Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯವರಿಗಿಂತ ನಾನು ಬೆಟರ್ ಹಿಂದೂ:...

ಬಿಜೆಪಿಯವರಿಗಿಂತ ನಾನು ಬೆಟರ್ ಹಿಂದೂ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ20 April 2018 7:48 PM IST
share
ಬಿಜೆಪಿಯವರಿಗಿಂತ ನಾನು ಬೆಟರ್ ಹಿಂದೂ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಎ.20: ಬಿಜೆಪಿಯವರು ಹಿಂದು ವಿರೋಧಿ ಸಿದ್ದರಾಮಯ್ಯ ಎಂದು ಹೇಳುತ್ತಾರೆ. ಇವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮೊದಲು ಹಿಂದೂ ಎಂದು  ಸ್ಪಷ್ಟಪಡಿಸಲಿ. ಅವರು ಒಬ್ಬ ಜೈನ. ನಾನು ಜೈನಿಸಂಗೆ ಸೇರಿಲ್ಲ ಎಂದು ಅವರು ಹೇಳಲಿ ನೋಡೋಣ. ಇವರಿಗಿಂತ ನಾನು ಬೆಟರ್ ಹಿಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಮನುಷ್ಯತ್ವವಿರುವ ಹಿಂದು. ಮಾನವೀಯ ಮೌಲ್ಯಗಳಲ್ಲಿ ನಂಬಿಕೆ ಇಟ್ಟಿರುವ ಹಿಂದು. ಇವರು ಮಾನವೀಯತೆಯೇ ಇಲ್ಲದವರು. ಸತ್ತ ಹೆಣದ ಮೇಲೆ ರಾಜಕೀಯ ಮಾಡುವವರು. ದಕ್ಷಿಣ ಕನ್ನಡದಲ್ಲಿ  ಹಿಂದೂ, ಮುಸ್ಲಿಂ ಇಬ್ಬರೂ ಮೃತಪಟ್ಟಿದ್ದಾರೆ. ಇವರಿಗೆ ಮನುಷತ್ವ ಅನ್ನುವುದು ಇರುವುದೇ ಆಗಿದ್ದರೆ, ಇಬ್ಬರ ಮನೆಗಳಿಗೂ ಭೇಟಿ ನೀಡಬೇಕಿತ್ತು. ಆದರೆ ಇವರು ಹಿಂದೂಗಳ ಮನೆಗೆ ಮಾತ್ರ ಭೇಟಿ ನೀಡುತ್ತಾರೆ. ಇವರಿಗೆ ನಿಜವಾಗಿಯೂ ಮನುಷತ್ವ ಇದೇಯೇ? ನಾನು ಮನುಷ್ಯತ್ವ, ಮಾನವೀಯತೆವುಳ್ಳ ಹಿಂದು. ಇವರಿಗಿಂತ ನಾನು ಬೆಟರ್ ಹಿಂದೂ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದ ಚುನಾವಣೆಯ ಮೇಲೆ ದೇಶದ ಕಣ್ಣು ನೆಟ್ಟಿದೆ. ಲೋಕಸಭಾ ಚುನಾವಣೆಗೆ ಇದು ಮೆಟ್ಟಿಲು. ಈ ಚುನಾವಣೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಅಂತಿಮವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಹೇಳಿದರು.

