ಶಂಭುಕಲ್ಲು ದೇವಳದ ಜೀಣೋದ್ದಾರ

ಎ.16ರಿಂದ ಪುನರ್‌ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ವಾರ್ತಾಭಾರತಿವಾರ್ತಾಭಾರತಿ12 April 2018 10:58 PM IST
share

ಉದ್ಯಾವರ, ಎ.12: ಒಂದೇ ಗರ್ಭಗುಡಿಯೊಳಗೆ ಮೃಣ್ಮಯಿ, ಕಾಷ್ಟ ಹಾಗೂ ಶಿಲೆಯ ಮೂರ್ತಿಗಳಿರುವ ಅಪರೂಪದ, ಇತಿಹಾಸಕಾರರ ಪ್ರಕಾರ ಸಾವಿರಾರು ವರ್ಷಗಳ ಪುರಾತನ ಉದ್ಯಾವರ ಶಂಭುಕಲ್ಲು ಶ್ರೀವೀರಭದ್ರ ದುರ್ಗಾ ಪರಮೇಶ್ವರಿ ಗಣಪತಿ ಮಹಾಕಾಳಿ ಪಂಜುರ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಸುಮಾರು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಮುಕ್ತಾಯ ಹಂತದಲ್ಲಿದ್ದು, ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ಕಲಿ ಕಲ್ಲಡ (ವಾರ್ಷಿಕ ರಥೋತ್ಸವ) ಎ.16ರಿಂದ 24ರವರೆಗೆ ನಡೆಯಲಿದೆ.

ದೇವಸ್ಥಾನದಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪಠೇಲರ ಮನೆ ಉಲ್ಲಾಸ್ ಶೆಟ್ಟಿ ಈ ವಿಷಯ ತಿಳಿಸಿದರು.

ದೇಗುಲದ ಗರ್ಭಗುಡಿಯ ಒಂದೇ ಆವರಣದ ಒಳಗೆ ಗೋಡೆಗೆ ತಾಗಿಕೊಂಡೇ ರಚಿತವಾದ ಮಣ್ಣಿನ ಸಾವಿತ್ರಿ-ಗಾಯತ್ರಿ-ಸರಸ್ವತಿ ಮೂರ್ತಿಗಳನ್ನು ಇಲ್ಲಿ ಆರಾಧಿಸಲಾಗುತ್ತಿದೆ. ಅಗತ್ಯಬಿದ್ದರೆ ಈ ಮಣ್ಣಿನ ಮೂರ್ತಿಗಳ ಪುನರ್‌ರಚನೆಗೆ ಬೇಕಾದ ಮೃತಿಕೆಯನ್ನು ದೇವಾಲಯದ ಕೊಠಡಿಯೊಂದರಲ್ಲಿ ಅನಾದಿಕಾಲದಿಂದಲೂ ರಕ್ಷಿಸಿಕೊಂಡು ಬರಲಾಗುತ್ತಿದೆ. ಈ ಮೂರ್ತಿಗಳ ಎಡಬದಿಯಲ್ಲಿ ದಕ್ಷಿಣಾಭಿಮುಖವಾಗಿ ರಕ್ತಚಂದನ ಮರದ ಏಕಕಾಷ್ಠಶಿಲ್ವದಿಂದ ರಚಿಸಲಾದ 12 ಕೈಗಳಲ್ಲಿ 12 ವಿಧದ ಆಯುಧಗಳನ್ನು ಧರಿಸಿದ ಆರು ಅಡಿ ಎತ್ತರದ ವೀರಭದ್ರ ಮೂರ್ತಿ ಇದ್ದು, ಇದರ ಎದುರಿಗೆ ಗಣಪತಿಯ ಶಿಲಾಮೂರ್ತಿಯೂ ಇದೆ ಹೀಗೆ ಒಂದೇ ಗರ್ಭಗುಡಿಯಲ್ಲಿ ಪಂಚಶಕ್ತಿ ರೂಪದ ಆರಾಧನೆ ಇಲ್ಲಿ ನಡೆಯುವುು ವಿಶಿಷ್ಟ ಎಂದು ಅವರು ಹೇಳಿದರು.

