ಕುಂದಾಪುರ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ನಾಮಪತ್ರ ಸಲ್ಲಿಕೆ

ಕುಂದಾಪುರ, ಎ.20: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅ್ಯರ್ಥಿ ಯಾಗಿ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಸತತ ಮೂರು ಬಾರಿ ಬಿಜೆಪಿ ಶಾಸಕರಾಗಿ ಹಾಗೂ ಕಳೆದ ಬಾರಿ ಪಕ್ಷೇತರ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪಕ್ಷದ ನಾಯಕರು ಹಾಗೂ ಕಾರ್ಯ ಕರ್ತರೊಂದಿಗೆ ಕುಂದಾಪುರದ ಮಿನಿ ವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಟಿ. ಬೂಬಾಲನ್ ಅವರಿಗೆ ನಾಮಪತ್ರ ಹಾಗೂ ನಾಮಪತ್ರಕ್ಕೆ ಸಂಬಂಧಿ ಸಿದ ದಾಖಲೆ ಪತ್ರಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಹಿರಿಯ ನ್ಯಾಯವಾದಿ ಟಿ.ಬಿ.ಶೆಟ್ಟಿ, ಮುಖಂಡರಾದ ಸದಾನಂದ ಬಳ್ಕೂರು, ಮಂಜು ಬಿಲ್ಲವ, ಭಾಸ್ಕರ್ ಬಿಲ್ಲವ ಉಪಸ್ಥಿತರಿದ್ದರು.
ನಂತರ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸತತ 5ನೆ ಬಾರಿಗೆ ಪರೀಕ್ಷೆ ಬರೆಯುತ್ತಿದ್ದು, ಈ ಮೊದಲಿನ ಪ್ರತಿ ಪರೀಕ್ಷೆಯಲ್ಲೂ ಅಂಕ ಗಳಿಕೆ ಹೆಚ್ಚಾಗುತ್ತ ಬಂದಿದೆ. ಕಳೆದ ಶಾಸಕತ್ವದ ಅವಧಿಯಲ್ಲಿ 493 ಕೋಟಿ ರೂ. ಅನುದಾನವನ್ನು ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ. ಪಕ್ಷದೊಳಗಿನ ಭಿನ್ನಮತ ಪಕ್ಷದ ಮುಖಂಡರು ಸರಿಪಡಿಸಲಿದ್ದಾರೆ ಎಂದರು.





