Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಕನಿಷ್ಠದಲ್ಲಿ ಹುಟ್ಟಿದೆ

ಕನಿಷ್ಠದಲ್ಲಿ ಹುಟ್ಟಿದೆ

ವಾರ್ತಾಭಾರತಿವಾರ್ತಾಭಾರತಿ17 April 2018 12:04 AM IST
share
ಕನಿಷ್ಠದಲ್ಲಿ ಹುಟ್ಟಿದೆ

ಕನಿಷ್ಠದಲ್ಲಿ ಹುಟ್ಟಿದೆ, ಉತ್ತಮದಲ್ಲಿ ಬೆಳೆದೆ,
ಸತ್ಯಶರಣರ ಪಾದವಿಡಿದೆ.
ಆ ಶರಣರ ಪಾದವಿಡಿದು ಗುರುವ ಕಂಡೆ, ಲಿಂಗವ ಕಂಡೆ,
ಜಂಗಮವ ಕಂಡೆ, ಪಾದೋದಕವ ಕಂಡೆ, ಪ್ರಸಾದವ ಕಂಡೆ.
ಇಂತಿವರ ಕಂಡೆನ್ನ ಕಂಗಳಮುಂದಣ ಕತ್ತಲೆ ಹರಿಯಿತ್ತು.
ಕಂಗಳಮುಂದಣ ಕತ್ತಲೆ ಹರಿಯಲೊಡನೆ,
ಮಂಗಳದ ಮಹಾಬೆಳಗಿನೊಳಗೋಲಾಡಿ ಸುಖಿಯಾದೆನಯ್ಯ
ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
                         -ಹಡಪದಪ್ಪಣ್ಣನವರ ಪುಣ್ಯಸ್ತ್ರೀ ಲಿಂಗಮ್ಮ

ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ವಚನವಿದು. ಮನಸ್ಸಿಗೆ ಮುದನೀಡುವಂಥದ್ದು. ಯಾವುದೇ ರೀತಿಯ ಭೇದಭಾವವಿಲ್ಲದ ಮಾನವೀಯ ಸಮಾಜದಲ್ಲಿ ಮನಸ್ಸುಗಳು ಎಷ್ಟೊಂದು ಸುಂದರವಾಗಿ ಅರಳುತ್ತವೆ ಎಂಬುದಕ್ಕೆ ಈ ವಚನ ಸಾಕ್ಷಿಯಾಗಿದೆ. ಮಗು ಹುಟ್ಟಿದಾಗ ಮುಗ್ಧವಾಗಿರುತ್ತದೆ. ಮಗು ಬೆಳೆದಂತೆಲ್ಲ ಹೊಸ ಹೊಸ ಅನುಭವಗಳ ಮೂಲಕ ಜ್ಞಾನ ಸಂಪಾದನೆ ಮಾಡುತ್ತ ಹೋಗುತ್ತದೆ. ಆದರೆ ತನ್ನ ಮುಗ್ಧತೆಯನ್ನು ಕಳೆದುಕೊಳ್ಳುತ್ತ ಹೋಗುತ್ತದೆ. ಆದರೆ ಜ್ಞಾನದೊಂದಿಗೆ ಮುಗ್ಧತೆಯನ್ನು ಉಳಿಸಿಕೊಳ್ಳುವ ಕ್ರಮ ಇಲ್ಲಿದೆ.
ಮಾನವನು ಮುಗ್ಧತೆಯಿಂದ ಪ್ರಜ್ಞಾಪೂರ್ಣವಾದ ಮುಗ್ಧತೆಯ ಕಡೆಗೆ ಸಾಗಲು ವಾತಾವರಣ ಸೃಷ್ಟಿಸುವುದೇ ಧರ್ಮ, ಸಂಸ್ಕೃತಿ, ಸಾಹಿತ್ಯ, ಕಲೆ, ಶಿಕ್ಷಣ ಮತ್ತು ನಾಗರಿಕತೆಗಳ ಮೂಲ ಉದ್ದೇಶವಾಗಿರಬೇಕಾಗುತ್ತದೆ. ಶರಣಸಂಕುಲ ಇಂಥ ವಾತಾವರಣವನ್ನು ನಿರ್ಮಿಸಿತ್ತು. ಶರಣರು ಪ್ರಜ್ಞಾಪೂರ್ಣ ಮುಗ್ಧತೆಯನ್ನು ಹೊಂದಿದ್ದರು. ಬುದ್ಧ, ಜೀಸಸ್, ಪೈಗಂಬರ, ಬಸವ ಮುಂತಾದವರು ವಿಶ್ವಮಾನವರಾಗಿ ಬೆಳೆದರು. ಕಾರಣ ಅವರ ಮನಸ್ಸು ಮಗುವಿನ ಮನಸ್ಸಿನಷ್ಟೇ ಪವಿತ್ರವಾಗಿತ್ತು. ಬದುಕಿನ ಕಷ್ಟನಷ್ಟಗಳು, ಒತ್ತಡಗಳು ಮತ್ತು ಸವಾಲುಗಳನ್ನು ಎದುರಿಸಿದ ಈ ಮಹಾತ್ಮರು ಆ ಅನುಭವವನ್ನು ಪ್ರಜ್ಞೆಯ ವಿಸ್ತಾರಕ್ಕಾಗಿ ಬಳಸಿಕೊಂಡರೇ ಹೊರತು ಕಹಿಭಾವ ತಾಳಿ ಮುಗ್ಧತೆಯನ್ನು ಕಳೆದುಕೊಳ್ಳಲಿಲ್ಲ.
 ‘ಕನಿಷ್ಠದಲ್ಲಿ ಹುಟ್ಟಿದರೂ ಶರಣಸಂಕುಲದ ಉತ್ತಮ ವಾತಾವರಣದಲ್ಲಿ ಬೆಳೆದೆ’ ಎಂದು ಹಡಪದಪ್ಪಣ್ಣನವರ ಪುಣ್ಯಸ್ತ್ರೀ ಲಿಂಗಮ್ಮ ಈ ಆತ್ಮನಿವೇದನೆಯ ವಚನದಲ್ಲಿ ಹೇಳುತ್ತಾಳೆ. ಸತ್ಯಶರಣರ ಪಾದಹಿಡಿದು ಅಂದರೆ ಅವರನ್ನು ಅನುಸರಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಂಡಳು. ಆ ಮೂಲಕ ಅರಿವೆಂಬ ಗುರುವನ್ನು ಕಂಡಳು. ಸಾಮರಸ್ಯದ ಲಿಂಗವನ್ನು ಕಂಡಳು. ನಿರಾಕಾರ ಲಿಂಗದ ಸಾಕಾರ ರೂಪವಾದ ಸಮಾಜವೆಂಬ ಜಂಗಮವ ಕಂಡಳು. ಲಿಂಗಕ್ಕೆ ಮಜ್ಜನಕ್ಕೆರೆದ ಪಾದೋದಕವ ಕಂಡಳು. ಗುರು ಲಿಂಗ ಜಂಗಮಕ್ಕೆ ಅರ್ಪಿಸಿದ ನಂತರ ಪವಿತ್ರವಾಗಿ ಬಂದುದೆಂದು ಸ್ವೀಕರಿಸುವ ಆಹಾರಪದಾರ್ಥವಾದ ಪ್ರಸಾದವ ಕಂಡಳು. ಈ ಪ್ರಕಾರವಾಗಿ ಅರಿವು ಹೊಂದಿ ವ್ಯಕ್ತಿತ್ವ ವಿಕಸನಗೊಳ್ಳುತ್ತ ಹೋದಾಗ, ಅಜ್ಞಾನವೆಂಬ ಕತ್ತಲೆ ಕರಗಿಹೋಯಿತು. ತದನಂತರ ಮಂಗಲಮಯವಾದ ಜ್ಞಾನವೆಂಬ ಮಹಾಬೆಳಗಿನಲ್ಲಿ ನಲಿದಾಡುತ್ತ ನಿಜಸುಖವೆಂಬ ಆನಂದ ಅನುಭವಿಸಿದೆ ಎಂದು ಲಿಂಗಮ್ಮ ಹರ್ಷ ವ್ಯಕ್ತಪಡಿಸುತ್ತಾಳೆ. ಹೀಗೆ ಮನುವಾದಿ ಸಮಾಜದಲ್ಲಿ ಕೆಳಮಟ್ಟದಲ್ಲಿದ್ದವರು ಬಸವಣ್ಣನವರ ಪರಿಕಲ್ಪನೆಯ ಸಮಾಜದಲ್ಲಿ ಮೇಲ್ಮಟ್ಟದವರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X