ಹೊರ ಆವರಣದಲ್ಲೂ ಮಹಾಕಾಳಿಯ ಆಳೆತ್ತರ ಮೃಣ್ಮಯಿ ಮೂರ್ತಿ ಇದೆ. ಇಲ್ಲಿ ನಡೆಯುವ ವಾರ್ಷಿಕ ಜಾತ್ರೆಯನ್ನು ‘ಕಲಿ ಕಲ್ಲಡ’ ಎಂದು ಕರೆಯಲಾಗುತ್ತದೆ. ಜೀರ್ಣಾವಸ್ಥೆಯಲ್ಲಿದ್ದ ಈ ದೇವಾಲಯದ ಜೀರ್ಣೋದ್ಧಾರ ಕಾರ್ಯ ಇದೀಗ ನಡೆದಿದ್ದು, 16ರಿಂದ ಪುನರ್‌ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಉಲ್ಲಾಸ್ ಶೆಟ್ಟಿ ತಿಳಿಸಿದ್ದಾರೆ.

ದೇವಸ್ಥಾನದ ತಂತ್ರಿಗಳಾದ ಕೆ.ಎ.ಸರ್ವೋತ್ತಮ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಎ.15ರಂದು ಹೊರಕಾಣಿಕೆ ಸಮರ್ಪಣೆ ನಡೆಯಲಿದೆ.19ರಂದು ಶ್ರೀವೀರಭದ್ರ ದುರ್ಗಾಪರಮೇಶ್ವರಿ, ಗಣಪತಿ ದೇವರಿಗೆ ಅಷ್ಟಬಂಧ ಪ್ರತಿಷ್ಠೆ, ಕಲಶಾಭಿಷೇಕ ನಡೆಯಲಿದೆ. 20ರಂದು ಬ್ರಹ್ಮಕುಂಭಾಭಿಷೇಕ ಸಮರ್ಪಣೆಗೊಳ್ಳುವುದು ನಂತರ ಮಹಾ ಅನ್ನಸಂತರ್ಪಣೆಯಲ್ಲಿ 10,000ಕ್ಕೂ ಅಧಿಕ ಮಂದಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

 ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ, ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ. 21ರಂದು ವಾರ್ಷಿಕ ಜಾತ್ರ ಮಹೋತ್ಸವ, ರಥಾರೋಹಣ ಹಾಗೂ ರಾತ್ರಿ ರಥೋತ್ಸವ (ಕಲ್ಲಡ ಜಾತ್ರೆ) ಹಾಗೂ ಮಹಾಕಾಳಿ ಕೋಲ ನಡೆಯಲಿದೆ ಎಂದು ಉಲ್ಲಾಸ್ ಶೆಟ್ಟಿ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಸಲಹೆಗಾರ ಈಶ್ವರ ಚಿಟ್ಪಾಡಿ, ಉಪಾಧ್ಯಕ್ಷರಾದ ಪ್ರತಾಪ್ ಕುಮಾರ್, ಗೋಪಾಲ ದೇವಾಡಿಗ,ಜೊತೆ ಕಾರ್ಯದರ್ಶಿ ಯು.ಆರ್.ಚಂದ್ರಶೇಖರ್, ಕಾರ್ಯದರ್ಶಿ ಸುರೇಶ್ ಪೂಜಾರಿ, ಪ್ರಧಾನ ಅರ್ಚಕರಾದ ಶ್ರೀನಿವಾಸ ಮೂರ್ತಿ, ರಾಮಮೂರ್ತಿ ಭಟ್, ಜಿತೇಂದ್ರ ಶೆಟ್ಟಿ, ವಿನೋದ್ ಕುಮಾರ್ ಪಿತ್ರೋಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X