ಆನೇಕಲ್: ಶಾಸಕ ಬಿ.ಶಿವಣ್ಣ ನಿವಾಸದ ಮೇಲೆ ಐಟಿ ದಾಳಿ
ಆನೇಕಲ್, ಎ.16: ಬೆಂಗಳೂರು ನಗರ ಜಿಲ್ಲೆಯ ಆನೆಕಲ್ ತಾಲೂಕಿನ ಆನೇಕಲ್ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಮುಖಂಡ ಬಿ.ಶಿವಣ್ಣ ಅವರ ನಿವಾಸ ಹಾಗೂ ಕಚೇರಿ ಮೇಲೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷ ರವಿವಾರ ರಾತ್ರಿ ಪ್ರಕಟಿಸಿರುವ ರಾಜ್ಯ ವಿಧಾನಸಭಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಆನೇಕಲ್ ಕ್ಷೇತ್ರದಿಂದ ಮತ್ತೆ ಟಿಕೆಟ್ ಗಳಿಸಿರುವ ಶಿವಣ್ಣ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಐಟಿ ಅಧಿಕಾರಿಗಳ ಎರಡು ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಚಂದಾಪುರ ಆನೇಕಲ್ ರಸ್ತೆಯ ಸೂರ್ಯಸಿಟಿಯಲ್ಲಿನ ಶಾಸಕರ ಮನೆ ಹಾಗೂ ಅವರ ಆಪ್ತರ ಅಕ್ಕಪಕ್ಕದ ಎರಡು ಮನೆಗಳ ಮೇಲೂ ಐಟಿ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಈ ನಡುವೆ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಆರೋಪಿಸಿದೆ.
Next Story