Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು ಜಿಲ್ಲೆಯಲ್ಲಿ 25 ಪಿಂಕ್...

ತುಮಕೂರು ಜಿಲ್ಲೆಯಲ್ಲಿ 25 ಪಿಂಕ್ ಮತಗಟ್ಟೆಗಳು: ಜಿಲ್ಲಾಧಿಕಾರಿ ಕೆ.ಪಿ. ಮೋಹನ್‍ರಾಜ್

ವಾರ್ತಾಭಾರತಿವಾರ್ತಾಭಾರತಿ12 April 2018 11:05 PM IST
share

ತುಮಕೂರು,ಎ.12: ಚುನಾವಣಾ ಆಯೋಗದ ನಿರ್ದೇಶನದಂತೆ ಮಹಿಳಾ ಸಿಬ್ಬಂದಿಗಳೇ ಕರ್ತವ್ಯ ನಿರ್ವಹಿಸುವ 25 ಪಿಂಕ್ ಮತಗಟ್ಟೆಗಳನ್ನು ಜಿಲ್ಲೆಯಲ್ಲಿ ಗುರುತಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಕೆ.ಪಿ. ಮೋಹನ್‍ರಾಜ್ ತಿಳಿಸಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಚುನಾವಣಾ ಸಿದ್ಧತೆಯ ಬಗ್ಗೆ ನೋಡೆಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ನಗರದಲ್ಲಿ 5 ಮತಗಟ್ಟೆಗಳು ಹಾಗೂ ಉಳಿದಂತೆ ಜಿಲ್ಲೆಯಾದ್ಯಂತ 20 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳು ಮಹಿಳೆಯರೇ ಆಗಿರುತ್ತಾರೆ. ಈ ಬಗ್ಗೆ ಸಂಬಂಧಿಸಿದ ನೋಡೆಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು. 

ತುಮಕೂರು ಜಿಲ್ಲೆಯಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಮತಗಟ್ಟೆಗಳಲ್ಲಿ ರ್ಯಾಂಪ್‍ನಿರ್ಮಾಣ, ಶೌಚಾಲಯಗಳ ರಿಪೇರಿ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಬಾಕಿ ಮತಗಟ್ಟೆಗಳಲ್ಲಿ ರಿಪೇರಿ ಕಾರ್ಯಗಳು ಕೈಗೊಳ್ಳಲು ಆರ್‍ಓ ಹಾಗೂ ಎಆರ್‍ಓಗಳ ಮೂಲಕ ಅಂದಾಜು ಪಟ್ಟಿಯನ್ನು ಸಲ್ಲಿಸಿ ಅನುಮತಿ ಪಡೆಯುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. 

ಸಾರ್ವಜನಿಕರು, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳಿಗೆ ವಿವಿಧ ಸೇವೆ ಒದಗಿಸುವ ಅನುಕೂಲಕ್ಕಾಗಿರುವ ಸುವಿಧ, ಸುಗಮ ಹಾಗೂ ಸಮಾಧಾನ್ ಮೂಲಕ ಸ್ವೀಕರಿಸಿರುವ ಅರ್ಜಿಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಅರ್ಜಿಗಳನ್ನು ನಿಯಮಾನುಸಾರ ನಿಗಧಿತ ಸಮಯದಲ್ಲಿ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಪೋಸ್ಟಲ್ ಬ್ಯಾಲೇಟ್ ಹಾಗೂ ಸರ್ವೀಸ್ ವೋಟ್ಸ್ ಮತದಾರರ ಬಗ್ಗೆ ಮಾಹಿತಿ ಪಡೆದು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ನೋಡೆಲ್ ಅಧಿಕಾರಿಗೆ ಸೂಚಿಸಿದರಲ್ಲದೆ, ಮತದಾನ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಸಿಬ್ಬಂದಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸಬೇಕಾಗಿದೆ. ಇದಕ್ಕಾಗಿ ಎಲ್ಲಾ ರೀತಿಯಲ್ಲೂ ಸಿದ್ಧತೆಗಳನ್ನು ಮಾಡಿಕೊಳ್ಳಿ. ಚುನಾವಣಾ ಸಿಬ್ಬಂದಿಗಳ ಯೋಗಕ್ಷೇಮ ನೋಡಿಕೊಳ್ಳುವುದು ಅತಿಮುಖ್ಯ ಎಂದರು. 

ಚುನಾವಣಾ ಕರ್ತವ್ಯದಲ್ಲಿ ಅರೆ ಸೇನಾಪಡೆ: ಚುನಾವಣೆಯನ್ನು ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಸಲು ಹಾಗೂ ಚುನಾವಣಾ ಅಕ್ರಮಗಳನ್ನು ತಡೆಯಲು ಸಶಸ್ತ್ರ ಸೇನಾ ಬಲ(ಬಿ.ಎಸ್.ಎಫ್.)ಕೇಂದ್ರೀಯ ಮೀಸಲು ಪಡೆ ಹಾಗೂ ಇಂಡೊ-ಟಿಬೇಟಿಯನ್ ಬಾರ್ಡ್‍ರ್ ಪೊಲೀಸ್‍ನ 549 ಯೋಧರು ತುಮಕೂರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ಸಭೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. 

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‍ಎಫ್‍ನ 89 ಯೋಧರು, ಪಾವಗಡದಲ್ಲಿ 91 ಬಿಎಸ್‍ಎಫ್ ಯೋಧರು, ಚಿಕ್ಕನಾಯಕನಹಳ್ಳಿಯಲ್ಲಿ 96 ಬಿಎಸ್‍ಎಫ್, ಕುಣಿಗಲ್‍ನಲ್ಲಿ ಐಟಿಬಿಪಿಯ 91 ಯೋಧರು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ 102 ಸಿಆರ್‍ಪಿಎಫ್ ಯೋಧರು, ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ 80 ಬಿಎಸ್‍ಎಫ್ ಯೋಧರನ್ನು ಭದ್ರತೆ ಹಾಗೂ ಚುನಾವಣಾ ಅಕ್ರಮಗಳನ್ನು ತಡೆಯಲು ನಿಯೋಜಿಸಲಾಗಿದೆ. ಚೆಕ್ ಪೋಸ್ಟ್‍ಗಳಲ್ಲಿ ಯೋಧರನ್ನು ನಿಯೋಜಿಸಲಾಗಿದ್ದು, ಇವರೊಂದಿಗೆ ಸ್ಥಳೀಯ ಪೊಲೀಸರು ಕೂಡ ಕರ್ತವ್ಯದಲ್ಲಿರುತ್ತಾರೆ ಎಂದು ಅವರು ತಿಳಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಶೇಖರ್, ಸಿಇಓ ಅನೀಸ್ ಕಣ್ಮಣಿ ಜಾಯ್ ಸೇರಿದಂತೆ ನೋಡೆಲ್ ಅಧಿಕಾರಿಗಳು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X