ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಕ್ಬಾಲ್ ಅನ್ಸಾರಿ ನಾಮಪತ್ರ ಸಲ್ಲಿಕೆ

ಗಂಗಾವತಿ,ಎ.20: ಗಂಗಾವತಿ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಶಾಸಕ ಇಕ್ಬಾಲ್ ಅನ್ಸಾರಿ ಶುಕ್ರವಾರ ಮಧ್ಯಾಹ್ನ ತಮ್ಮ ಅಭಿಮಾನಿಗಳ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಈಗಾಗಲೇ ಸುಮಾರು 800 ಕೋಟಿ ರೂ.ಗಳ ವೆಚ್ಚದಲ್ಲಿ ಇಡೀ ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಕಡೆಬಾಗಿಲು ಸೇತುವೆ ಸುಸಜ್ಜಿತ ಸರಕಾರ ಆಸ್ಪತ್ರೆ ಸೇರಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅನೇಕ ಯೋಜನೆ ರೂಪಿಸಿ, ಅನ್ನಭಾಗ್ಯದ ಮೂಲಕ ಬಡವರ ಹಸಿವು ನೀಗಿಸಿದ್ದಾರೆ. ಈ ಎಲ್ಲಾ ಯೋಜನೆಗಳಿಂದ ಜನತೆ ತಮಗೆ ಪುನಃ ಆಶೀರ್ವಾದ ಮಾಡಲಿದ್ದಾರೆ. ಖಂಡಿತ ಮತ್ತೊಮ್ಮೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು, ಮತ್ತೊಮ್ಮೆ ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಎಂದರು.
Next Story





