ಉಡುಪಿ ಜೆಡಿಎಸ್ ಅಭ್ಯರ್ಥಿಯಾಗಿ ಗಂಗಾಧರ ಬಿರ್ತಿ ನಾಮಪತ್ರ ಸಲ್ಲಿಕೆ

ಉಡುಪಿ, ಎ. 20: ಉಡುಪಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಬಿರ್ತಿ ಗಂಗಾಧರ ಭಂಡಾರಿ ಇಂದು ನಾಮಪತ್ರ ಸಲ್ಲಿಸಿದರು.
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಆಗಮಿಸಿದ ಬಿರ್ತಿ ಗಂಗಾಧರ ಭಂಡಾರಿ ಬನ್ನಂಜೆಯ ಹಳೆ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ರುವ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯಲ್ಲಿ ಚುನಾವಣಾಧಿಕಾರಿ ಕೆಂಪೆಗೌಡ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್, ಬ್ಲಾಕ್ ಅಧ್ಯಕ್ಷ ಅಬ್ದುಲ್ ಖಾದರ್ ಕುಂಜಾಲು, ಪ್ರದೀಪ್ ಕುಮಾರ್ ಉಪಸ್ಥಿತರಿದರು.
ಇಂದು ಉಡುಪಿ ಹಾಗೂ ಬೈಂದೂರು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಕುಂದಾಪುರ ಹಾಗೂ ಕಾಪು ಕ್ಷೇತ್ರ ಅಭ್ಯರ್ಥಿಗಳು ಎ. 23ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಕಾಪು ಕ್ಷೇತ್ರದ ಅಭ್ಯರ್ಥಿ ಹೆಸರು ಎರಡು ದಿನಗಳಲ್ಲಿ ಅಂತಿಮವಾಗಲಿದೆ ಎಂದು ಯೋಗೀಶ್ ಶೆಟ್ಟಿ ತಿಳಿಸಿದ್ದಾರೆ.
Next Story





