ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸ್ವೀಕಾರ
ಉಡುಪಿ, ಎ.19: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಎ.24ರಂದು ಬೆಳಗ್ಗೆ 11ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರ, 25ರಂದು ಬೆಳಗ್ಗೆ 11ರಿಂದ 12.30ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಹಾಗೂ 26ರಂದು 11ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರ ದಲ್ಲಿ ಸ್ವೀಕರಿಸಲಾಗುವುದು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಾಯುಕ್ತ ಉಡುಪಿ ಪೊಲೀಸ್ ಉಪಾಧೀಕ್ಷಕರು: 0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ 0820-2536661 ಇವರನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ಪೊಲೀಸ್ ವಿಭಾಗ ಕರ್ನಾಟಕ ಲೋ ಕಾಯುಕ್ತ ಇವರ ಪ್ರಕಟಣೆ ತಿಳಿಸಿದೆ.
Next Story