ಬೈಕ್ ಪಲ್ಟಿ: ಸವಾರ ಮೃತ್ಯು

ಪಡುಬಿದ್ರಿ, ಎ.16: ನಡ್ಸಾಲು ಗ್ರಾಮದ ಬೀಡು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.15ರಂದು ಸಂಜೆ 6.45ರ ಸುಮಾರಿಗೆ ಬೈಕೊಂದು ಪಲ್ಟಿಯಾಗಿ ರಸ್ತೆಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕರಿಯಪ್ಪ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಮಗಳು ಕೃಷ್ಣವೇಣಿ ಎಂಬವರೊಂದಿಗೆ ಹೆಜಮಾಡಿ ಕಡೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿದ್ದಾಗ ಬೈಕ್ ಆಯ ತಪ್ಪಿರಸ್ತೆಗೆ ಬಿತ್ತೆನ್ನಲಾಗಿದೆ.
ಇದರಿಂದ ಇವರಿಬ್ಬರು ರಸ್ತೆ ಬಿದ್ದು ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಕರಿಯಪ್ಪ ಮುಕ್ಕಾ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಕೃಷ್ಣವೇಣಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story