Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ. 23: ಪುತ್ತೂರು ಪಕ್ಷೇತರ...

ಎ. 23: ಪುತ್ತೂರು ಪಕ್ಷೇತರ ಅಭ್ಯರ್ಥಿಯಾಗಿ ಅಮರನಾಥ ಬಿ.ಕೆ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ20 April 2018 6:27 PM IST
share

ಪುತ್ತೂರು, ಎ. 20: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅಮರನಾಥ ಬಿ.ಕೆ. ಸ್ಪರ್ಧಿಸುತ್ತಿದ್ದು, ಎ.23ರಂದು ತಾನು ನಾಮಪತ್ರ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮರನಾಥ ಅವರು ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಚುನಾಯಿತರಾದವರು ತಮ್ಮ ಸ್ವಂತ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ವಿನಹ ಜನಪರ ಚಿಂತನೆಯಲ್ಲಿ ಕಾರ್ಯ ನಡೆಸುತ್ತಿಲ್ಲ. ಯುವ ಜನಾಂಗದ ಅಭಿವೃದ್ಧಿಗಾಗಿ ಯಾರೂ ಈ ತನಕ ಪ್ರಯತ್ನ ನಡೆಸಿಲ್ಲ. ನಾನು ಪದವಿ ಪಡೆದು 13 ವರ್ಷಗಳು ಕಳೆದರೂ ಈ ತನಕ ಯಾವುದೇ ನೌಕರಿ ಪಡೆಯಲು ಸಾಧ್ಯವಾಗಿಲ್ಲ. ನನ್ನಂತೆ ಪುತ್ತೂರು ತಾಲೂಕಿನಲ್ಲಿ ಸಾವಿರಾರು ಮಂದಿ ಯುವಕರು ಪದವಿ ಪಡೆದರೂ ನಿರುದ್ಯೋಗಿಗಳಾಗಿದ್ದಾರೆ. ಅವರಿಗೆಲ್ಲಾ ಬೆಂಬಲ ನೀಡುವ ನಿಟ್ಟಿನಲ್ಲಿ ತಾನು ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿರುವುದಾಗಿ ಅವರು ತಿಳಿಸಿದರು.

ಪುತ್ತೂರನ್ನು ಕೈಗಾರಿಕಾ ಪ್ರದೇಶವಾಗಿ ಮಾರ್ಪಡಿಸುವುದು, ದೀರ್ಘಾವಧಿ ಕೃಷಿ, ಸಾವಯವ ಕೃಷಿ, ಮಾರುಕಟ್ಟೆ ಆಧಾರಿತ ಕೃಷಿ ಮತ್ತು ರಫ್ತು ಆಧಾರಿತ ಕೃಷಿಗೆ ಪ್ರೋತ್ಸಾಹ ನೀಡುವುದು. ಜಾತಿ, ಧರ್ಮವನ್ನು ಮನೆಗೆ ಸೀಮಿತವಾಗಿರಿಸಿ ಅಭಿವೃದ್ಧಿಯ ಧ್ಯೇಯದೊಂದಿಗೆ ಕೆಲಸ ಮಾಡುವುದು. ಉದ್ಯೋಗ ಸೃಷ್ಟಿಯೊಂದಿಗೆ ನಿರುದ್ಯೋಗ ನಿವಾರಣೆಗೆ ಒತ್ತು ನೀಡುವುದು. ನಗರಾಭಿವೃದ್ಧಿ ಮತ್ತು ಗ್ರಾಮೀಣ ಅಭಿವೃದ್ಧಿ, ಪುತ್ತೂರನ್ನು ಪ್ರವಾಸಿ ಕ್ಷೇತ್ರವಾಗಿಸುವುದು ತನ್ನ ಚುನಾವಣಾ ಪ್ರಣಾಳಿಕೆಯಾಗಿದೆ ಎಂದರು.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ನೋಟಾ ಮತದಾನದಿಂದ ಅಭಿವೃದ್ಧಿ ಶೂನ್ಯವಾಗುತ್ತದೆ. ಯುವ ಜನತೆ ಅಭಿವೃದ್ಧಿ ಪರ ಚಿಂತಕರಿಗೆ ಮತ ಚಲಾವಣೆ ಮಾಡುವುದರಿಂದ ಅವರ ಬದುಕು ಉತ್ತಮವಾಗುತ್ತದೆ. ರಸ್ತೆ ನಿರ್ಮಾಣ ಮತ್ತು ವಿದ್ಯುತ್ ಸೌಲಭ್ಯಗಳು ಮೂಲಭೂತ ಅವಶ್ಯಕತೆಗಳಾಗಿದೆ. ಇದನ್ನು ಮಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ. ಆದರೆ ಇದೀಗ ಇದನ್ನೇ ಅಭಿವೃದ್ಧಿ ಎಂದು ಬಿಂಬಿಸಲಾಗುತ್ತಿದೆ. ಪುತ್ತೂರನ್ನು ಜಿಲ್ಲೆ ಮಾಡುವತ್ತ ಯಾವುದೇ ಜನಪ್ರತಿನಿಧಿಗಳು ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿಯ ಸರಿಯಾದ ಯೋಜನೆ ಇವರಿಗಿಲ್ಲ ಎಂದು ಆರೋಪಿಸಿದ ಅವರು ಪುತ್ತೂರು ನಗರ ಮತ್ತು ವಿಟ್ಲ ನಗರ ವಾಹನ ದಟ್ಟಣೆಯಿಂದ ತತ್ತರಿಸುತ್ತಿದೆ. ಸರಿಯಾದ ಡ್ರೈನೇಜ್ ವ್ಯವಸ್ಥೆಗಳು ಇಲ್ಲಿಲ್ಲ. ರಿಂಗ್ ರಸ್ತೆ ನಿರ್ಮಾಣವಾಗಿಲ್ಲ. ಈ ಎಲ್ಲಾ ಸಮಸ್ಯೆಗಳು ಪರಿಹಾರವಾಗಬೇಕಾಗಿದೆ ಎಂದು ಹೇಳಿದರು.

ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ. ಯಾರು ಒತ್ತಡ ತಂದರೂ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಿಲ್ಲ. ಯುವಜನತೆ ತನ್ನನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಿವೇಕ್ ಕೃಷ್ಣ ಮತ್ತು ರೋಹಿತ್ ಎಂ.ಪಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X