Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಿಯಮ ಉಲ್ಲಂಘನೆ ಆರೋಪ: ಕ್ರೀಡಾಗ್ರಾಮದಿಂದ...

ನಿಯಮ ಉಲ್ಲಂಘನೆ ಆರೋಪ: ಕ್ರೀಡಾಗ್ರಾಮದಿಂದ ರಾಕೇಶ್, ಇರ್ಫಾನ್ ಹೊರಕ್ಕೆ

ಭಾರತಕ್ಕೆ ತೀವ್ರ ಮುಜುಗರ

ವಾರ್ತಾಭಾರತಿವಾರ್ತಾಭಾರತಿ13 April 2018 10:34 AM IST
share
ನಿಯಮ ಉಲ್ಲಂಘನೆ ಆರೋಪ: ಕ್ರೀಡಾಗ್ರಾಮದಿಂದ ರಾಕೇಶ್, ಇರ್ಫಾನ್ ಹೊರಕ್ಕೆ

ಗೋಲ್ಡ್‌ಕೋಸ್ಟ್, ಎ.13: ಕಾಮನ್‌ವೆಲ್ತ್ ಗೇಮ್ಸ್ ಫೆಡರೇಶನ್‌ನ(ಸಿಜಿಎಫ್)ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಲ್ಲಿ ಭಾರತದ ಇಬ್ಬರು ಅಥ್ಲೀಟ್‌ಗಳಾದ ರೇಸ್‌ವಾಕರ್ ಕೆ.ಟಿ. ಇರ್ಫಾನ್ ಹಾಗೂ ಟ್ರಿಪಲ್ ಜಂಪ್‌ಪಟು ರಾಕೇಶ್ ಬಾಬು ಅವರನ್ನು ಕ್ರೀಡಾಗ್ರಾಮದಿಂದ ಹೊರಹಾಕಲಾಗಿದೆ. ಇಬ್ಬರನ್ನು ಆಸ್ಟ್ರೇಲಿಯದಿಂದ ತಕ್ಷಣವೇ ಸ್ವದೇಶಕ್ಕೆ ಕಳುಹಿಸಿಕೊಡುವಂತೆ ಭಾರತದ ಒಲಿಂಪಿಕ್ಸ್ ಸಂಸ್ಥೆಗೆ ಸಿಜಿಎಫ್ ತಿಳಿಸಿದೆ. ಈ ಬೆಳವಣಿಗೆಯು ಭಾರತಕ್ಕೆ ತೀವ್ರ ಮುಜುಗರ ತಂದಿದೆ.

ಇರ್ಫಾನ್ ಹಾಗೂ ರಾಕೇಶ್ ಅವರ ಮಾನ್ಯತೆ ಪತ್ರವನ್ನು ರದ್ದುಪಡಿಸಲಾಗಿದ್ದು, ಶುಕ್ರವಾರ ಬೆಳಗ್ಗೆ 9ಕ್ಕೆ ಅವರನ್ನು ಕ್ರೀಡಾಗ್ರಾಮದಿಂದ ಹೊರಕಳುಹಿಸಲಾಗಿದೆ. ಬುಧವಾರ ಈ ಇಬ್ಬರು ಅಥ್ಲೀಟ್‌ಗಳ ಕೊಠಡಿಯಲ್ಲಿ ಬಳಸಲ್ಪಟ್ಟ ಎರಡು ಸಿರಿಂಜ್‌ಗಳು ಪತ್ತೆಯಾಗಿದ್ದು, ಇದು ಸಿಜಿಎಫ್‌ನ ನೋ-ನೀಡಲ್ ಪಾಲಿಸಿಗೆ ವಿರುದ್ಧವಾಗಿದೆ.

ಇಬ್ಬರು ಅಥ್ಲೀಟ್‌ಗಳ ರಕ್ತ ಹಾಗೂ ಮೂತ್ರ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಗುರುವಾರ ಅದನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆದರೆ, ಇಬ್ಬರು ಉದ್ದೀಪನಾ ಮದ್ದು ನಿಗ್ರಹ ನಿಯಮವನ್ನು ಉಲ್ಲಂಘಿಸಿದ್ದು ಕಂಡು ಬಂದಿಲ್ಲ.

