Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾವು ಬಡಪಾಯಿಗಳು ಏನು ಮಾಡಲು ಸಾಧ್ಯ :...

ನಾವು ಬಡಪಾಯಿಗಳು ಏನು ಮಾಡಲು ಸಾಧ್ಯ : ನ್ಯಾ. ಲೋಯಾ ಸೋದರನ ಅಳಲು

ವಾರ್ತಾಭಾರತಿವಾರ್ತಾಭಾರತಿ20 April 2018 7:27 PM IST
share
ನಾವು ಬಡಪಾಯಿಗಳು ಏನು ಮಾಡಲು ಸಾಧ್ಯ : ನ್ಯಾ. ಲೋಯಾ ಸೋದರನ ಅಳಲು

ಹೊಸದಿಲ್ಲಿ, ಎ.20: ನ್ಯಾ. ಲೋಯಾ ನಿಗೂಢ ಸಾವಿನ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಸೂಚಿಸಿರುವ ಲೋಯಾ ಸೋದರ ಶ್ರೀನಿವಾಸ ಲೋಯ, ಈ ಕುರಿತು ಹೇಳಬೇಕಾದ್ದು ಏನೂ ಇಲ್ಲ. ಏನಾಗಿದೆಯೋ ಅದು ಆಗಿ ಹೋಗಿದೆ. ಈಗ ಏನು ಮಾಡಲು ಸಾಧ್ಯ ಎಂದು ಪ್ರತಿಕ್ರಿಯಿಸಿದ್ದಾರೆ.

    ಪ್ರಶಾಂತ್ ಭೂಷಣ್‌ರಂತಹ ವಕೀಲರು ಈ ವಿಷಯದಲ್ಲಿ ನೀಡಿರುವ ಹೇಳಿಕೆಯನ್ನು ಸುಪ್ರೀಂಕೋರ್ಟ್ ಆಲಿಸಿದೆ. ಬಳಿಕ ತನ್ನ ತೀರ್ಪು ನೀಡಿದೆ. ಹಾಗಿರುವಾಗ ನಮ್ಮ ಸ್ಥಾನಮಾನ ಯಾವ ಲೆಕ್ಕ . ನಾವು ಬಹಳ ಸಣ್ಣ ಜನರು ಎಂದು ಶ್ರೀನಿವಾಸ್ ಲೋಯಾ ಹೇಳಿದ್ದಾರೆ. ಈಗ ಈ ವಿಷಯದಲ್ಲಿ ಏನನ್ನೂ ಹೇಳದಿರುವುದೇ ಒಳ್ಳೆಯದು. ಈಗ ಆಡುವ ಮಾತಿನಿಂದ ಏನೂ ಪ್ರಯೋಜನವಾಗದು. ಈ ವಿಷಯದಲ್ಲಿ ನಮಗೆ ಇನ್ನೇನೂ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಈ ಹಿಂದೆ ‘ದಿ ಕ್ಯಾರವಾನ್’ ಮ್ಯಾಗಝಿನ್‌ಗೆ ಸಂದರ್ಶನ ನೀಡಿದ್ದ ನ್ಯಾ. ಲೋಯಾರ ಸಹೋದರಿ ಅನುರಾಧಾ ಬಿಯಾನಿ ತನ್ನ ಸಹೋದರನ ಸಾವಿನ ಸಂದರ್ಭದ ಕುರಿತು ಪ್ರಶ್ನಿಸಿದ್ದರು. ನ್ಯಾಯಮೂರ್ತಿ ಲೋಯಾಗೆ ಭಾರೀ ಮೊತ್ತದ ಲಂಚದ ಆಮಿಷ ಒಡ್ಡಲಾಗಿತ್ತು ಹಾಗೂ ಅವರ ಮೇಲೆ ಮಾನಸಿಕ ಒತ್ತಡ ಹೇರಲಾಗಿತ್ತು ಎಂದು ಇನ್ನೋರ್ವ ಸಂಬಂಧಿ ಆರೋಪಿಸಿದ್ದರು. ಆದರೆ ಈ ಎಲ್ಲಾ ಹೇಳಿಕೆಗಳನ್ನು ಮಹಾರಾಷ್ಟ್ರ ಪೊಲೀಸರು ತಳ್ಳಿಹಾಕಿದ್ದರು.

ಈ ಮಧ್ಯೆ, ಕಳೆದ ಜನವರಿಯಲ್ಲಿ ಹೇಳಿಕೆ ನೀಡಿದ್ದ ಲೋಯಾರವರ ಪುತ್ರ ಅನುಜ್ ಲೋಯಾ, ತನ್ನ ತಂದೆಯ ಸಾವಿನ ಕಾರಣದ ಬಗ್ಗೆ ಕುಟುಂಬಕ್ಕೆ ಯಾವುದೇ ಸಂಶಯವಿಲ್ಲ. ಈ ಹಿಂದೆ ಭಾವನಾತ್ಮಕ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಕೆಲವು ಹೇಳಿಕೆ ನೀಡಿದ್ದಾರೆ. ಆದರೆ ಈಗ ಎಲ್ಲವೂ ಸ್ಪಷ್ಟವಾಗಿದೆ ಎಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X