ನ್ಯಾಯಾಧೀಶರ ಸಂಬಂಧಿಕರನ್ನೇ ಹೈಕೋರ್ಟ್ ಗೆ ನ್ಯಾಯಾಧೀಶರಾಗಿ ನೇಮಕ ಮಾಡಿರುವ ಆರೋಪ
ಹೊಸದಿಲ್ಲಿ, ಎ.15: ದೇಶದ ದೊಡ್ಡ ಹೈಕೋರ್ಟ್ ಎನಿಕೊಂಡಿರುವ ಅಲಹಾಬಾದ್ ಹೈಕೊರ್ಟ್ ಗೆ ನೇಮಕ ಮಾಡಲಾದ 30ನ್ಯಾಯಾಧೀಶರುಗಳಲ್ಲಿ ಆನೇಕ ಮಂದಿ ವಕೀಲರು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ ಹಾಲಿ ಮತ್ತು ನಿವೃತ್ತ ನ್ಯಾಯಾಧೀಶರ ಸಂಬಂಧಿಕರು ಎಂಬ ಆರೋಪ ಕೇಳಿ ಬಂದಿದೆ.
ಕೋಲಿಜಿಯಂ ಶಿಫಾರಸ್ಸಿನಂತೆ ಕಳೆದ ಫೆಬ್ರವರಿಯಲ್ಲಿ ಅಲಹಾಬಾದ್ ಹೈಕೋರ್ಟ್ ಗೆ 33 ನ್ಯಾಯಾಧೀಶರನ್ನು ನೇಮಕ ಮಾಡಲಾಗಿತ್ತು. ಈ ನೇಮಕಾತಿಯ ಬಗ್ಗೆ ಅಪಸ್ವರ ಕೇಳಿ ಬಂದಿದ್ದು, ಪ್ರಧಾನ ಮಂತ್ರಿ ಕಚೇರಿಗೆ ಮತ್ತು ಕಾನೂನು ಸಚಿವಾಲಯಕ್ಕೆ ಹಲವು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂಟೆಲಿಜೆನ್ಸ್ ಬ್ಯೂರೊಗೆ ತನಿಖೆಗೆ ಆದೇಶ ನೀಡಲಾಗಿತ್ತು.
ನೇಮಕವಾದ ಜಡ್ಜ್ ಗಳ ಪೈಕಿ 11 ಮಂದಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ ಹಾಲಿ ಮತ್ತು ನಿವೃತ್ತ ನ್ಯಾಯಾಧೀಶರುಗಳ ಸಂಬಂಧಿಕರು ಎನ್ನುವುದು ಗುಪ್ತಚರ ಸಂಸ್ಥೆ ನಡೆಸಿದ ತನಿಖೆಯಿಂದ ತಿಳಿದು ಬಂದಿದೆ. ಅದರಲ್ಲೂ ಮುಖ್ಯವಾಗಿ ಎಸ್ ಸಿ ಮತ್ತು ಎಸ್ಟಿ ಸಮುದಾಯದ ಅಭ್ಯರ್ಥಿಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಲಾಗಿದೆ.
Next Story