‘‘ಇಬ್ಬರು ಅಥ್ಲೀಟ್‌ಗಳ ವಿರುದ್ಧ ಶಿಸ್ತು ಸಮಿತಿ ವಿಚಾರಣೆ ನಡೆಸಲಿದ್ದು, ಇಬ್ಬರ ವಿರುದ್ಧ ಕಠಿಣ ಕ್ರಮ ಜಾರಿಯಾಗುವ ಸಾಧ್ಯತೆಯಿದೆ’’ಎಂದು ಭಾರತದ ಅಥ್ಲೆಟಿಕ್ಸ್ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಸಿ.ಕೆ. ವಾಲ್ಸನ್ ಹೇಳಿದ್ದಾರೆ.

ಗೇಮ್ಸ್ ವಿಲೇಜ್‌ನಲ್ಲಿ ಸಿರಿಂಜ್‌ಗಳನ್ನು ಕೊಂಡೊಯ್ಯಬಾರದು ಎಂದು ಎಚ್ಚರಿಕೆ ನೀಡಿದ ಹೊರತಾಗಿಯೂ ಭಾರತೀಯ ಅಥ್ಲೀಟ್‌ಗಳು ಈ ಎಚ್ಚರಿಕೆಯನ್ನು ಉಲ್ಲಂಘಿಸಿರುವುದು ಇದು ಎರಡನೇ ಬಾರಿ. ಉದ್ಘಾಟನಾ ಸಮಾರಂಭದ ದಿನದಂದೇ ಸಿಜಿಎಫ್ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕೆ ಭಾರತದ ಬಾಕ್ಸರ್‌ಗಳಿಗೆ ಛೀಮಾರಿ ಹಾಕಿತ್ತು.

‘‘ಭಾರತ ತಂಡದ ಅಥ್ಲೀಟ್‌ಗಳು ಮತ್ತೊಮ್ಮೆ ನಿಯಮ ಉಲ್ಲಂಘಿಸಿದರೆ, ಆರೋಪಿ ಅಥ್ಲೀಟ್ ಮಾನ್ಯತೆ ಕಾರ್ಡನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಭಾರತದ ಚೀಫ್‌ಡಿ ಮಿಶನ್ ವಿಕ್ರಂಗೆ ನಾವು ತಿಳಿಸಿದ್ದೇವೆ’’ ಎಂದು ಸಿಜಿಎಫ್ ತಿಳಿಸಿದೆ. ಈ ವಾರ ನಡೆದ 20 ಮೀ. ನಡಿಗೆಯಲ್ಲಿ ಇರ್ಫಾನ್ 13ನೇ ಸ್ಥಾನ ಪಡೆದಿದ್ದರು. ತ್ರಿಪಲ್ ಜಂಪ್‌ನ ಅರ್ಹತಾ ಸುತ್ತಿನಲ್ಲಿ 12ನೇ ಸ್ಥಾನ ಪಡೆದಿದ್ದ ರಾಕೇಶ್ ಶುಕ್ರವಾರ ಫೈನಲ್ ಪಂದ್ಯದಲ್ಲಿ ಆಡಬೇಕಾಗಿತ್ತು.

‘‘ಪಾಟಿಯಾಲದ ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಶಿಬಿರದ ವೇಳೆ ನಾವು ಬ್ಯಾಗಿನೊಳಗೆ ಸಿರಿಂಜ್ ಇರಿಸಿದ್ದೆವು. ಆದರೆ, ಅದನ್ನು ಬ್ಯಾಗ್‌ನಿಂದ ತೆಗೆಯಲು ಮರೆತ್ತಿದ್ದೆವು. ಇದು ವಿಟಮಿನ್ ಇಂಜೆಕ್ಷನ್‌ಗಳಾಗಿದ್ದವು’’ ಎಂದು ಇರ್ಫಾನ್, ರಾಕೇಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X