ನಾವು ಯಾರ ವಿರುದ್ಧವು ಅಪಪ್ರಚಾರ ಮಾಡಿಕೊಂಡು ಮತ ಕೇಳುವುದಿಲ್ಲ. ನಾವು ಮಾಡಿರುವ ಅಭಿವೃದ್ಧಿ, ಸಾಧನೆ, ಹೊಸಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತೇವೆ. ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಜನ ನಮ್ಮ ಪರವಾಗಿದ್ದಾರೆ. ರಾಹುಲ್ ಗಾಂಧಿಯವರ ಜೊತೆ ರಾಜ್ಯದ ಎಲ್ಲಾ ಕಡೆಗಳಲ್ಲೂ ಪ್ರವಾಸ ಮಾಡಿದ್ದೇನೆ. ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಹೋದ ಕಡೆಯಲ್ಲೆಲ್ಲಾ ನಾವು ಮಾಡಿರುವ ಅಭಿವೃದ್ಧಿ ಕುರಿತು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಐದು ವರ್ಷಗಳ ಕಾಲ ಯಾವುದೇ ಭ್ರಷ್ಟಾಚಾರ ಮಾಡದೆ ಕಳಂಕ ರಹಿತ ಆಡಳಿತ ನೀಡಿರುವುದು ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಅನೇಕ ಹೊಸ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಆಡಳಿತ ವಿರೋಧಿ ಅಲೆ ನಮ್ಮ ಮೇಲೆ ಇಲ್ಲ. ಕೆಲವು ಶಾಸಕರಿಗೆ ವಿರೋಧ ಇರಬಹುದು ಅಷ್ಟೇ. ಬಿಜೆಪಿಯವರು ಅಭಿವೃದ್ಧಿ ವಿಚಾರ ಇಟ್ಟುಕೊಂಡು ಮತ ಕೇಳುತ್ತಿಲ್ಲ. ಕ್ಷುಲ್ಲಕ ಆರೋಪಗಳನ್ನು ಮಾಡಿಕೊಂಡು ತಿರುಗುತ್ತಿದ್ದಾರೆ ಎಂದು ಟೀಕಿಸಿದರು.

ಅಮಿತ್ ಶಾ ಹಾಗೂ ಮೋದಿ ನನ್ನನ್ನೇ ಟಾರ್ಗೆಟ್ ಮಾಡಿಕೊಂಡು ಆಧಾರ ರಹಿತ ಮತ್ತು ಅಸಂಬದ್ದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಪ್ರಧಾನಿ 10% ಸರಕಾರ ಎಂದು ಆರೋಪಿಸುತ್ತಾರೆ. ಆರೋಪಕ್ಕೆ ಸಾಕ್ಷಿ ಬೇಕಲ್ಲವೇ ? ಸುಮ್ಮನೆ ಇಂತಹ ಉರುಳಿಲ್ಲದ ಆರೋಪಗಳನ್ನು ಮಾಡುವುದು ಎಷ್ಟು ಸರಿ? ರಾಜ್ಯದ ಜನರನ್ನು ಇವರು ಮೂರ್ಖರು ಎಂದು ತಿಳಿದುಕೊಂಡಿರಬಹುದು. ಆದರೆ ಜನರು ಬುದ್ಧಿವಂತರು. ಇಂತಹ ಆಧಾರ ರಹಿತ ಹೇಳಿಕೆಗಳನ್ನು ನೀಡುವ ಇವರು ಮೂರ್ಖರು ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಅಧಿಕಾರವದಿಯಲ್ಲಿ ಏನು ಮಾಡಿದ್ದರು:  ಕುಮಾರಸ್ವಾಮಿ 20 ತಿಂಗಳ ಆಡಳಿತಾವಧಿಯಲ್ಲಿ ಏನುಮಾಡಿದರು ಎಂಬುದು ಮುಖ್ಯ. ಅದು ಬಿಟ್ಟು ಅಧಿಕಾರಕ್ಕೆ ಬಂದ ನಂತರ ಮಾಡುತ್ತೇನೆ ಎಂದು ಹೇಳುತ್ತಾರೆ. ಇಸ್ರೇಲ್ ಮಾದರಿಯಲ್ಲಿ ಇಲ್ಲಿನ ಕೃಷಿಯನ್ನು ಮಾಡುತ್ತೇನೆ ಎಂದು ಹೇಳುತ್ತಾರೆ. ಅದೆಲ್ಲ ಬರೀ ಸುಳ್ಳು. ಅಧಿಕಾರಕ್ಕಾಗಿ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಜೆಡಿಎಸ್ ನವರು ರಾಜ್ಯದಲ್ಲಿ ಎಂದಿಗೂ ಅಧಿಕಾರಕ್ಕೆ ಬರುವುದಿಲ್ಲ. ಆದರೆ ಅವರು ಅವಕಾಶವಾದಿಗಳು. ಎಲ್ಲಿ ಸರಕಾರ ರಚನೆಗೆ ಅವಕಾಶ ಸಿಗುತ್ತದೊ ಅಲ್ಲಿಗೆ ನೆಗೆಯುತ್ತಾರೆ. ಇನ್ನು ಬಿಜೆಪಿಯವರು ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಮಾಡಿರುವ ಎಲ್ಲಾ ಸರ್ವೇಗಳು ಕಾಂಗ್ರೆಸ್ ಪಕ್ಷದ ಪರವಾದ ವರದಿಗಳನ್ನೇ ನೀಡಿವೆ ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿಯಬೇಕಿಲ್ಲ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿಯವರು ಆರೋಪಿಸುತ್ತಾರೆ. ನನ್ನ ಅವಧಿಯಲ್ಲಿ ಎಷ್ಟು ಅತ್ಯಾಚಾರ, ಕೊಲೆ, ಸುಲಿಗೆ ಗಲಾಟೆಗಳು ನಡೆದಿತ್ತು, ಬಿಜೆಪಿ ಅಧಿಕಾರವದಿಯಲ್ಲಿ ಎಷ್ಟು ನಡೆದಿತ್ತು ಎಂದು ಕೇಂದ್ರದ ಸಿಟ್ ವರದಿ ನೀಡಿದೆ. ಅದರಲ್ಲಿ ಬಿಜೆಪಿ ಅಧಿಕಾರವದಿಯಲ್ಲೇ ಹೆಚ್ಚು ಪ್ರಕರಣಗಳು ನಡೆದಿರುವುದು ಎಂದು ಹೇಳಿದೆ. ಆದರೂ ಬಂಡತನದಿಂದ ಬಿಜೆಪಿಯವರು ನಮ್ಮ ಮೇಲೆ ಅಪಾದಿಸುತ್ತಿದ್ದಾರೆ ಎಂದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ರೈತರ ಮೇಲೆ ಗೋಲಿಬಾರ್ ನಡೆಯಿತು. ನಮ್ಮ ಅವಧಿಯಲ್ಲಿ ನಡೆದ ಒಂದೇ ಒಂದು ಗೋಲಿಬಾರ್ ಪ್ರಕರಣವನ್ನು ತೋರಿಸಲಿ ಎಂದು ಸಿದ್ದರಾಮಯ್ಯ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಇತರೆ 23 ಮಂದಿ ಕೋಮು ಗಲಭೆಯಲ್ಲಿ ಮೃತಪಟ್ಟಿದ್ದಾರೆ. ಅದರಲ್ಲಿ 12 ಮಂದಿ ಆರ್.ಎಸ್.ಎಸ್, ಭಜರಂಗದಳ, ಬಿಜೆಪಿ ಕಾರ್ಯಕರ್ತರು. ಇನ್ನು 11 ಮಂದಿ ಮುಸ್ಲಿಮರು ಹಾಗೂ ಇತರೆ ವರ್ಗದವರು. ಆದರೆ ಇವರು ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ ಎಂದು ಆಪಾದಿಸುತ್ತಾರೆ. ಉತ್ತರ ಪ್ರದೇಶದಲ್ಲೇ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಂತಹದರಲ್ಲಿ ಅಲ್ಲಿನ ಮುಖ್ಯಮಂತ್ರಿ ಆದಿತ್ಯನಾಥ ಇಲ್ಲಿಗೆ ಬಂದು ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳುತ್ತಾರೆ. ಇವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.

ಸಂವಾದದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹದೇಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು, ನಗರ ಕಾರ್ಯದರ್ಶಿ ಸುಬ್ರಮಣ್ಯ, ಸಚಿವ ತನ್ವೀರ್ ಸೇಠ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X